ಮೂಲ ಕಾಂಗ್ರೆಸ್ಸಿಗರಿಗೆ ಈಗ ಸಿದ್ದರಾಮಯ್ಯ ಚಾಕರಿ ಮಾಡುವ ಸುಯೋಗ : ಬಿಜೆಪಿ

BJP

ಮುಖ್ಯಮಂತ್ರಿ(Chiefminister) ಸ್ಥಾನದ ಕನಸು ಕಾಣುತ್ತಿರುವ ಮಲ್ಲಿಕಾರ್ಜುನ ಖರ್ಗೆ(Mallikarjun Kharghe) ಅವರು ಮತ್ತೋರ್ವ ಸಿಎಂ ಕುರ್ಚಿಯ ಕನಸುಗಾರ ಸಿದ್ದರಾಮಯ್ಯ(Siddaramaiah) ಅವರ “ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಸಾಧನೆ”ಎಂಬ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಮೂಲ ಕಾಂಗ್ರೆಸ್ಸಿಗರಿಗೆ ಈಗ ಸಿದ್ದರಾಮಯ್ಯ ಅವರ ಚಾಕರಿ ಮಾಡುವ ಸುಯೋಗ ಎಂದು ರಾಜ್ಯ ಬಿಜೆಪಿ(State BJP) ಲೇವಡಿ ಮಾಡಿದೆ.

“ಕಾಂಗ್ರೆಸ್‌ ಕಲಹ” ಎಂಬ ಹ್ಯಾಷ್‌ ಟ್ಯಾಗ್(Hashtag) ಬಳಸಿ, ಸರಣಿ ಟ್ವೀಟ್‌(Tweet) ಮಾಡಿರುವ ಬಿಜೆಪಿ, ಸಿದ್ದರಾಮೋತ್ಸವದ ಬಗ್ಗೆ ಕಾಂಗ್ರೆಸ್ಸಿನಲ್ಲಿ ಅಸಹನೆ, ಅಸಹಿಷ್ಣುತೆಯ ಅಲೆ ಜೋರಾಗಿಯೇ ಬೀಸುತ್ತಿದೆ. ಕಾಂಗ್ರೆಸ್ಸಿನಲ್ಲೀಗ ವಲಸಿಗ ಸಿದ್ದರಾಮಯ್ಯ ಆರಾಧನೆ ನಡೆಯುತ್ತಿದೆ. ಮೂಲ ಕಾಂಗ್ರೆಸ್ಸಿಗರಿಗೆ ಈಗ ಸಿದ್ದರಾಮಯ್ಯ ಅವರ ಚಾಕರಿ ಮಾಡುವ ಸುಯೋಗ. ಮೂಲ ಕಾಂಗ್ರೆಸ್ಸಿಗರು ಮೂಕಪ್ರೇಕ್ಷಕರಾಗಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ರೇಸ್ನಲ್ಲಿರುವ ನಾಯಕರು ಯಾರು ಎಂಬುದನ್ನು ಖುದ್ದು ಬಿ.ಕೆ. ಹರಿಪ್ರಸಾದ್ ಬಯಲು ಮಾಡಿದ್ದಾರೆ.

ಇದು ಸಿದ್ದರಾಮಯ್ಯ ಅವರಿಗೆ ನೀಡಲಾದ ಎಚ್ಚರಿಕೆ ಗಂಟೆಯೋ ಅಥವಾ ಸಿದ್ದರಾಮಯ್ಯಗೆ ಪ್ರತಿಸ್ಪರ್ಧಿಗಳ ಸೃಷ್ಠಿಯೋ? ಎಂದು ಪ್ರಶ್ನಿಸಿದೆ. ಸಿದ್ದರಾಮಯ್ಯ ಅವರ ಬಗ್ಗೆ ಇರುವ ಅಸಮಾಧಾನವನ್ನು ಪರಿಷತ್ ವಿಪಕ್ಷ ನಾಯಕ ಹರಿಪ್ರಸಾದ್ ಈ ರೀತಿ ಹೊರ ಹಾಕಿದ್ದಾರೆ. ಅಧಿಕಾರದಾಹಿ ಸಿದ್ದರಾಮಯ್ಯ ವಿರುದ್ಧ ಸಹನೆಯ ಕಟ್ಟೆ ಒಡೆದಿದೆ. ಹರಿಪ್ರಸಾದ್ ಮೂಲ ಕಾಂಗ್ರೆಸ್ಸಿಗ, ವಲಸಿಗ ಸಿದ್ದರಾಮಯ್ಯ ಅವರನ್ನು ಎಷ್ಟು ವರ್ಷಗಳ ಕಾಲ ಸಹಿಸಿಕೊಳ್ಳಲು ಸಾಧ್ಯ? ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ನಲ್ಲಿ ವಲಸಿಗ ಮತ್ತು ಮೂಲ ಕಾಂಗ್ರೆಸ್ಸಿಗರ ನಡುವೆ ಭಿನ್ನಮತ ಸ್ಪೋಟಗೊಳ್ಳಲಿದೆ.

ಮುಖ್ಯಮಂತ್ರಿ ಹುದ್ದೆಗಾಗಿ ಭಾರೀ ಪೈಪೋಟಿ ನಡೆಯಲಿದೆ. ಮೂಲ ಕಾಂಗ್ರೆಸ್ಸಿಗರೆಲ್ಲರೂ, ವಲಸಿಗ ಕಾಂಗ್ರೆಸ್ಸಿಗ ಸಿದ್ದರಾಮಯ್ಯ ವಿರುದ್ದ ಬಂಡಾಯ ಸೃಷ್ಟಿ ಮಾಡಲಿದ್ದಾರೆ. ಮೂಲ ಕಾಂಗ್ರೆಸ್ಸಿಗರು, ವಲಸಿಗ ಸಿದ್ದರಾಮಯ್ಯ ಅವರನ್ನು ಎಷ್ಟು ವರ್ಷಗಳ ಕಾಲ ಸಹಿಸಿಕೊಳ್ಳಲು ಸಾಧ್ಯ? ಎಂದು ಬಿಜೆಪಿ ಪ್ರಶ್ನಿಸಿದೆ.

Exit mobile version