ಕಾಂಗ್ರೆಸ್ಸಿಗರಿಗೇಕೆ(Congress) ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ? ಶಿವಮೊಗ್ಗದ(Shivamogga) ಚಾಕು ಇರಿತ ಪ್ರಕರಣದ ಆರೋಪಿಗಳು ಪೊಲೀಸರ ಮೇಲೆಯೇ ಚಾಕು ತೋರಿಸಿ ಬೆದರಿಸಿದ್ದಾರೆ. ಇದು ಸಿದ್ದರಾಮಯ್ಯ(Siddaramaiah) ಮತ್ತು ಕಾಂಗ್ರೆಸ್ ಪಕ್ಷ ಮತಾಂಧರ, ಜಿಹಾದಿಗಳ ಮೇಲೆ ಹೊಂದಿರುವ ಮಮಕಾರವೇ ಇದಕ್ಕೆ ನೇರ ಕಾರಣ ಎಂದು ರಾಜ್ಯ ಬಿಜೆಪಿ(State BJP) ಟೀಕಿಸಿದೆ.
ಈ ಕುರಿತು ಸರಣಿ ಟ್ವೀಟ್(Tweet) ಮಾಡಿರುವ ಬಿಜೆಪಿ, ಈ ಹಿಂದೆ ಡಿಜೆ ಹಳ್ಳಿ, ಹುಬ್ಬಳ್ಳಿ, ದಕ್ಷಿಣ ಕನ್ನಡ ಹಾಗೂ ಇನ್ನಿತರ ಜಿಲ್ಲೆಗಳಲ್ಲಿ ಶಾಂತಿ ಕದಡಲು ಪ್ರಯತ್ನಿಸಿದ ಮತಾಂಧ ಜಿಹಾದಿ ಶಕ್ತಿಗಳನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿ, ಷಡ್ಯಂತ್ರವನ್ನು ಹತ್ತಿಕ್ಕಲಾಗಿದೆ. ಸಮಾಜ ಘಾತುಕ ಶಕ್ತಿಗಳನ್ನು ಬಗ್ಗುಬಡಿಯಲು ಬಿಜೆಪಿ ಸರ್ಕಾರ ಬದ್ಧವಾಗಿದೆ ಎಂದಿದೆ.
ಶಿವಮೊಗ್ಗ ಚೂರಿ ಇರಿತ ಪ್ರಕರಣ ಸಂಬಂಧಿಸಿದಂತೆ ಮೂರು ಜನ ಆರೋಪಿಗಳಾದ ನದೀಮ್, ಅಬ್ದುಲ್ ರೆಹಮನ್ ಮತ್ತು ಜಬಿಯುಲ್ಲ ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳ ಬಂಧನ ಕಾರ್ಯಾಚರಣೆ ವೇಳೆ ಪೊಲೀಸರ ವಿರುದ್ಧ ಚಾಕು ಬೀಸಿದ ಆರೋಪಿಯ ಕಾಲಿಗೆ ಗುಂಡೇಟು ಹೊಡೆಯಲಾಗಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ ಎಂದು ಬಿಜೆಪಿ ತಿಳಿಸಿದೆ.
ಇನ್ನು ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್(Veera Savarkar) ಮತ್ತು ಟಿಪ್ಪು ಸುಲ್ತಾನ್(Tippu Sultan) ಫ್ಲೆಕ್ಸ್ ಅಳವಡಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಸೋಮವಾರ ಘರ್ಷಣೆ ನಡೆದಿದೆ. ಈ ವೇಳೆ ಶಿವಮೊಗ್ಗದ ಗಾಂಧಿ ಬಜಾರ್ ನಲ್ಲಿ ಪ್ರೇಮ್ ಸಿಂಗ್ ಎಂಬ ವ್ಯಕ್ತಿಗೆ ಚಾಕುವಿನಿಂದ ಇರಿಯಲಾಗಿತ್ತು. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದು, ಬಂಧಿತ ನಾಲ್ವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 307 (ಕೊಲೆ ಯತ್ನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.