ಕರ್ನಾಟಕದಲ್ಲಿ ಸಿದ್ದರಾಮಯ್ಯ PFI ಜಿಹಾದಿಗಳನ್ನು ಸಾಕುತ್ತಿದ್ದರೆ, ಅತ್ತ ಕಾಂಗ್ರೆಸ್‌ ಪಕ್ಷ ಕಾಶ್ಮೀರದ ಕಣಿವೆಯಲ್ಲಿ ಉಗ್ರರನ್ನು ಬೆಂಬಲಿಸುತ್ತಿತ್ತು : ಬಿಜೆಪಿ

Congress

ಇತ್ತ ಕರ್ನಾಟಕದಲ್ಲಿ (Karnataka) ಸಿದ್ದರಾಮಯ್ಯ (Siddaramaiah) ಅವರು ಪಿಎಫ್‌ಐ (PFI) ಜಿಹಾದಿಗಳನ್ನು ಸಂಬಂಧಿಗಳಂತೆ ಸಾಕುತ್ತಿದ್ದರೆ, ಅತ್ತ ಕಾಂಗ್ರೆಸ್‌ ಪಕ್ಷ (Congress Party) ಕಾಶ್ಮೀರದ ಕಣಿವೆಯಲ್ಲಿ ಉಗ್ರರನ್ನು ಬೆಂಬಲಿಸುತ್ತಿತ್ತು.

ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಈ ಪರಿಯ ಒಂಟಿತನ ಯಾವತ್ತೂ ಕಾಡಿರಲಾರದು. ಪಿಎಫ್‌ಐ ಸ್ನೇಹಿತರು ಜೈಲಿಗೆ ಹೋದಾಗಿನಿಂದ (State BJP Taunts Siddaramaiah) ಸಿದ್ದರಾಮಯ್ಯ ಅವರು ಒಬ್ಬಂಟಿಯಾಗಿದ್ದಾರೆಯೇ?

ಎಂದು ರಾಜ್ಯ ಬಿಜೆಪಿ(State BJP) ಲೇವಡಿ ಮಾಡಿದೆ. ಕಾಂಗ್ರೆಸ್ ಮತ್ತು ಜಿಹಾದಿ ಸಂಘಟನೆಗಳು ಒಂದೇ ನಾಣ್ಯದ ಎರಡು ಮುಖಗಳು.

ಇಬ್ಬರದ್ದೂ ಒಂದೇ ಧ್ಯೇಯ, ಅದು ದೇಶವನ್ನು ತುಂಡರಿಸುವುದು. ಈ ನಿಟ್ಟಿನಲ್ಲಿ ರಾಜಕೀಯ ಪಕ್ಷವಾಗಿ ಕಾಂಗ್ರೆಸ್‌ ಮುಂದುವರೆದರೆ, ಧಾರ್ಮಿಕತೆಯ ಹೆಸರಿನಲ್ಲಿ ಜಿಹಾದಿ ಸಂಘಟನೆಗಳು ಕಾರ್ಯಾಚರಿಸುತ್ತಿದ್ದವು. ದೇಶ ತುಂಡರಿಸಲು ಎಷ್ಟೊಂದು ಮುಖವಾಡಗಳು ಎಂದು ಲೇವಡಿ ಮಾಡಿದೆ.

ಇದನ್ನೂ ಓದಿ : https://vijayatimes.com/uae-enlists-new-visa-for-travellers/

ದೇಶದಲ್ಲಿ ನಕಲಿ ಗಾಂಧಿ ಕುಟುಂಬ ಉಗ್ರವಾದವನ್ನು ಪೋಷಿಸಿದರೆ ರಾಜ್ಯದಲ್ಲಿ ಅದರ ನೇತೃತ್ವ ವಹಿಸಿಕೊಂಡಿದ್ದು ಸಿದ್ದರಾಮಯ್ಯ. ಸಮಾಜದಲ್ಲಿ ಅಸ್ಥಿರತೆ ಮೂಡಿಸಿ ತಮ್ಮ ವೈಯುಕ್ತಿಕ ಧಾರ್ಮಿಕ ಗುರಿಗಳನ್ನು ಹಿಂಸೆಯ ಮೂಲಕ ಪ್ರತಿಷ್ಠಾಪಿಸುವುದು ಈ ಜಿಹಾದಿಗಳ ಉದ್ದೇಶವಾಗಿತ್ತು.

ಇಂತವರಿಗೂ ಕಾಂಗ್ರೆಸ್ ಬೆಂಬಲ ನೀಡುತ್ತಿರುವುದೇಕೆ? ಸಹಜ ದೇಶವಾಸಿಗಳ ಸೋಗಿನಲ್ಲಿ ದೇಶದಲ್ಲಿ ಆಂತರಿಕ ಭಯೋತ್ಪಾದನೆ ಸೃಷ್ಟಿಸುವ ಹುನ್ನಾರ ನಡೆಸಿದ ಜಿಹಾದಿ ಸಂತತಿಯ

https://youtu.be/g4wy0ZODCNg

ಪಿಎಫ್ಐ ಸೇರಿದಂತೆ ಸಮಾಜ ಘಾತುಕ ಸಂಘಟನೆಗಳನ್ನು ಮೋದಿ ಸರ್ಕಾರ ನಿಷೇಧಿಸಿದೆ. ಜಿಹಾದಿ ಮನಸ್ಥಿತಿ ನೆಲೆಯೂರುವಲ್ಲಿ ಕಾಂಗ್ರೆಸ್‌ ಪಕ್ಷದ (State BJP Taunts Siddaramaiah) ಸಹಕಾರವಿದೆ. ಇವರ ಉಗ್ರ ಚಟುವಟಿಕೆಗೆ ಬೆನ್ನೆಲುಬಾಗಿ ನಿಂತಿದ್ದೇ ಕಾಂಗ್ರೆಸ್ ಎಂದು ಆರೋಪಿಸಿದೆ.

ಪ್ರಧಾನಿ ಮೋದಿ ಸರ್ಕಾರ ಪಿಎಫ್ಐ ನಿಷೇಧ(PFI Ban) ಮಾಡಿದಾಗಿನಿಂದಲೂ ಹಿಂದೂ ವಿರೋಧಿ ಸಿದ್ದರಾಮಯ್ಯ ಅವರು ಒಳಗೊಳಗೆ ರೋಷದಿಂದ ಕುದಿಯುತ್ತಿದ್ದಾರೆ. ಸಿದ್ದರಾಮಯ್ಯವರೇ,

ಜಿಹಾದಿಗಳ ಮೇಲೆ ನಿಮಗೇಕೆ ಅಷ್ಟೊಂದು ಮಮಕಾರ? ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಪಿಎಫ್‌ಐ ಮೇಲಿನ 175 ಕ್ರಿಮಿನಲ್ ಪ್ರಕರಣಗಳನ್ನು ಕೈಬಿಟ್ಟು ಪ್ರವೀಣ್ ಪೂಜಾರಿ, ರಾಜು, ರುದ್ರೇಶ್ ಹತ್ಯೆಗೆ ಕಾಂಗ್ರೆಸ್‌ ಕಾರಣವಾಗಿತ್ತು.

ಇದನ್ನೂ ಓದಿ : https://vijayatimes.com/elon-and-adhani-lost-2-crore/

ಕಾಂಗ್ರೆಸ್ ಪಕ್ಷದ ಶಾಶ್ವತ ಪ್ರಧಾನಿ ಅಭ್ಯರ್ಥಿ ರಾಹುಲ್‌ ಗಾಂಧಿ(Rahul Gandhi) ಅವರ ವಂಶವೇ ಉಗ್ರರೊಂದಿಗೆ ಅವಿನಾಭಾವ ಸಂಬಂಧ ಹೊಂದಿರುವಾಗ ಸಿದ್ದರಾಮಯ್ಯ ಅವರ ಪಿಎಫ್‌ಐ ಪ್ರೀತಿಯನ್ನು ಹೇಗೆ ತಾನೆ ವಿರೋಧಿಸುತ್ತಾರೆ? ಎಂದು ವ್ಯಂಗ್ಯವಾಡಿದೆ.
Exit mobile version