ಸಿದ್ದರಾಮಯ್ಯ ವಿಭಜನೆ ಆಧಾರಿತ ಅಭಿವೃದ್ಧಿ ತಿಳಿದುಕೊಳ್ಳಲು ಶಾದಿಭಾಗ್ಯ ಯೋಜನೆಯೊಂದೇ ಸಾಕು : ಬಿಜೆಪಿ

BJP

ಸಾಮಾಜಿಕ ನ್ಯಾಯದ ಹರಿಕಾರ ಎಂದು ಸಮಾಜವನ್ನು ಒಡೆದು ಹಾಕಿದ್ದು ಸಿದ್ದರಾಮಯ್ಯ(Siddaramaiah) ಅವರ ಸಾಧನೆಯೇ? ಸಿದ್ದರಾಮಯ್ಯ ಧರ್ಮ ವಿಭಜನೆ, ಜಾತಿ ವಿಭಜನೆಯ ಹರಿಕಾರ. ಸಿದ್ದರಾಮಯ್ಯ ಅವರ ವಿಭಜನೆ ಆಧಾರಿತ ಅಭಿವೃದ್ಧಿ ತಿಳಿದುಕೊಳ್ಳಲು ಶಾದಿಭಾಗ್ಯ(Shaadi Bhagya) ಯೋಜನೆಯೊಂದೇ ಸಾಕು ಎಂದು ಬಿಜೆಪಿ(BJP) ಲೇವಡಿ ಮಾಡಿದೆ. ಈ ಕುರಿತು ಟ್ವೀಟ್‌(Tweet) ಮಾಡಿರುವ ಬಿಜೆಪಿ, ಸರ್ವಜನಾಂಗದ ಶಾಂತಿಯ ತೋಟವಂತೆ ಸಿದ್ದರಾಮಯ್ಯನವರೇ ಎಲ್ಲಿತ್ತು ಶಾಂತಿ? ನೀವೇ ನೀಡಿದ ಲೆಕ್ಕದ ಪ್ರಕಾರ ನೀವು ಸಿಎಂ ಆಗಿದ್ದಾಗಿನ ಕಾಲದ ಮೂರು ವರ್ಷದಲ್ಲಿ 23 ಕೊಲೆ ನಡೆದಿದ್ದವು.

ಅದು ಕೂಡಾ ದ್ವೇಷದ ಕೊಲೆ. ಸಿದ್ದರಾಮಯ್ಯ ಅವರದ್ದು ಬಾಬರ್, ಘಜಿನಿ ಆಡಳಿತವಾಗಿತ್ತೇ ಹೊರತು ಶಾಂತಿಯದ್ದಲ್ಲ ಎಂದು ಟೀಕಿಸಿದೆ.
ದುರ್ಬಲರ ಪಾಲಿನ ಭರವಸೆಯ ಶಕ್ತಿ ಎಂದು ಬಿಂಬಿಸಿಕೊಳ್ಳುವ ಮುನ್ನ ಸಿದ್ದರಾಮಯ್ಯ ಅವರು ರಾಜ್ಯದ ಜನತೆಯ ತಲೆ ಮೇಲೆ ಹೊರಿಸಿದ ಋಣಭಾರದ ಬಗ್ಗೆಯೂ ಮಾತನಾಡಬೇಕು. 1 ಲಕ್ಷ ಕೋಟಿಗೂ ಅಧಿಕ ಸಾಲವನ್ನು ಪ್ರಜೆಗಳ ಮೇಲೆ ಹೊರಿಸಿ ರಾಜ್ಯವನ್ನು ಆರ್ಥಿಕವಾಗಿ ದುರ್ಬಲಗೊಳಿಸಿದ್ದು, ನಿಮ್ಮ ಸಾಧನೆಯೇ? ಕಾಂಗ್ರೆಸ್ ನಡಿಗೆ ಕೃಷ್ಣೆಯ ಕಡೆಗೆ ಪಾದಯಾತ್ರೆಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಗೆ ವಾರ್ಷಿಕ ಹತ್ತು ಸಾವಿರ ಕೋಟಿ ಅನುದಾನ ಕೊಡುವುದಾಗಿ ಸಿದ್ದರಾಮಯ್ಯ ಸುಳ್ಳು ಹೇಳಿದ್ದರು.

ಅದೇ ಸಿದ್ದರಾಮಯ್ಯ ಇಂದು ಪತ್ರಿಕೆಗಳಲ್ಲಿ ನೇಗಿಲ ಯೋಗಿಗೆ ಜಲಭಾಗ್ಯದ ಭಗೀರಥನಾದೆ ಎಂದು ಬೊಗಳೆ ಬಿಡುತ್ತಿರುವುದು ಹಾಸ್ಯಾಸ್ಪದವಲ್ಲವೇ? ಎಂದು ಪ್ರಶ್ನಿಸಿದೆ. ನೇಗಿಲ ಯೋಗಿಗೆ ಜಲಭಾಗ್ಯದ ಭಗೀರಥನಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರೇ, ಸುಳ್ಳು ಹೇಳುವುದಕ್ಕೂ ಒಂದು ಮಿತಿ ಬೇಡವೇ? ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ನಡೆದ ನೀರಾವರಿ ಅಕ್ರಮಗಳ ಬಗ್ಗೆ ಶ್ವೇತಪತ್ರ ಹೊರಡಿಸುವ ತಾಕತ್ತು ಇದೆಯೇ? ಹಸಿದವರ ಹೊಟ್ಟೆಗೆ ಅನ್ನದ ಭಾಗ್ಯವಾದೆ ಎಂದು ಸಿದ್ದರಾಮಯ್ಯ ಅವರು ಪತ್ರಿಕೆಗಳಲ್ಲಿ ಜಾಹೀರಾತು ಹಾಕಿಸಿಕೊಂಡಿದ್ದಾರೆ.

ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ(Central Government) ದುಡ್ಡು ಕೊಟ್ಟಿದ್ದನ್ನು ಮುಚ್ಚಿಟ್ಟು ತನ್ನ ಜೇಬಿನಿಂದ ದುಡ್ಡು ಕೊಟ್ಟಂತೆ ಸಿದ್ದರಾಮಯ್ಯ ಪ್ರಚಾರ ಪಡೆಯುತ್ತಿದ್ದಾರೆ ಎಂದು ವ್ಯಂಗ್ಯವಾಡಿದೆ.

Exit mobile version