ರಾಜ್ಯ ಸಚಿವ ಸಂಪುಟ ವಿಸ್ತರಣೆ ಇಲ್ಲ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಕಲಬುರಗಿ, ಜು. 10: ಸಚಿವ ಸಂಪುಟ ವಿಸ್ತರಣೆ, ಪುನಾರಚನೆಯ ಯಾವುದೇ ಚಿಂತನೆಗಳೂ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಜ್ಯ ಸಚಿವ ಸಂಪುಟ ವಿಸ್ತರಣೆ, ಪುನಾರಚನೆಯ ಯಾವುದೇ ಚಿಂತನೆಗಳೂ ಇಲ್ಲ ಎಂದ ಅವರು, ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯದ ನಾಲ್ವರು ನಾಯಕರಿಗೆ ಸ್ಥಾನ ನೀಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಕೊರೋನಾ 3ನೇ ಅಲೆ ಆರಂಭವಾಗುವ ಸಾಧ್ಯತೆಗಳಿದ್ದು, ಮೂರನೇ ಅಲೆ ತಡೆಯನ್ನು ಪರಿಣಾಮಕಾರಿಯಾಗಿ ತಡೆಯಲು ಕ್ರಮಗಳನ್ನು ಕೈಗೊಳ್ಳಬೇಕಿದೆ. ಇದರ ಜೊತೆಗೆ ಅಭಿವೃದ್ಧಿ ಕಾರ್ಯಗಳನ್ನೂ ನಡೆಸಬೇಕಿದೆ ಎಂದು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಸುಮಲತಾ ನಡುವಿನ ವಿವಾದ ಕುರಿತು ಪ್ರತಿಕ್ರಿಯಿಸಿದ ಅವರು,
KRS ಅಣೆಕಟ್ಟು ಬಿರುಕು ವಿಚಾರ ಸಂಬಂಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಮಂಡ್ಯ ಸಂಸದೆ ಸುಮಲತಾ ನಡುವೆ ಮುಂದುವರೆದಿರುವ ವಾಕ್ಸಮರ ಕುರಿತ ಪ್ರಶ್ನೆಗೆ ಪ್ರತಿಕ್ರಿಯೆ ನೀಡಲು ಯಡಿಯೂರಪ್ಪ ಅವರು ನಿರಾಕರಿಸಿದ್ದಾರೆ.

Exit mobile version