• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ: ಶೇ 94.1ರಷ್ಟು ಮಂದಿ ಪಾಸ್,ಏಳು ಮಂದಿ ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

Teju Srinivas by Teju Srinivas
in ರಾಜ್ಯ, ವಿಜಯ ಟೈಮ್ಸ್‌, ಶಿಕ್ಷಣ
ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ: ಶೇ 94.1ರಷ್ಟು ಮಂದಿ ಪಾಸ್,ಏಳು ಮಂದಿ ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ
0
SHARES
9
VIEWS
Share on FacebookShare on Twitter
  • SSLC 2026 ಭರ್ಜರಿ ಫಲಿತಾಂಶ: ಶೇ 94.1 ಪಾಸ್, ಶಿಕ್ಷಣ ಕ್ಷೇತ್ರದಲ್ಲಿ ಹೊಸ ದಾಖಲೆ
  • ಅಧಿಕೃತ ವೆಬ್ಸೈಟ್ ಬಳಸಿ ಫಲಿತಾಂಶ ವೀಕ್ಷಿಸಲು ಮನವಿ ಮಾಡಿದ ಶಿಕ್ಷಣ ಸಚಿವರು
  • ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ , ಉತ್ತರ ಕನ್ನಡಕ್ಕೆ ತೃತೀಯ ಸ್ಥಾನ (SSLC results announced )

Bengaluru : ಬಹುನಿರೀಕ್ಷಿತ ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ 2026 ಫಲಿತಾಂಶ ಇಂದು ಅಧಿಕೃತವಾಗಿ ಪ್ರಕಟಗೊಂಡಿದೆ. (SSLC results announced )

Karnataka School Examination and Assessment Board (KSEAB) ವತಿಯಿಂದ ಪ್ರಕಟಿಸಲಾದ ಈ ಫಲಿತಾಂಶವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ( Madhu Bangarappa ) ಅವರು ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.

ಈ ಬಾರಿ ಒಟ್ಟು ಶೇ 94.1ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಇದು ದಾಖಲೆಯ ಸಾಧನೆ ಎಂದು ಹೇಳಲಾಗಿದೆ.

ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು karresults.nic.in ಹಾಗೂ kseab.karnataka.gov.in ವೆಬ್‌ಸೈಟ್‌ಗಳ ಮೂಲಕ ವೀಕ್ಷಿಸಬಹುದಾಗಿದೆ.

ಈ ವರ್ಷದ ಫಲಿತಾಂಶದಲ್ಲಿ ವಿಶೇಷವಾಗಿ ಗಮನಾರ್ಹ ಸಂಗತಿ ಎಂದರೆ ಏಳು ಮಂದಿ ವಿದ್ಯಾರ್ಥಿಗಳು 625ರಲ್ಲಿ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಟಾಪ್ ಆಗಿದ್ದಾರೆ.

ದಾವಣಗೆರೆಯ ಭರತ್, ಚಿಕ್ಕಮಗಳೂರಿನ ಬೃಂದಾ, ಬೆಂಗಳೂರು ಉತ್ತರದ ಧನುಷ್, ಉಡುಪಿಯ ಪ್ರೀತಂ, ಚಿಕ್ಕೋಡಿಯ ಪ್ರಾರ್ಥನಾ, ವಿಜಯಪುರದ ಸೌಜನ್ಯಾ ಮತ್ತು ರಾಯಚೂರಿನ ಸುಖದೇವ್ ಈ ಸಾಧನೆ ಮಾಡಿದ್ದಾರೆ.

SSLC results announced seven students score 625 out of 625

ಕಳೆದ ವರ್ಷಕ್ಕೆ ಹೋಲಿಸಿದರೆ ಶೇಕಡಾ 80 ರಷ್ಟು ಫಲಿತಾಂಶ ಬಂದಿದ್ದು, ಈ ಬಾರಿ ಶೇಕಡಾ 14 ರಷ್ಟು ಹೆಚ್ಚಳವಾಗಿರುವುದು ದೊಡ್ಡ ಸಾಧನೆಯಾಗಿದೆ ಎಂದು ಸಚಿವರು ಹೇಳಿದ್ದಾರೆ.

ಒಟ್ಟು 7,70,209 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 7,24,794 ಮಂದಿ ಉತ್ತೀರ್ಣರಾಗಿದ್ದಾರೆ. ಬಾಲಕಿಯರು ಈ ಬಾರಿ ಕೂಡ ಮೇಲುಗೈ ಸಾಧಿಸಿದ್ದು, ಶೇ 96.18ರಷ್ಟು ಪಾಸ್ ಆಗಿದ್ದಾರೆ.

ಇನ್ನು ಬಾಲಕರ ಪಾಸ್ ಪ್ರಮಾಣ ಶೇ 91.94 ಆಗಿದೆ. 3,92,922 ಬಾಲಕಿಯರ ಪೈಕಿ 3,77,922 ಮಂದಿ ಉತ್ತೀರ್ಣರಾಗಿದ್ದರೆ, 3,77,287 ಬಾಲಕರ ಪೈಕಿ 3,46,872 ಮಂದಿ ಪಾಸ್ ಆಗಿದ್ದಾರೆ.

ಜಿಲ್ಲಾವಾರು ಫಲಿತಾಂಶಗಳಲ್ಲಿಯೂ ಸ್ಪರ್ಧಾತ್ಮಕ ವಾತಾವರಣ ಕಂಡುಬಂದಿದೆ.

ದಕ್ಷಿಣ ಕನ್ನಡ ಜಿಲ್ಲೆ ಶೇ 98.40ರಷ್ಟು ಫಲಿತಾಂಶದೊಂದಿಗೆ ಮೊದಲ ಸ್ಥಾನ ಪಡೆದಿದ್ದು, ಉಡುಪಿ ಜಿಲ್ಲೆ ಶೇ 98.18ರೊಂದಿಗೆ ಎರಡನೇ ಸ್ಥಾನದಲ್ಲಿದೆ

ಉತ್ತರ ಕನ್ನಡ ಜಿಲ್ಲೆ ಶೇ 98.09ರೊಂದಿಗೆ ಮೂರನೇ ಸ್ಥಾನ ಪಡೆದುಕೊಂಡಿದೆ.

ಹಾಸನ, ಮಂಡ್ಯ, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳು ಉತ್ತಮ ಸಾಧನೆ ತೋರಿವೆ. ಕಲಬುರಗಿ ಕೊನೆಯ ಸ್ಥಾನದಲ್ಲಿದೆ.

ಇನ್ನು ಪರೀಕ್ಷಾ ವ್ಯವಸ್ಥೆಯಲ್ಲಿ ಈ ಬಾರಿ ಕೆಲವು ಬದಲಾವಣೆಗಳನ್ನೂ ಮಾಡಲಾಗಿದೆ. (SSLC results announced )

ಉತ್ತಮ ಫಲಿತಾಂಶದ ಹಿನ್ನೆಲೆಯಲ್ಲಿ ಮೂರನೇ ಪರೀಕ್ಷೆಯನ್ನು ರದ್ದುಪಡಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಆದರೆ ಮೇ 18ರಿಂದ ಮೇ 25ರವರೆಗೆ ಎರಡನೇ ಪರೀಕ್ಷೆ ನಡೆಯಲಿದೆ. (SSLC results announced )

ವಿದ್ಯಾರ್ಥಿಗಳಿಗೆ ಫಲಿತಾಂಶವನ್ನು ಸುಲಭವಾಗಿ ತಿಳಿಯಲು ಎಸ್‌ಎಂಎಸ್ ಹಾಗೂ ಮೊಬೈಲ್ ಆ್ಯಪ್ ವ್ಯವಸ್ಥೆಯನ್ನೂ ಒದಗಿಸಲಾಗಿದೆ.

ಒಟ್ಟಾರೆ, ಈ ವರ್ಷದ ಎಸ್‌ಎಸ್‌ಎಲ್‌ಸಿ ಫಲಿತಾಂಶವು ವಿದ್ಯಾರ್ಥಿಗಳ ಶ್ರಮ ಮತ್ತು ಶಿಕ್ಷಣ ವ್ಯವಸ್ಥೆಯ ಗುಣಮಟ್ಟವನ್ನು ಪ್ರತಿಬಿಂಬಿಸುವ ಮಹತ್ವದ ಸಾಧನೆಯಾಗಿದೆ.

ಇದನ್ನು ಓದಿ: https://vijayatimes.com/new-rules-for-online-gaming-from-may-1/

Tags: "KarnatakakseabMadhu Bangaraparesultsslc

Related News

ಇಂದು ದೇಶಾದ್ಯಂತ ಮೆಡಿಕಲ್ ಶಾಪ್ ಬಂದ್‌ : ಅಗತ್ಯ ಔಷಧಿಗಾಗಿ ವಿಶೇಷ ವ್ಯವಸ್ಥೆ
ದೇಶ-ವಿದೇಶ

ಇಂದು ದೇಶಾದ್ಯಂತ ಮೆಡಿಕಲ್ ಶಾಪ್ ಬಂದ್‌ : ಅಗತ್ಯ ಔಷಧಿಗಾಗಿ ವಿಶೇಷ ವ್ಯವಸ್ಥೆ

May 20, 2026
ಅಮೆರಿಕದ ‘ಆಪರೇಶನ್ ಎಪಿಕ್ ಫ್ಯೂರಿ’ಗೆ ಭಾರೀ ಹೊಡೆತ: F-35 ಸೇರಿ 42 ಯುದ್ಧ ವಿಮಾನ, ಡ್ರೋನ್‌ಗಳಿಗೆ ಹಾನಿ
ದೇಶ-ವಿದೇಶ

ಅಮೆರಿಕದ ‘ಆಪರೇಶನ್ ಎಪಿಕ್ ಫ್ಯೂರಿ’ಗೆ ಭಾರೀ ಹೊಡೆತ: F-35 ಸೇರಿ 42 ಯುದ್ಧ ವಿಮಾನ, ಡ್ರೋನ್‌ಗಳಿಗೆ ಹಾನಿ

May 20, 2026
ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ವಾಹನ ಸವಾರರಿಗೆ ಶಾಕ್
ಪ್ರಮುಖ ಸುದ್ದಿ

ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ವಾಹನ ಸವಾರರಿಗೆ ಶಾಕ್

May 19, 2026
ರಾಜ್ಯ ಸರ್ಕಾರದ ಮೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಾಧನ ಸಮಾವೇಶ: ಗಿನ್ನೆಸ್ ದಾಖಲೆ ಬರೆಯಲು ಸಜ್ಜಾದ ತುಮಕೂರು
ಪ್ರಮುಖ ಸುದ್ದಿ

ರಾಜ್ಯ ಸರ್ಕಾರದ ಮೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಾಧನ ಸಮಾವೇಶ: ಗಿನ್ನೆಸ್ ದಾಖಲೆ ಬರೆಯಲು ಸಜ್ಜಾದ ತುಮಕೂರು

May 19, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.