Bengaluru : ಸೈಲೆಂಟ್ ಸುನಿಲ್ನನ್ನು ಯಾವುದೇ ಕಾರಣಕ್ಕೆ ಪಕ್ಷಕ್ಕೆ ಸೇರಿಸುವುದಿಲ್ಲ ಎಂದು ಹೇಳಿಕೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್(state-congress-Tweet Fires) ಅವರ ಹೇಳಿಕೆಗೆ ಇದೀಗ ರಾಜ್ಯ ಕಾಂಗ್ರೆಸ್ ತಿರುಗೇಟು ನೀಡಿದೆ.
ಮೊನ್ನೆಯಷ್ಟೇ ನಳಿನ್ ಕುಮಾರ್ ಕಟೀಲ್ ಅವರು ನೀಡಿದ ಹೇಳಿಕೆ ಹೀಗಿದೆ, ಸೈಲೆಂಟ್ ಸುನಿಲ್ನನ್ನು ಯಾವುದೇ ಕಾರಣಕ್ಕೆ ಪಕ್ಷಕ್ಕೆ ಸೇರಿಸುವುದಿಲ್ಲ.
ಬಿಜೆಪಿ, ವ್ಯಕ್ತಿಗಳ ನಿರ್ಮಾಣದ ಮೂಲಕ ದೇಶ ನಿರ್ಮಾಣದ ಕಾರ್ಯ ಮಾಡುತ್ತಿದೆ.
ಉಗ್ರಗಾಮಿಗಳು, ಭಯೋತ್ಪಾದನಾ ಚಟುವಟಿಕೆಗಳಿಗೆ ಬೆಂಬಲ ಕೊಡುವವರು ಮತ್ತು ಅಪರಾಧ ಹಿನ್ನಲೆ ಉಳ್ಳವರನ್ನೂ ಬಿಜೆಪಿ ಪಕ್ಷ(BJP Party) ಎಂದಿಗೂ ಸಹಿಸುವುದಿಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ ಕಟೀಲ್ ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ : https://vijayatimes.com/condom-packets-in-students-bag/
ಇತ್ತೀಚೆಗೆ ಅಪರಾಧ ಹಿನ್ನಲೆಯುಳ್ಳ ಸೈಲೆಂಟ್ ಸುನೀಲ್ ಬಿಜೆಪಿ ಪಕ್ಷದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದು ತೀವ್ರ ಟೀಕೆಗೆ ಗುರಿಯಾಗಿತ್ತು.
40% ಕಮಿಷನ್ ವಸೂಲಿ ಸಾಲದೆ ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಂಡು ಹಫ್ತಾ ವಸೂಲಿಗೂ ಬಿಜೆಪಿ ತಯಾರಿ ನಡೆಸಿರುವಂತಿದೆ.
ಬಿಜೆಪಿಯಲ್ಲಿ “ರೌಡಿ ಮೋರ್ಚಾ” ಎಂಬ ಹೊಸ ಘಟಕ ತೆರೆಯುವ ಲಕ್ಷಣವಿದೆ. ಸೋಲುವ ಭಯದಲ್ಲಿರುವ ಬಿಜೆಪಿ ರೌಡಿಗಳನ್ನು ಬಳಸಿ ಚುನಾವಣೆಗೆ ಸಿದ್ಧತೆ ನಡೆಸಿದೆಯೇ ಬೊಮ್ಮಾಯಿ ಅವರೇ?
ಇದೇನಾ ಬಿಜೆಪಿಯ ಸಂಸ್ಕೃತಿ, ಸಂಸ್ಕಾರ? ಎಂದು ರಾಜ್ಯ ಕಾಂಗ್ರೆಸ್(Congress) ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದೆ.
ಗಡಿಪಾರಾಗಿದ್ದ ಕ್ರಿಮಿನಲ್ನನ್ನು ಪಕ್ಷದ ಅಧ್ಯಕ್ಷನನ್ನಾಗಿ ಮಾಡಿದ್ದ ಬಿಜೆಪಿಗೆ ರೌಡಿಗಳು, ಕ್ರಿಮಿನಲ್ಗಳೇ ಆದರ್ಶ ವ್ಯಕ್ತಿಗಳು ಪೊಲೀಸರಿಂದ ಇಂತಹ ಆತಿಥ್ಯ ಪಡೆದ ಈ ವ್ಯಕ್ತಿಗೆ ರಾಜಾತಿಥ್ಯ ನೀಡುತ್ತಿದೆ ಬಿಜೆಪಿ.
ಪೊಲೀಸರೆದುರು ತಲೆ ತಗ್ಗಿಸಿ ನಿಲ್ಲುವವನಿಗೆ ಅದೇ ಪೊಲೀಸರಿಂದ ಸೆಲ್ಯೂಟ್ ಹೊಡೆಸಲು ಹವಣಿಸುತ್ತಿದೆ ಬಿಜೆಪಿ.
ಬಿಜೆಪಿಯಲ್ಲಿ ಈ ಮೊದಲು ವೈಟ್ ಕಾಲರ್ ರೌಡಿಗಳಿದ್ದರು, ಈಗ ರಿಯಲ್ ರೌಡಿಗಳು ಸೇರಿದ್ದಾರೆ. ಮುಂದೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಕೂಡ ಬಿಜೆಪಿ ಸೇರಿ ಪಾವನನಾಗಬಹುದು.
ಪಾತಕಿಗಳು, ದರೋಡೆಕೋರರು, ಡ್ರಗ್ ಪೆಡ್ಲರ್ಗಳು, ಕ್ರೀಮಿನಲ್ಗಳು, ಭ್ರಷ್ಟರು, ರೇಪಿಸ್ಟರು ಎಲ್ಲರಿಗೂ ಬಿಜೆಪಿ ಪಕ್ಷ ತವರು ಮನೆ ಇದ್ದಂತೆ.
ಇದನ್ನೂ ಓದಿ : https://vijayatimes.com/strength-secret-of-siddapajja/
ವಾಂಟೆಂಡ್ ಕ್ರಿಮಿನಲ್ಗಳೆಲ್ಲ ಈಗ ಬಿಜೆಪಿಗೆ ವಾಂಟೆಂಡ್. ರೌಡಿ ಶೀಟರ್ಗಳನ್ನು ಪಕ್ಕದಲ್ಲಿಟ್ಟುಕೊಳ್ಳುವ ಹಾಗೂ ಪಕ್ಷಕ್ಕೆ ಸೇರಿಸಿಕೊಳ್ಳುವ ಮೂಲಕ ಬಿಜೆಪಿ ಕಚೇರಿ ಈಗ ರೌಡಿಗಳ ಅಡ್ಡೆಯಾಗಿದೆ.
ಬಿಜೆಪಿ ಈಗ ಮತ್ತೊಬ್ಬ ರೌಡಿ ಫೈಟರ್ ರವಿ ಎಂಬಾತನನ್ನು ಪಕ್ಷಕ್ಕೆ ಸೇರಿಸಿಕೊಂಡ ಸಂಸ್ಕೃತಿ ಪಾಲನೆಗೆ ಮುಂದಾಗಿದೆ ಎಂದು ಟೀಕಿಸಿದೆ.
ಇದೀಗ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಗೆ ಟ್ವೀಟ್ ಮೂಲಕ ಚಾವಟಿ ಬೀಸಿರುವ ರಾಜ್ಯ ಕಾಂಗ್ರೆಸ್(State Congress),
ಡ್ಯಾಮೇಜ್ ಕಂಟ್ರೋಲಿಗಾಗಿ ಸೈಲೆಂಟ್ ಸುನಿಲನನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದ @nalinkateel
ಫೈಟರ್ ರವಿ ಪಕ್ಷ ಸೇರಿದ್ದರ ಬಗ್ಗೆ ಸೈಲೆಂಟ್ ಆಗಿರುವುದೇಕೆ?
https://twitter.com/INCKarnataka/status/1597881620605767680?s=20&t=2LBWF7a4Ahux_5_YhwFRIw
ಫೈಟರ್ ರವಿ ರೌಡಿ ಶೀಟರ್ ಅಲ್ಲವೇ @BJP4Karnataka? ಇಂತಹ ಸದಾರಮೆ ನಾಟಕ ಮಾಡುವುದಕ್ಕಿಂತ ರೌಡಿ ಮೋರ್ಚಾವನ್ನು ಘೋಷಣೆ ಮಾಡಿಬಿಡಲಿ! ಎಂದು ಟ್ವೀಟ್ ಮಾಡಿ ರಾಜ್ಯ ಬಿಜೆಪಿಗೆ ತಿರುಗೇಟು ನೀಡಿದೆ.