ಸ್ಯಾಂಟ್ರೋ ರವಿ, ಮಂಜುನಾಥ್ ಕೆ.ಎಸ್ ಅಲಿಯಾಸ್ ಕಿರಣ್ ಆಲಿಯಾಸ್ ಸ್ಯಾಂಟ್ರೋ ರವಿ (53) ಈತ ಮಂಡ್ಯದ ನಗರದಿಂದ ಕೂಗಳತೆ ದೂರದಲ್ಲಿರುವ ಹೊಳಲು ಗ್ರಾಮದವನು.

ಸ್ಯಾಂಟ್ರೋ ರವಿ ಈತನ ತಂದೆ ಅಬಕಾರಿ ಇಲಾಖೆಯಲ್ಲಿ (ಡಿವೈಎಸ್‌ಪಿ) ಉಪ ಅಧೀಕ್ಷಕ ಶ್ರೇಣಿಯ ಅಧಿಕಾರಿಯಾಗಿದ್ದರು. ಆದ್ರೆ ಪಿಯುಸಿ ಕಲಿತಿದ್ದ ರವಿ ಆಗಿದ್ದು ಕುಖ್ಯಾತ ಪಿಂಪ್ !

ಈತನ ಕಸುಬೇ ಹೆಣ್ಣು ಮಕ್ಕಳನ್ನು ಅಪಹರಿಸುವುದು. ಹೆಣ್ಣು ಮಕ್ಕಳನ್ನು ಪ್ರೀತಿಸುವುದಾಗಿ ನಂಬಿಸಿ, ಮದುವೆಯ ನಾಟಕವಾಡಿ ಆನಂತರ(stantro ravi) ಅವರನ್ನು ಪ್ರಭಾವಿಗಳ ಹತ್ತಿರ ವೇಶ್ಯಾವಾಟಿಕೆಗೆ ತಳ್ಳುವುದು ಈತನ ಕೆಲಸ.

1987ರಲ್ಲಿ ಧರ್ಮಸ್ಥಳಕ್ಕೆ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಮದುವೆಯಾಗಿ, ಸಿಕ್ಕಿಬಿದ್ದು ಮೊದಲ ಬಾರಿಗೆ ಬಂಧನಕ್ಕೊಳಗಾಗಿದ್ದ. ಆ ಬಳಿಕ ಈತನ ವಿರುದ್ಧ ಹತ್ತಾರು ಪ್ರಕರಣಗಳು ದಾಖಲಾಗಿವೆ.

ಮೈಸೂರನ್ನು ತನ್ನ ಕಾರ್ಯಕ್ಷೇತ್ರ ಮಾಡಿಕೊಂಡಿದ್ದ ಈತ ರಾಜಕಾರಣಿಗಳಿಗೆ, ಅಧಿಕಾರಿಗಳಿಗೆ ಹೆಣ್ಣು ಮಕ್ಕಳನ್ನು ವೇಶ್ಯಾವಾಟಿಕೆ ಕಳಿಸುವ ಅನೈತಿಕ ದಂಧೆಗಿಳಿದಿದ್ದ. ಈತನ ವಿರುದ್ಧ ಗೂಂಡಾ ಕಾಯ್ದೆಯೂ ಜಾರಿಯಾಗಿತ್ತು.

ಸ್ಯಾಂಟ್ರೋ ರವಿ ದಲಿತ-ಬುಡಕಟ್ಟು ಜನಾಂಗದ ಹೆಣ್ಣು ಮಕ್ಕಳಿಗೆ ಮರಳು ಮಾಡಿ ಉದ್ಯೋಗ ಕೊಡಿಸುವ ಭರವಸೆ ನೀಡಿ ಅವರನ್ನು ಮಾರಾಟ ಮಾಡುತ್ತಿದ್ದ.

2004ರಲ್ಲಿ ಸ್ಯಾಂಟ್ರೋ ರವಿ ಜೈಲು ಸೇರುವ ಸಮಯದಲ್ಲಿ ಈತನ ಹೆಂಡತಿ ಚಂದ್ರಿಕಾರವರ ಖಾತೆಯಲ್ಲಿ 22 ಲಕ್ಷ ರೂ ಇತ್ತು ಎನ್ನಲಾಗಿದೆ. 2006ರಲ್ಲಿ ಜೈಲಿನಿಂದ ಹೊರಬಂದಾಗ ಹಣ ಕೊಡಲು ಚಂದ್ರಿಕಾ ನಿರಾಕರಿಸಿರುವ ಕಾರಣ ಕೊಂದು ಹಾಕಿದ್ದಾನೆ.

2000 ಇಸವಿಯಿಂದ 2014ರವರೆಗೆ ಆತನ ವಿರುದ್ಧ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ, ಕಳ್ಳ ಸಾಗಣಿಕೆ, ವಂಚನೆ, ಕ್ರಿಮಿನಲ್ ಆರೋಪದ ಮೇಲೆ ಹತ್ತಾರು ಪ್ರಕರಣಗಳನ್ನು ಮೈಸೂರಿನಲ್ಲಿರುವ ಒಡನಾಡಿ ಸಂಸ್ಥೆ ದಾಖಲಿಸಿತ್ತು.