Visit Channel

ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ

download

ಬೆಂಗಳೂರು, ಆ. 06: ಕೊರೊನಾ ನಡುವೆಯೂ ರಾಜ್ಯದಲ್ಲಿ ಯಶಸ್ವಿಯಾಗಿ ಎಸ್. ಎಸ್. ಎಲ್. ಸಿ  ಪರೀಕ್ಷೆ ನಡೆಸಿದ್ದ ರಾಜ್ಯ ಸರ್ಕಾರ ಇದೀಗ ಫಲಿತಾಂಶ ಬಿಡುಗಡೆಗೆ ದಿನಾಂಕ ಪ್ರಕಟಗೊಳಿಸಿದೆ.

ಶೈಕ್ಷಣಿಕ ಹಂತದ ಪ್ರಮುಖ ಘಟ್ಟವಾದ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶಕ್ಕೆ ಕೊನೆಗೂ ಮೊಹೂರ್ತ ಫಿಕ್ಸ ಆಗಿದ್ದು, ಆಗಸ್ಷ್ 07 ರಂದು ಫಲಿತಾಂಶ ಪ್ರಕಟಿಸುವುದಾಗಿ ಎಸ್ ಎಸ್ ಎಲ್ ಸಿ ಬೋರ್ಡ ನಿರ್ದೇಶಕಿ ವಿ. ಸುಮಂಗಲ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಅವರು ಫಲಿತಾಂಶ ಹಿನ್ನಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಪ್ರಧಾನ ಕಾರ್ಯದರ್ಶಿ ಅವರಿಗೆ ಇಗಾಗಲೇ ಫಲಿತಾಂಶವನ್ನು ನೀಡಲಾಗಿದೆ. ಹಾಗೂ ಮುಖ್ಯಮಂತ್ರಿ ಬಸಾವರಾಜ ಬೊಮ್ಮಾಯಿ ಅವರ ಜೊತೆ ಚರ್ಚಿಸಲಾಗಿದ್ದು ನಾಳೆ ಫಲಿತಾಂಶ ಬಿಡಿಗಡೆಗೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.

ಇತಿಹಾಸಾದಲ್ಲಿ ಮೊದಲ ಬಾರಿಗೆ ಕೇವಲ 2 ದಿನ ನಡೆದ ಪರೀಕ್ಷೆ

ಸುಮಾರು ೧ ವರ್ಷದಿಂದ ರಾಜ್ಯದಲ್ಲಿ ಕೊರೊನಾ ಹಾವಳಿ ಹೆಚ್ಚಿದ್ದ ಕಾರಣ ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆ ಕೇವಲ ೨ ದಿನ ಮಾತ್ರ ನಡೆದು ಹೊಸ ಇತಿಹಾಸ ಕೂಡ ನಿರ್ಮಾಣವಾಗಿತ್ತು. ಜೊತೆಗೆ ಪರೀಕ್ಷೆ ಬರೆದ ಎಲ್ಲರನ್ನು ಕೂಡ ಉತ್ತೀರ್ಣ ಗೊಳಿಸುವುದಾಗಿ ಮಾಜಿ ಶಿಕ್ಷಣ ಸಚಿವ ಎಸ್. ಸುರೇಶ ಕುಮಾರ್ ಸ್ಪಷ್ಟ ಪಡಿಸಿದ್ದರು.ಹಾಗಾಗಿ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಎಸ್ ಎಸ್ ಎಲ್ ಸಿ  ಪರೀಕ್ಷೆಯ ಬರೆದ  ಎಲ್ಲರೂ ಕೂಡ ಪಾಸ್ ಆಗಿ ಇತಿಹಾಸ ನಿರ್ಮಿಸುವಂತಹ ಫಲಿತಾಂಶ ಇದಾಗಲಿದೆ. ಈ ಬಾರಿ ರಾಜ್ಯದಲ್ಲಿ ಸುಮಾರು 8.76 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಫಲಿತಾಂಶ ಈ ಕೆಳಗಿನ ಜಾಲತಾಣಗಳಲ್ಲಿ ವೀಕ್ಷಿಸಬಹುದಾಗಿದೆ

www.sslc.karnataka.gov.in karresults.nic.in

www.kseeb.kar.nic.in 

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.