English English Kannada Kannada

ನಾಯಕತ್ವ ಬದಲಾವಣೆ ಪ್ರಹಸನಕ್ಕೆ ತೆರೆ: ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದ ರಾಜ್ಯ ಬಿಜೆಪಿ ಉಸ್ತುವಾರಿ

ನಾಯಕತ್ವ ಬದಲಾವಣೆ ಕುರಿತು ಯಾವುದೇ ಚರ್ಚೆಗಳು ನಡೆದಿಲ್ಲ. ಯಡಿಯೂರಪ್ಪ ಉತ್ತಮವಾಗಿ ಕೆಲಸ ಮಾಡುತ್ತಿದ್ದು, ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲಗಳು ಇಲ್ಲ. ಪಕ್ಷ ಸಂಘಟನೆ ಮತ್ತು ಕೋವಿಡ್‌ ನಿರ್ವಹಣೆ ಕುರಿತು ಮಾತ್ರ ಚರ್ಚೆ ನಡೆಸಲಾಗಿದೆ ಎಂದು ಬುಧವಾರ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.
Share on facebook
Share on google
Share on twitter
Share on linkedin
Share on print

ಬೆಂಗಳೂರು,ಜೂ.17: ರಾಜ್ಯ ಬಿಜೆಪಿಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ನಾಯಕತ್ವ ಗೊಂದಲಕ್ಕೆ ತೆರೆ ಬಿದ್ದಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.

ನಾಯಕತ್ವ ಬದಲಾವಣೆ ಕುರಿತು ಯಾವುದೇ ಚರ್ಚೆಗಳು ನಡೆದಿಲ್ಲ. ಯಡಿಯೂರಪ್ಪ ಉತ್ತಮವಾಗಿ ಕೆಲಸ ಮಾಡುತ್ತಿದ್ದು, ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲಗಳು ಇಲ್ಲ. ಪಕ್ಷ ಸಂಘಟನೆ ಮತ್ತು ಕೋವಿಡ್‌ ನಿರ್ವಹಣೆ ಕುರಿತು ಮಾತ್ರ ಚರ್ಚೆ ನಡೆಸಲಾಗಿದೆ ಎಂದು  ಬುಧವಾರ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಕೋವಿಡ್ ಸಂಕಷ್ಟದಲ್ಲಿರುವವರಿಗೆ ಯಡಿಯೂರಪ್ಪ ಉತ್ತಮವಾಗಿ ಸ್ಪಂದಿಸಿದ್ದಾರೆ.   ಮೊದಲ ಹಂತದಲ್ಲಿ 1,250 ಕೋಟಿ ರೂ. ಹಾಗೂ ಎರಡನೇ ಹಂತದಲ್ಲಿ 500 ಕೋಟಿ ರೂ.ವಿಶೇಷ ಪ್ಯಾಕೇಜ್ ಘೋಷಿಸುವ ಮೂಲಕ ಜನರ ಸಂಕಷ್ಟಗಳಿಗೆ ಸ್ಪಂದಿಸಿದ್ದಾರೆ ಎಂದು ಯಡಿಯೂರಪ್ಪ ಆಡಳಿತದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

Submit Your Article