ನಕಲಿ ಗಾಂಧಿ ಕುಟುಂಬದ ಬುಡಕ್ಕೆ ಬೆಂಕಿ ಬಿದ್ದಾಗ ಮಾತ್ರ ಪಾದಯಾತ್ರೆಯ ನೆನಪಾಗುತ್ತದೆ. ದೇಶದಲ್ಲಿ ಉಗ್ರರ ದಾಳಿಯಾದಾಗ, ರೈತರ ಸರಣಿ ಆತ್ಮಹತ್ಯೆ ನಡೆದಾಗ, ಶಾಂತಿದೂತರು ಕಲ್ಲು ತೂರಾಟ ನಡೆಸಿದಾಗ ಕಾಂಗ್ರೆಸ್ಸಿಗರಿಗೆ ಪಾದಯಾತ್ರೆಯ ನೆನಪಾಗುವುದಿಲ್ಲ. ನಕಲಿ ಗಾಂಧಿ ಕುಟುಂಬದ ಸದಸ್ಯರಿಗೆ ಇಡಿ ನೋಟಿಸ್(ED Notice) ಜಾರಿಯಾಗುತ್ತಿದ್ದಂತೆ ದೇಶಾದ್ಯಂತ ಅಶಾಂತಿ ಸೃಷ್ಟಿ ಮಾಡಲಾಗುತ್ತಿದೆ. ಇಡಿ ಕಚೇರಿ ಎದುರು ಪ್ರತಿಭಟನೆಯ ಕರೆಯ ಹಿಂದೆ ದೇಶ ವಿರೋಧಿ ಸಂಚು ಅಡಗಿದೆ.

ಉತ್ತರದ ರಾಜ್ಯಗಳಲ್ಲಿ ನಡೆಯುತ್ತಿರುವ ಹಿಂಸಾತ್ಮಕ(Voilence) ಹೋರಾಟವನ್ನು ಕಾಂಗ್ರೆಸ್(Congress) ಕರ್ನಾಟಕಕ್ಕೆ ಆಹ್ವಾನಿಸುತ್ತಿದೆ ಎಂದು ಬಿಜೆಪಿ ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ನ್ನು ಟೀಕಿಸಿದೆ. ಡಿಕೆಶಿ ಅವರೇ, ಕೇವಲ ಇಬ್ಬರು ವ್ಯಕ್ತಿಗಳಿಗಾಗಿ, ಕೇವಲ ಒಂದು ಕುಟುಂಬಕ್ಕಾಗಿ ಕೆಲಸ ಕಾರ್ಯ ಬಿಟ್ಟು, ಜನಸಾಮಾನ್ಯರ ಕೆಲಸಕ್ಕೂ ಅಡ್ಡಿ ಮಾಡಿಕೊಂಡು, ರಸ್ತೆಗಿಳಿದರೆ ಜನರು ನಿಮ್ಮನ್ನು ಕ್ಷಮಿಸುವರೇ? ಅಲ್ಲೆಲ್ಲೋ ಬೆಂಕಿ ಬಿದ್ದರೆ, ನಮ್ಮ ನಾಡಿನಲ್ಲಿ ಏಕೆ ಬಾವಿ ತೋಡುತ್ತೀರಿ?ಗಾಂಧಿ ಕುಟುಂಬದ ಪರವಾಗಿ ಭ್ರಷ್ಟಾಧ್ಯಕ್ಷ ಡಿಕೆಶಿ(DKS) ಮಾಡುವ ಭಾಷಣ “ಕಳ್ಳರು, ಕಳ್ಳರು ಸೇರಿ ಸಂತೆಗೆ ಹೋದಂತೆ” ಇದೆ.
ಅಕ್ರಮ ಆಸ್ತಿ(Illegal Property) ಸಂಪಾದನೆ ವಿಚಾರದಲ್ಲಿ ಜಾರಿ ನಿರ್ದೇಶನಾಲಯದ ತನಿಖೆ ಎದುರಿಸುತ್ತಿರುವ ವ್ಯಕ್ತಿಯೇ ಇಡಿ ವಿರುದ್ಧ ಪ್ರತಿಭಟನೆಗೆ ಕರೆ ನೀಡಿರುವುದು ಗೂಂಡಾಗಿರಿಯಲ್ಲದೇ ಮತ್ತೇನು?ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ನಕಲಿ ಗಾಂಧಿ ಕುಟುಂಬ ಈಗ “ಅನುಕಂಪ” ಗಿಟ್ಟಿಸುವ ನಾಟಕವಾಡುತ್ತಿದೆ. ತಾನು ಕಳ್ಳ ಪರರ ನಂಬೆ ಎಂಬ ಧೋರಣೆಯೇ ಕಾಂಗ್ರೆಸ್ ಅಸ್ಮಿತೆ. ನಕಲಿ ಗಾಂಧಿ ಮನೆತನದಿಂದ, ನಕಲಿ ಗಾಂಧಿ ಮನೆತನಕ್ಕಾಗಿ, ನಕಲಿ ಗಾಂಧಿ ಮನೆತನಕ್ಕೋಸ್ಕರ, ಇದು ಕಾಂಗ್ರೆಸ್ ಪಕ್ಷದ ಪ್ರಜಾಪ್ರಭುತ್ವ. ತಪ್ಪು ಮಾಡದವರು ಯಾರು ಎಂದು ಒಪ್ಪಿಕೊಂಡು ತನಿಖೆ ಎದುರಿಸುವ ಮುಕ್ತ ಮನಸ್ಸು ನಕಲಿ ಗಾಂಧಿ ಕುಟುಂಬಕ್ಕಿಲ್ಲ.

ತಪ್ಪು ಮಾಡದೇ ಇದ್ದರೆ ತನಿಖೆಯ ಅಗ್ನಿ ಪರೀಕ್ಷೆ ಎದುರಿಸಲು ಭಯವೇಕೆ? ಅಷ್ಟಕ್ಕೂ ತನಿಖೆ ಬೇಡ ಎನ್ನಲು, ನಕಲಿ ಗಾಂಧಿ ಕುಟುಂಬವನ್ನು ಹೊರಗಿಟ್ಟು ಭಾರತೀಯ ದಂಡ ಸಂಹಿತೆ ರಚಿಸಲಾಗಿದೆಯೇ? ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇಡಿ ನಕಲಿ ಗಾಂಧಿ ಕುಟುಂಬದ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ. ತಪ್ಪು ಮಾಡದೇ ಇದ್ದರೆ ಭಯವೇಕೆ? ಸಹಾನುಭೂತಿ ಗಿಟ್ಟಿಸುವುದಕ್ಕಾಗಿ ಕಾಂಗ್ರೆಸ್ ಪ್ರತಿಭಟನೆಯ ನಾಟಕ ಹೆಣೆಯುತ್ತಿದೆ. ಇದೊಂದು ಯೋಜಿತ ಸಂಚು ಅಷ್ಟೇ! ದೇಶಕ್ಕಾಗಿ ಮಡಿವ ಸೈನಿಕರ ಪರವಾಗಿ ಒಮ್ಮೆಯೂ ಕಾಂಗ್ರೆಸ್ ದನಿ ಎತ್ತಲಿಲ್ಲ.
ರೈತರು ಆತ್ಮಹತ್ಯೆ ಮಾಡಿಕೊಂಡಾಗಲೂ ಕಾಂಗ್ರೆಸ್ ಬೀದಿಗೆ ಬರಲಿಲ್ಲ. ಆದರೆ ನಕಲಿ ಗಾಂಧಿಗಳಿಗೆ ನೀಡಿದರೆ ಕಾಂಗ್ರೆಸ್ ರಸ್ತೆಗೆ ಬಂದು ನಿಂತಿದೆ ಎಂದು ಬಿಜೆಪಿ ಪ್ರಶ್ನಿಸಿದೆ.