ಇದು `ಸಿದ್ದರಾಮೋತ್ಸವ’ವಲ್ಲ, ಬಿದ್ದಿರುವ ಸಿದ್ದರಾಮಯ್ಯರನ್ನು ಮೇಲಕ್ಕೆತ್ತುವ ಉತ್ಸವ : ಬಿಜೆಪಿ ವ್ಯಂಗ್ಯ

ಮುಖ್ಯಮಂತ್ರಿ ಪದವಿಯ ಆಸೆಗಾಗಿ ಸಿದ್ದರಾಮಯ್ಯ(Siddaramaiah) ತಮ್ಮ ಹಳೆಯ ಅಹಿಂದ ಕಾರ್ಡ್ ಬಳಸುತ್ತಿದ್ದಾರೆ. ಅಹಿಂದ ಕಾರ್ಡ್ ಎಕ್ಸ್ಪೈರ್ ಆಗಿದೆ. ಕಳೆದ ಬಾರಿ ಇದೇ ಕಾರ್ಡ್ ತೋರಿಸಿ ಮೋಸ ಮಾಡಿದ್ದನ್ನು ರಾಜ್ಯದ ಜನತೆ ಇನ್ನೂ ಮರೆತಿಲ್ಲ. ಇದು ಸಿದ್ದರಾಮೋತ್ಸವವಲ್ಲ, ಬಿದ್ದಿರುವ ಸಿದ್ದರಾಮಯ್ಯರನ್ನು ಮೇಲಕ್ಕೆತ್ತುವ ಉತ್ಸವ ಅಷ್ಟೇ ಎಂದು ರಾಜ್ಯ ಬಿಜೆಪಿ(State BJP) ವ್ಯಂಗ್ಯವಾಡಿದೆ.


ಈ ಕುರಿತು ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ದಾವಣಗೆರೆಯಲ್ಲಿ(Davangere) ಸಿದ್ದರಾಮಯ್ಯ ಸಮಾವೇಶ ಆಯೋಜಿಸಿದ್ದಾರೆ ಎಂದರೆ ಬಂಡಾಯದ ಬಾವುಟ ಹಾರಿಸಿದ್ದಾರೆಂದೇ ಅರ್ಥ. ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷರಾಗಿದ್ದಾಗಲೂ ಸಿದ್ದರಾಮಯ್ಯ ದಾವಣಗೆರೆಯಲ್ಲಿ ಸಮಾವೇಶ ನಡೆಸಿ ವರಿಷ್ಠರಿಗೆ ಭರತನಾಟ್ಯ ಮಾಡಿಸಿದ್ದರು. ಸಿದ್ದರಾಮಯ್ಯನವರೇ, ಇದೆಲ್ಲವೂ ಸ್ವಾರ್ಥಕ್ಕಾಗಿ ಅಲ್ವೇ? ಕಾಂಗ್ರೆಸ್ ಪಕ್ಷದ ಮುಂಚೂಣಿ ನಾಯಕರು ಒಟ್ಟಾಗಿ ಚುನಾವಣೆ ಎದುರಿಸುವುದು ಎಂದರೆ ಕಪ್ಪೆಯನ್ನು ಹಿಡಿದು ತಕ್ಕಡಿಯಲ್ಲಿ ತೂಕ ಮಾಡಿದಂತೆ.

ಇವರು ಒಟ್ಟಾಗುವುದಿಲ್ಲ, ಹೈಕಮಾಂಡ್ ಒಗ್ಗಟ್ಟಿನ ಜಪ ಬಿಡುವುದಿಲ್ಲ, ಕಾಂಗ್ರೆಸ್ ವರಿಷ್ಠರೀಗ ನೀರಲ್ಲಿ ಮುಳುಗಿ ಬಂದ ಬೆಕ್ಕಿನಂತಾಗಿದ್ದಾರೆ.
೨೦೧೩ರ ಸೋಲನ್ನು ಪರಮೇಶ್ವರ್ ಮರೆತಿಲ್ಲ. ಸಿದ್ದರಾಮಯ್ಯ ಅವರೇ ನೀವು ಯಾರನ್ನೂ ಓವರ್ ಟೇಕ್ ಮಾಡಿದರೂ, ಕಾಂಗ್ರೆಸ್‌ ಒಳಜಗಳ ನಿಮ್ಮನ್ನು ಓವರ್ ಟೇಕ್ ಮಾಡದೆ ಬಿಡದು. ೨೦೧೮ ರಲ್ಲಿ ಅನುಭವಿಸಿದ್ದೀರಿ, ೨೦೨೩ ರಲ್ಲಿ ಡಿಕೆಶಿ, ಖರ್ಗೆ, ಪರಮೇಶ್ವರ್ ಸೇರಿಕೊಂಡು ನಿಮ್ಮನ್ನು ಓವರ್ ಟೇಕ್ ಮಾಡಲಿದ್ದಾರೆ. ಕಾಂಗ್ರೆಸ್ಸಿಗರು ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸುತ್ತಿದ್ದಾರೆ.

ಮತವೇ ಇಲ್ಲದವರು ಬಹುಮತ ಗಳಿಸಲು ಹೇಗೆ ಸಾಧ್ಯ? ೨೦೨೩ ರಲ್ಲಿ ಕಾಂಗ್ರೆಸ್ ಸೋಲು ಖಚಿತ. ಟವಲ್ ಈಗಲೇ ಹಾಕಬೇಡಿ, ನಾಳೆಯ ದಿನ ಮುಖಭಂಗವಾದಾಗ ಒರೆಸಿಕೊಳ್ಳಲು ತುಂಡು ಬಟ್ಟೆಯೂ ಲಭಿಸದು.
ಬಿದ್ದಿರುವ ಸಿದ್ದರಾಮಯ್ಯರನ್ನು ಮೇಲೆತ್ತಲು ಸಿದ್ದರಾಮೊತ್ಸವ ಮೂಲಕ ವೇದಿಕೆ ಸಜ್ಜುಗೊಳಿಸುತ್ತಿರುವ ಸಿದ್ದರಾಮಯ್ಯ ಬಣದ ನಾಯಕರು ಒಂದೆಡೆಯಾದರೆ, ಇದೇ ಸಿದ್ದರಾಮಯ್ಯರನ್ನು ಕೆಡವಲು ಖೆಡ್ಡಾ ತೋಡುತ್ತಿರುವ ಡಿ.ಕೆ.ಶಿವಕುಮಾರ್ ಬಣದ ನಾಯಕರು ಮತ್ತೊಂದೆಡೆ.

ಈ ೨ ಬಣಗಳ ನಡುವೆ ದೆಹಲಿಯ ನಕಲಿ ಗಾಂಧಿಗಳ ಬಣ ಮೂಕ ಪ್ರೇಕ್ಷಕರಷ್ಟೇ. ನಕಲಿ ಗಾಂಧಿ ಕುಟುಂಬಸ್ಥರು ಪ್ರತಿಬಾರಿಯೂ ರಾಜ್ಯ ಕಾಂಗ್ರೆಸ್ ನಾಯಕರಿಗೆ ಒಂದಾಗಿರಬೇಕೆಂದು ಸೂಚನೆ ನೀಡುತ್ತಾರೆ. ದೆಹಲಿಯಲ್ಲಿ ಹೂಂಗುಟ್ಟಿ ಬರುವ ಕಾಂಗ್ರೆಸ್ಸಿಗರು ಬೆಂಗಳೂರಿಗೆ ಬಂದ ಕೂಡಲೇ ಒಬ್ಬರ ವಿರುದ್ಧ ಇನ್ನೊಬ್ಬರು ಕತ್ತಿ ಮಸೆಯುತ್ತಾರೆ. ತಾಳಮೇಳ ಇಲ್ಲದ ಕೈ ನಾಯಕರಿಂದಾಗಿಯೇ ರಾಜ್ಯ ಕಾಂಗ್ರೆಸ್(State Congress) ಮುಕ್ತವಾಗಲಿದೆ ಎಂದು ಲೇವಡಿ ಮಾಡಿದೆ.

Latest News

ದೇಶ-ವಿದೇಶ

‘ಡಾನಿ’ ಬುಡಕಟ್ಟು ಜನಾಂಗದಲ್ಲಿ ಬೆರಳನ್ನು ಕತ್ತರಿಸುವುದೇ ಸಂಪ್ರದಾಯವಂತೆ!

ಇಂಡೋನೇಷ್ಯಾದ, ಪಪುವಾ ಗಿನಿಯಾ ದ್ವೀಪದಲ್ಲಿ ವಾಸಿಸುವ ಎಲ್ಲಾ ಡಾನಿ ಬುಡಕಟ್ಟಿನ ಮಹಿಳೆಯರನ್ನು ಕತ್ತರಿಸಿದ ಬೆರಳುಗಳಿಂದ ಬದುಕಲು ಒತ್ತಾಯಿಸಲಾಗುತ್ತದೆ.

ರಾಜಕೀಯ

`ನನ್ನಲ್ಲೂ ದಾಖಲೆಗಳಿವೆ ; `ಸರ್ಟಿಫಿಕೇಟ್ ಕೋರ್ಸ್ʼಗಿಂತ ಬೃಹತ್ ಚಾಪ್ಟರ್ 1, 2, 3 ಆಗುತ್ತವೆ, ಬಿಚ್ಚಲೇ? : ಹೆಚ್.ಡಿಕೆ

ಕಟ್ಟಡಗಳ ಹೆಸರಿನಲ್ಲಿ ಕಮೀಷನ್ ಕಾಂಚಾಣ, ಅಧಿಕಾರಿಗಳನ್ನು ಒಳಕ್ಕೆ ಹಾಕಿಕೊಂಡು ಡೀಲ್ ಮಾಡುವ ಅಶ್ವತ್ ನಾರಾಯಣ್, ಇದೇನಾ ನೀವು ನೀಡುತ್ತಿರುವ ಉನ್ನತ ಶಿಕ್ಷಣ?

ಆರೋಗ್ಯ

ಸಕ್ಕರೆ ಖಾಯಿಲೆ ಇರುವವರು ಈ ಹಣ್ಣುಗಳನ್ನು ಸೇವಿಸಬಹುದು ; ತಪ್ಪದೇ ಈ ಮಾಹಿತಿ ಓದಿ

ತಜ್ಞರ ಪ್ರಕಾರ, ಸಕ್ಕರೆ ಕಾಯಿಲೆ ಇರುವವರು ಈ 5 ವಿಧದ ಹಣ್ಣುಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಅಂತಹ ಹಣ್ಣುಗಳ ವಿವರ ಇಲ್ಲಿದೆ ನೋಡಿ.

ದೇಶ-ವಿದೇಶ

ದೇಶದ ಹೆಮ್ಮೆ ತ್ರಿವರ್ಣ ಧ್ವಜವೂ ಕೂಡ ಬಿಜೆಪಿಗೆ ವ್ಯಾಪಾರದ ಸರಕಾಗಿದೆ : ಬಿ.ಕೆ.ಹರಿಪ್ರಸಾದ್

38×11,80,000=4.484 ಕೋಟಿ, ಹೇಗಿದೆ ಮೋದಿ ಸರ್ಕಾರದ ಲೂಟಿ? ಕೇಂದ್ರದ ಮೋದಿ ಸರ್ಕಾರ ವಸೂಲಿ ಬಾಜಿತನಕ್ಕೆ ರಾಷ್ಟ್ರಧ್ವಜವನ್ನ ಬಳಸಿಕೊಂಡಿರುವುದು ಅಕ್ಷಮ್ಯ ಅಪರಾಧ