ಮಂಗಳೂರು, ಮಾ. 01: ಎಸ್‌ಎಸ್‌ಎಲ್‌ಸಿ ಪರೀಕ್ಷೆ ದಿನಾಂಕದ ಅಂತಿಮ ಪಟ್ಟಿಯನ್ನು ಇನ್ನೆರಡು ದಿನದಲ್ಲಿ ಪ್ರಕಟಿಸಲಾಗುವುದು ಎಂದು ಸಚಿವ ಸುರೇಶ್‌ಕುಮಾರ್ ತಿಳಿಸಿದ್ದಾರೆ.
ಶನಿವಾರ ಕುದ್ಮುಲ್ ರಂಗರಾವ್ ಟೌನ್ ಹಾಲ್‌ನಲ್ಲಿ ನಡೆದ ಪ್ರೌಢ ಶಾಲಾ ಶಿಕ್ಷಕರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ದಿನಾಂಕಕ್ಕೆ ಸಂಬಂಧಿಸಿದಂತೆ ತಾತ್ಕಾಲಿಕ ಪಟ್ಟಿ ಬಿಡುಗಡೆ ಮಾಡಲಾಗಿತ್ತು. ಅಂತಿಮ ಪಟ್ಟಿಯನ್ನು ಇನ್ನೆರಡು ದಿನದಲ್ಲಿ ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.