vijaya times advertisements
Visit Channel

“ರಮೇಶ್ ಕುಮಾರ್‍ಗೆ ಸ್ವಂತ ಶಕ್ತಿಯಿಂದ ರಾಜಕೀಯ ಮಾಡುವ ಯೋಗ್ಯತೆ ಇಲ್ಲ” : ಬಿಜೆಪಿ

bjp

ಸ್ವಂತ ಶಕ್ತಿಯಿಂದ ರಾಜಕೀಯ(Political) ಮಾಡುವ ಯೋಗ್ಯತೆ ಇಲ್ಲ. ಬಾಲಂಗೋಚಿ ಆಗದಿದ್ದರೆ ರಾಜಕೀಯ ಉಳಿಗಾಲವಿಲ್ಲ. ಪರಾವಾಲಂಬಿ ರಾಜಕಾರಣದ ಕೇರ್ ಆಫ್ ಅಡ್ರೆಸ್ ಆಗಿರುವ ನೀವು ಯಾರ ಕೃಪೆಯಲ್ಲಿದ್ದಿರಿ ಎನ್ನುವುದನ್ನು ಬಿಡಿಸಿ ಹೇಳಬೇಕೆ? ಎಂದು ಕಾಂಗ್ರೆಸ್ ನಾಯಕ ರಮೇಶ್ ಕುಮಾರ್(Ramesh Kumar) ವಿರುದ್ದ ರಾಜ್ಯ ಬಿಜೆಪಿ(State BJP) ವಾಗ್ದಾಳಿ ನಡೆಸಿದೆ.


“ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ” ದಾಸಶ್ರೇಷ್ಠ ಶ್ರೀ ಪುರಂದರದಾಸರು ನಿಮ್ಮಂತಹ ವಿಕಾರಿಗಳನ್ನು ನೋಡಿಯೇ ಈ ಪದವನ್ನು ಬರೆದಿರಬಹುದು. ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ. ಗಾಂಧಿಗಳ ಹೆಸರೇಳಿಕೊಂಡು ತಲೆಮಾರುಗಳಿಗೆ ಆಗುವಷ್ಟು ಮಾಡಿಕೊಂಡಿದ್ದನ್ನು ನೀವೇ ಒಪ್ಪಿಕೊಂಡಿದ್ದೀರಿ. ಇದಕ್ಕೆ ನಿಮ್ಮ ಕೃಪಾಪೋಷಿತ ಸಿದ್ಧಸೂತ್ರಧಾರರೇ ಸಾಕ್ಷಿ. ಹೀಗೆ ಮಾಡಿಕೊಂಡಿದ್ದರಲ್ಲಿ ಎತ್ತಿನಹೊಳೆ, ಕೆಸಿ ವ್ಯಾಲಿ ಎತ್ತುವಳಿಯೂ ಸೇರಿದೆಯಾ? ಎಂದು ಪ್ರಶ್ನಿಸಿದೆ. ಬೆಳಗಾವಿ(Belagavi) ಅಧಿವೇಶನದಲ್ಲಿ ಲಜ್ಜೆಗೆಟ್ಟು ಆಡಿದ ಮಾತಿಗೆ ಸ್ವಪಕ್ಷದ ಶಾಸಕಿಯರಿಂದಲೇ ಛೀಮಾರಿ ಹಾಕಿಸಿಕೊಂಡ ಸ್ವಯಂ ಘೋಷಿತ ಸಂವಿಧಾನ ಪಂಡಿತರೇ,

ಅಧಿವೇಶನದಲ್ಲಿ ಅದ ಗರ್ವಭಂಗವನ್ನು ಮರೆತಿರಾ? 3 ವರ್ಷಗಳಲ್ಲಿ ನೀರು ಹರಿಸುತ್ತೇವೆ ಎಂದು ಬೂಸಿಬಿಟ್ಟು, ಜನಕ್ಕೆ ಮಂಕುಬೂದಿ ಎರಚಿ ಎತ್ತಿನಹೊಳೆ(Yattinahole) ಹೆಸರಿನಲ್ಲಿ ನಡೆಸಿದ ಎತ್ತುವಳಿಕಾಂಡವನ್ನು ಬಿಚ್ಚಿಡಬೇಕೆ? ಗುತ್ತಿಗೆದಾರರ ಹಿಂದೆ ಸುತ್ತಿದ ಬೇತಾಳ ಕಥೆಯನ್ನು ಹೇಳಬೇಕೆ? ಇದೆಲ್ಲವನ್ನು ಅಧ್ಯಾಯಗಳಂತೆ ಆರಂಭಿಸಬೇಕೆ? ಕೋಲಾರ ಜಿಲ್ಲೆಗೆ ನೀವು ಮಾಡಿದ ಘೋರ ಅನ್ಯಾಯ, ಎಸಗಿದ ಪಾಪ ಕಣ್ಮುಂದೆಯೇ ಇದೆ. ಎತ್ತಿನಹೊಳೆ ಹರಿಸುತ್ತೇನೆ ಎಂದು ನಂಬಿಸಿ ಕೆರೆಗಳ ತುಂಬಾ ವಿಷವನ್ನು ತುಂಬಿಸಿದ ಧೂರ್ತ ಕೃತ್ಯಕ್ಕೆ ಕಾರಣರು ಯಾರು?

ಕೆಸಿ ವ್ಯಾಲಿ ಎತ್ತುವಳಿ ಲೆಕ್ಕ ತೆಗೆದರೆ ಮುಖ ಎಲ್ಲಿ ಇಟ್ಟುಕೊಳ್ಳುತ್ತೀರಿ ಸ್ವಯಂ ಘೋಷಿತ ಸಂವಿಧಾನ ತಜ್ಞರೇ? ಎಂದು ಪ್ರಶ್ನಿಸಿದೆ.
ಯರಗೊಳ್ ಯೋಜನೆಗೆ ಅನುಮತಿ ನೀಡಿದ್ದೇ ನಾನು. ಮಾಡಿದ್ದನ್ನೇ ನಾನು ಹೇಳಿದ್ದೇನೆ. ಬೇಕಾದರೆ ರಮೇಶ್ ಕುಮಾರ್ ಅವರು ದಾಖಲೆಗಳನ್ನು ನೋಡಿಕೊಳ್ಳಲಿ. ಕೆ.ಆರ್.ಎಸ್, ಎತ್ತಿನಹೊಳೆ, ಕೆಸಿ.ವ್ಯಾಲಿ, ಹೆಚ್ ಎಎಲ್, ಹೆಚ್ ಎಂಟಿಗಳನ್ನು ನಾನೇ ಮಾಡಿದ್ದು ಎಂದು ಎಲ್ಲಾದರೂ ಹೇಳಿದ್ದೇನೆಯೇ? ಹೇಳಿದ್ದರೆ ಅವರು ಹೇಳಲಿ.

ವಿಕೃತ, ಕೊಳಕು ಮನಃಸ್ಥಿತಿಯ ಮಾಜಿ ಸ್ಪೀಕರ್ ರಮೇಶ್ ಕುಮಾರ್, ನಾಲಿಗೆ ಮತ್ತು ಮಿದುಳಿನ ನಡುವಿನ ಸಂಪರ್ಕ ಕಳೆದುಕೊಂಡು ಅಸಹಜವಾಗಿ ವರ್ತಿಸುತ್ತಿದ್ದಾರೆ. ಅವರ ವಿಕಾರಗಳಿಗೆ ಕೊನೆಯೇ ಇಲ್ಲದಾಗಿದೆ ಎಂದು ಟೀಕಿಸಿದೆ.

Latest News

Paneer
ಆರೋಗ್ಯ

ರುಚಿಯಷ್ಟೇ ಅಲ್ಲ, ಆರೋಗ್ಯಕ್ಕೂ ವರದಾನ ನಾವು ಪ್ರತಿದಿನ ಬಳಸುವ ಪನೀರ್

ಪನೀರ್ ಕೇವಲ ಇಷ್ಟಕ್ಕೆ ಮಾತ್ರ ಸೀಮಿತವಾಗಿಲ್ಲ, ನಮ್ಮ ಆರೋಗ್ಯದ ರಕ್ಷಣೆಯಲ್ಲಿ ಕೂಡ ಇದರ ಪ್ರಯೋಜನಗಳು ಅಪಾರ. ಆದರೆ ಹೆಚ್ಚಿನವರಿಗೆ ಇದರ ಬಗ್ಗೆ ಅರಿವೇ ಇಲ್ಲ.

ದೇಶ-ವಿದೇಶ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಬೆಂಗಾವಲಿಗೆ 42 ಕಾರುಗಳು‌ ; ಆಕ್ರೋಶ ವ್ಯಕ್ತಪಡಿಸಿದ ಸಾರ್ವಜನಿಕರು

ಜನಸಾಮಾನ್ಯರ ಪಕ್ಷ ಎಂದೇ ಹೇಳಿಕೊಳ್ಳುವ ಆಮ್‌ ಆದ್ಮಿ ಪಕ್ಷದ ನಾಯಕರು ಈ ರೀತಿಯಾಗಿ ಸಾಮಾನ್ಯ ಜನರ ತೆರಿಗೆ(Tax) ಹಣವನ್ನು ದುಂದುವೆಚ್ಚ ಮಾಡುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

Mallikarjun Kharge
ರಾಜಕೀಯ

ಮಲ್ಲಿಕಾರ್ಜುನ ಖರ್ಗೆ ಚಿತ್ತ ಕಾಂಗ್ರೆಸ್ ಅಧ್ಯಕ್ಷ ಸ್ಥಾನದತ್ತ ; ಅಧ್ಯಕ್ಷ ಸ್ಥಾನ ಬಹುತೇಕ ಖಚಿತ

ಈ ರಾಜೀನಾಮೆಯನ್ನು ಸೋನಿಯಾ ಗಾಂಧಿ ಅವರು ಅಂಗೀಕರಿಸುವ ಸಾಧ್ಯತೆ ಇದ್ದು, ಹೊಸ ರಾಜ್ಯಸಭಾ ವಿರೋಧ ಪಕ್ಷದ ನಾಯಕನ ಆಯ್ಕೆ ಸಂಬಂಧ ಮುಂದಿನ ದಿನಗಳಲ್ಲಿ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

PFI
ದೇಶ-ವಿದೇಶ

ಬಂಧಿತ PFI ಕಾರ್ಯಕರ್ತರನ್ನು 21 ದಿನಗಳ ಕಸ್ಟಡಿಗೆ ಕಳುಹಿಸಿದ NIA ಕೋರ್ಟ್!

ಬಂಧಿತರ ಮೇಲೆ ಭಯೋತ್ಪಾದನೆಗೆ ಹಣಕಾಸಿನ ನೆರವು ಒದಗಿಸಿರುವ ಮತ್ತು ಹಿಂದೂ ಕಾರ್ಯಕರ್ತರನ್ನು ಹತ್ಯೆ(Murder) ಮಾಡಿರುವ ಆರೋಪವನ್ನು ಹೊರಿಸಲಾಗಿದೆ.