ನವದೆಹಲಿ : ಬಿಜೆಪಿಯ(BJP) ರಾಷ್ಟ್ರೀಯ ಸಂಸದೀಯ ಮಂಡಳಿಗೆ ಬಿ.ಎಸ್.ಯಡಿಯೂರಪ್ಪನವರನ್ನು(BS Yedurappa) ನೇಮಕ ಮಾಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ(JP Nadda) ಆದೇಶ ಹೊರಡಿಸಿದ್ದಾರೆ. ಸಂಸದೀಯ ಮಂಡಳಿ, ಬಿಜೆಪಿಯಲ್ಲಿ ಅತ್ಯುನ್ನತ ನಿರ್ಧಾರಗಳನ್ನು ಕೈಗೊಳ್ಳುವ ಸಮಿತಿಯಾಗಿದೆ. ಈ ಸಮಿತಿಗೆ ಸೇರ್ಪಡೆಯಾಗುವ ಮೂಲಕ ಯಡಿಯೂರಪ್ಪನವರು ರಾಜಕೀಯವಾಗಿ ಮತ್ತಷ್ಟು ಪ್ರಬಲರಾದರು ಎನ್ನಲಾಗುತ್ತಿದೆ.

ಇನ್ನೊಂದೆಡೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಬಿಜೆಪಿಯ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಮಂಡಳಿಯಿಂದ ಕೈಬಿಡಲಾಗಿದೆ. ಆದರೆ ದೇವೇಂದ್ರ ಫಡ್ನವಿಸ್ ಮತ್ತು ಬಿ.ಎಸ್. ಯಡಿಯೂರಪ್ಪ ಅವರನ್ನು ಹೊಸದಾಗಿ ಸೇರಿಸಿಕೊಳ್ಳಲಾಗಿದೆ. ಇನ್ನು ಸಂಸದೀಯ ಮಂಡಳಿಯಲ್ಲಿ ಉತ್ತರಪ್ರದೇಶ(UttarPradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(Yogi Adityanath) ಅವರಿಗೆ ಸ್ಥಾನ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಅವರಿಗೆ ಸ್ಥಾನ ಲಭಿಸಿಲ್ಲ.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸಂಸದೀಯ ಮಂಡಳಿಗೆ ಸೇರಿಸಲಾಗಿದ್ದು, ಸಂಸದೀಯ ಮಂಡಳಿಯು ಬಿಜೆಪಿಯ ಉನ್ನತ ಸಂಸ್ಥೆಯಾಗಿದೆ. ಮುಖ್ಯಮಂತ್ರಿಗಳ ನೇಮಕ, ರಾಜ್ಯಪಾಲರ ನೇಮಕ, ರಾಜ್ಯಾಧ್ಯಕ್ಷರ ನೇಮಕ, ಟಿಕೇಟ್ ನೀಡುವುದು ಸೇರಿದಂತೆ ಬಿಜೆಪಿ ಪಕ್ಷದ ಎಲ್ಲ ಪ್ರಮುಖ ನಿರ್ಣಯಗಳನ್ನು ಸಂಸದೀಯ ಮಂಡಳಿ ನಿರ್ಧರಿಸುತ್ತದೆ.

ಇನ್ನು ಈ ಸಮಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi), ಗೃಹ ಸಚಿವ ಅಮಿತ್ ಶಾ(Amit Shah), ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಅಸ್ಸಾಂನ ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೋನೋವಾಲ್, ದೇವೇಂದ್ರ ಫಡ್ನವೀಸ್, ಬಿ.ಎಸ್.ಯಡಿಯೂರಪ್ಪ, ಬಿ.ಎಲ್. ಸಂತೋಷ, ಕೇಂದ್ರ ಸಚಿವ ಭೂಪೇಂದರ್ ಯಾದವ್, ಓಂ ಮಾಥುರ್, ವನತಿ ಶ್ರೀನಿವಾಸನ್,
ಮಾಜಿ ಕೇಂದ್ರ ಸಚಿವ ಶಾನವಾಜ್ ಹುಸೇನ್ ಸೇರಿದಂತೆ ಒಟ್ಟು ೧೧ ಸದಸ್ಯರಿದ್ದಾರೆ. ಇನ್ನು ಬಿ.ಎಸ್.ಯಡಿಯೂರಪ್ಪ ಮತ್ತು ಬಿ.ಎಲ್. ಸಂತೋಷ ಇಬ್ಬರೂ ಸ್ಥಾನ ಪಡೆದಿರುವುದು ಅಚ್ಚರಿಗೆ ಕಾರಣವಾಗಿದೆ.