Bengaluru: ಬಸವರಾಜ ಬೊಮ್ಮಾಯಿ(Basavaraj Bommai) ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ ಇಂದು ತನ್ನ ಕೊನೆಯ ಬಜೆಟ್ ಮಂಡಿಸಿದೆ. ಈ ಬಜೆಟ್ ಅನ್ನು(state budget Congress response) “ಕಿವಿ ಮೇಲೆ ಹೂ” ಎಂಬ ಹ್ಯಾಷ್ ಟ್ಯಾಗ್(Hash tag) ಬಳಸಿ ಕಾಂಗ್ರೆಸ್ ಟೀಕಿಸಿದೆ.

ಈ ಕುರಿತು ಸರಣಿ ಟ್ವೀಟ್(Tweet) ಮಾಡಿರುವ ರಾಜ್ಯ ಕಾಂಗ್ರೆಸ್, ವಿವಿಧ ಸಮುದಾಯಗಳ ಮೀಸಲಾತಿ ಹೆಚ್ಚಳದ ಭರವಸೆ ನೀಡಿತ್ತು ಬಿಜೆಪಿ.
ಆದರೆ ಆ ನಿಟ್ಟಿನಲ್ಲಿ ಸಣ್ಣ ಪ್ರಯತ್ನವನ್ನೂ ಮಾಡದೆ ಜನರ ಕಿವಿ ಮೇಲೆ ಹೂವಿಟ್ಟಿದೆ.
ಹೀಗಿರುವಾಗ ಬೊಮ್ಮಾಯಿ ಅವರ ಬಂಡಲ್ ಬಜೆಟ್(Budget) ನಂಬಿಕೆಗೆ ಅರ್ಹವೇ. ಮಹಿಳೆಯರಿಗೆ ಸ್ತ್ರೀ ಉನ್ನತಿ ನಿಧಿ ಸ್ಥಾಪಿಸುತ್ತೇವೆ, ಸ್ಮಾರ್ಟ್ ಫೋನ್(Smart Phone) ನೀಡುತ್ತೇವೆ ಎಂದಿತ್ತು ಬಿಜೆಪಿ.
ಅದ್ಯಾವ ಭರವಸೆಗಳೂ ಈಡೇರಿಲ್ಲ. ಹೀಗಿರುವಾಗ ಬೊಮ್ಮಾಯಿ ಅವರು ನಾಮಕಾವಸ್ಥೆಗೆ ಓದುತ್ತಿರುವ ಬಜೆಟ್ನಲ್ಲಿ ನಿರೀಕ್ಷೆ ಇಟ್ಟುಕೊಳ್ಳುವಂತಹ ಮೂರ್ಖತನ ಮತ್ತೊಂದಿಲ್ಲ ಎಂದು ಟೀಕಿಸಿದೆ.

ಇನ್ನೊಂದು ಟ್ವೀಟ್‌ನಲ್ಲಿ, ರೈತರ ಸಾಲ ಮನ್ನಾ ಮಾಡುತ್ತೇವೆ ಎಂದು ರೈತರ ಕಿವಿ ಮೇಲೆ ಹೂವಿಟ್ಟ ಸರ್ಕಾರ ಒಂದೇ ಒಂದು ರೈತಪರ ಯೋಜನೆ ಜಾರಿಗೊಳಿಸಲಿಲ್ಲ. ರೈತರ ಆತ್ಮಹತ್ಯೆಯಲ್ಲಿ (state budget Congress response) ಕರ್ನಾಟಕ 2ನೇ ಸ್ಥಾನದಲ್ಲಿದೆ.
ಈ ಸ್ಥಾನಕ್ಕೆ ಏರಿದ್ದು ಡಬಲ್ ಇಂಜಿನ್ ಸರ್ಕಾರಗಳ ಕೊಡುಗೆಯಿಂದಲೇ. ಬೆಂಬಲ ಬೆಲೆ ಇಲ್ಲ, ಸಾಲ ಮನ್ನವೂ ಇಲ್ಲ, ರೈತರೆಡೆಗೆ ಆಸಕ್ತಿಯೂ ಇಲ್ಲ.
ಲ್ಯಾಪ್ಟಾಪ್(Laptop) ಹಂಚಿಕೆಯಿಂದ ಹಿಡಿದು ವಿದ್ಯಾರ್ಥಿವೇತನದವರೆಗೂ ವಿದ್ಯಾರ್ಥಿಗಳಿಗೆ ಬಿಜೆಪಿ ಸರ್ಕಾರ(BJP Government) ಎಲ್ಲಾ ತರದಲ್ಲೂ ದ್ರೋಹವೆಸಗಿದೆ.
ಇದನ್ನೂ ಓದಿ: ಕರ್ನಾಟಕ ಬಜೆಟ್ : ಬೊಮ್ಮಾಯಿ ನೀಡಿದ ಕೊಡುಗೆಗಳ ವಿವರಗಳು
ಈಗಾಗಲೇ SC,ST ವಿದ್ಯಾರ್ಥಿವೇತನದ 4500 ಸಾವಿರ ಕೋಟಿ ಬಾಕಿ ಇದೆ. ಅದನ್ನೇ ಕೊಡದವರು ಬಜೆಟ್ ಘೋಷಣೆಗಳನ್ನು ಈಡೇರಿಸುವರೇ? 50% ರಷ್ಟೂ ಸಹ ಹಿಂದಿನ ಬಜೆಟ್ನ ಘೋಷಣೆಗಳು ಪ್ರಗತಿಯಾಗಿಲ್ಲ,
90%ರಷ್ಟು ಬಿಜೆಪಿಯ ಪ್ರಣಾಳಿಕೆಯ ಭರವಸೆಗಳು ಈಡೇರಿಲ್ಲ, 40% ಕಮಿಷನ್ ಲೂಟಿಗೆ ಯಾವುದೇ ಅಡೆತಡೆ ಇಲ್ಲ ಹೀಗಿರುವಾಗ ಬೊಮ್ಮಾಯಿ ಅವರು ಓದುತ್ತಿರುವ ಬಜೆಟ್ನಲ್ಲಿ ಬದ್ಧತೆ ಇಲ್ಲ.
ರಾಜ್ಯದ ಜನರ ಕಿವಿ ಮೇಲೆ ಹೂವಿಡುವ ಪ್ರಯತ್ನವಷ್ಟೇ ಎಂದು ಲೇವಡಿ ಮಾಡಿದೆ.

ಮತ್ತೊಂದು ಟ್ವೀಟ್ನಲ್ಲಿ, ಹಿಂದಿನ ಬಜೆಟ್ನ ಪ್ರಗತಿ 50% ಕೂಡ ದಾಟಿಲ್ಲ. ಇಂದಿನ ಬಜೆಟ್ ಟೀಕಾಫ್ ಆಗುವುದೇ ಇಲ್ಲ.
ಚುನಾವಣೆಗಾಗಿ ಬಣ್ಣ ಬಣ್ಣದ ಘೋಷಣೆ ಮಾಡಿ ರಾಜ್ಯದ ಜನರ ಕಿವಿ ಮೇಲೆ ಹೂವಿಡುವ ಪ್ರಯತ್ನದಲ್ಲಿದ್ದಾರೆ ಅಷ್ಟೇ. ಯಾವುದೇ ಯೋಜನೆ ಬಗ್ಗೆ ಕೇಳಿದರೂ ಅನುದಾನವಿಲ್ಲ, ಹಣವಿಲ್ಲ ಎನ್ನುವವರ ಬಜೆಟ್ನಿಂದ ನಿರೀಕ್ಷೆ ಇಟ್ಟುಕೊಳ್ಳುವುದು ಮೂರ್ಖತನ ಎಂದಿದೆ.