Bengaluru : ರಾಜ್ಯ ಸರ್ಕಾರದ ಸಮರ್ಥ ಆಡಳಿತ ಕಾಂಗ್ರೆಸ್ ನಾಯಕರ ನಿದ್ದೆಗೆಡಿಸಿದೆ. ಹೀಗಾಗಿ ದಿನಕ್ಕೊಂದು ಸುಳ್ಳಿನ ಮೂಟೆ ಬಿಚ್ಚಿಡುತ್ತಿದ್ದಾರೆ. ಚುನಾವಣೆ ಹತ್ತಿರ ಬರುತ್ತಿದ್ದಂತೆ ಸಂಗ್ರಹಿಸಿದ್ದ ಸುಳ್ಳಿನ(State BJP Slams Kharge) ಗೋದಾಮು ಖಾಲಿ ಆಗುತ್ತಿದೆ ಎನ್ನುವ ಚಿಂತೆಯಿಂದ ಕಾಂಗ್ರೆಸ್ ನಾಯಕರು ಮೈ ಕೈ ಪರಚಿಕೊಳ್ಳುತ್ತಿದ್ದಾರೆ.

ಕಾರ್ಯಕರ್ತರೇ ಇಲ್ಲದ ಕಾಂಗ್ರೆಸ್(Congress) ಪಕ್ಷಕ್ಕೆ ಹೈಕಮಾಂಡ್ ಏಕೆ ಬೇಕು? ಎಂದು ರಾಜ್ಯ ಬಿಜೆಪಿ(State BJP) ವ್ಯಂಗ್ಯವಾಡಿದೆ.
ಈ ಕುರಿತು ಟ್ವೀಟ್(Tweet) ಮಾಡಿರುವ ಬಿಜೆಪಿ, ಮಲ್ಲಿಕಾರ್ಜುನ ಖರ್ಗೆ(State BJP Slams Kharge) ಅವರು ಹೆಸರಿಗೆ ಮಾತ್ರ ಅಧ್ಯಕ್ಷ, ಸ್ವತಂತ್ರ ನಿರ್ಧಾರ ಪ್ರಕಟಿಸುವುದು ಬಿಡಿ,
ಸಹಿ ಮಾಡುವ ಮೊದಲು, ಪೆನ್ನಿನ ಟಾಪ್ ಓಪನ್ ಮಾಡಲೂ ಬ್ಯಾಕ್ ಚೇರ್ ಡ್ರೈವರ್ ಸೋನಿಯಾ ಮೇಡಮ್ ಅವರ ಆಣತಿಗೆ ಕಾಯಬೇಕು.
ಒಂದು ಕಾಲದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ ಸ್ಥಿತಿ ಹೇಗಿತ್ತು ಎಂದರೆ, 21 ವರ್ಷಗಳ ಕಾಲ ಕಾಂಗ್ರೆಸ್ ಅಧ್ಯಕ್ಷೆಯಾಗಿ ಈಗಲೂ ಬ್ಯಾಕ್ ಚೇರ್ ಡ್ರೈವಿಂಗ್ ಮಾಡುತ್ತಿರುವ ಸೋನಿಯಾ ಮೇಡಮ್ ಅವರ ಗನ್ ಮ್ಯಾನ್‌ಗಳನ್ನು ಭೇಟಿ ಮಾಡಿ,
ಇದನ್ನೂ ಓದಿ : https://vijayatimes.com/187-coins-removed/
ಅದನ್ನೆ ಹೈಕಮಾಂಡ್ ಭೇಟಿ ಎಂದು ಬೀಗುತ್ತಿದ್ದರು. ಈಗ ರಾಜ್ಯ ಕಾಂಗ್ರೆಸ್ ಮತ್ತು ಹೈಕಮಾಂಡ್ ಎರಡು ಕೂಡಾ ನಿರುದ್ಯೋಗಿ ಎಂದು ಟೀಕಿಸಿದೆ. ಇದಕ್ಕೂ ಮುನ್ನ ಸಿಎಂ ಬೊಮ್ಮಾಯಿಯನ್ನು ಟೀಕಿಸಿದ್ದ ರಾಜ್ಯ ಕಾಂಗ್ರೆಸ್,
ದೆಹಲಿಯಲ್ಲಿ ಬಿಜೆಪಿ ಅಧ್ಯಕ್ಷ ನಡ್ಡಾ ಭೇಟಿ ಮಾಡುತ್ತೇನೆ ಎಂದಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರಿಗೆ ನಡ್ಡಾ ಅಪಾಯಿಂಟ್ಮೆಂಟ್ ಕೊಡಲು ಸತಾಯಿಸುತ್ತಿರುವುದೇಕೆ?
ರಾಜ್ಯದ ಸಿಎಂ ಬೊಮ್ಮಾಯಿಯವರನ್ನ ಕಂಡರೆ ಹೈಕಮಾಂಡಿಗೆ ಅಷ್ಟೊಂದು ತಾತ್ಸಾರವೇ?

ಬೊಮ್ಮಾಯಿಯವರು ಅಷ್ಟು ಅಸಮರ್ಥರೆ? ಬೊಮ್ಮಾಯಿಯವರೆಂದರೆ ಬಿಜೆಪಿಯಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆಯೇ?
ದೆಹಲಿ ಟೂರಿಸ್ಟ್ ಬಸವರಾಜ ಬೊಮ್ಮಾಯಿ ಅವರನ್ನು ಹೈಕಮಾಂಡ್ ನಾಯಕರು ಭೇಟಿ ಮಾಡಲು ಸತಾಯಿಸುತ್ತಿರುವುದು ನೋಡಿ ಆಯ್ಯೋ ಪಾಪ ಎನಿಸುತ್ತಿದೆ.
ಇದನ್ನೂ ಓದಿ : https://vijayatimes.com/chetan-ahimsa-slams-siddaramaiah/
ಇದುವರೆಗೂ 12 ಬಾರಿ ದೆಹಲಿ ಭೇಟಿ ಮಾಡಿದರೂ ರಾಜ್ಯಕ್ಕೆ ನಯಾಪೈಸೆ ಪ್ರಯೋಜನವಾಗಿಲ್ಲ, ಈಗಲೂ ಆಗುವುದಿಲ್ಲ. ಬೊಮ್ಮಾಯಿಯವರ ಸಂಕಟ ವಿಸ್ತರಣೆಯಾಗುತ್ತಿದೆಯೇ ಹೊರತು ಸಂಪುಟ ವಿಸ್ತರಣೆಯಲ್ಲ ಎಂದು ವ್ಯಂಗ್ಯವಾಡಿತ್ತು.
- ಮಹೇಶ್.ಪಿಎಚ್