vijaya times advertisements
Visit Channel

ರೈತರ ಹೆಸರಲ್ಲಿ ಬೃಹತ್ ಹಗರಣ ನಡೆಸಿದ್ದೇ ‘ಬಿಜೆಪಿ’ ಸಾಧನೆ : ರಾಜ್ಯ ಕಾಂಗ್ರೆಸ್ ಆರೋಪ

bjp

ಬೆಂಗಳೂರು : ಮೋದಿ ಬಟನ್ ಒತ್ತಿದರೆ ರೈತರ ಖಾತೆಗೆ ಹಣ ಬೀಳುತ್ತದೆ ಎನ್ನುತ್ತಿತ್ತು ಬಿಜೆಪಿ. ಅಸಲಿಗೆ ಮೋದಿ ಬಟನ್ ಒತ್ತಿದಾಗ ಹಣ ಹೋಗಿದ್ದು ಭ್ರಷ್ಟರ ಜೇಬಿಗೆ! ರೈತರ ಹೆಸರಲ್ಲಿ ಬೃಹತ್ ಹಗರಣ ನಡೆಸಿದ್ದೇ ಬಿಜೆಪಿ ಎಂದು ರಾಜ್ಯ ಕಾಂಗ್ರೆಸ್ (state-congress-tweets) ಆರೋಪಿಸಿದೆ.

state-congress-tweets

ರೈತರ ಹೆಸರಲ್ಲಿ ಬೃಹತ್ ಹಗರಣ ನಡೆಸಿದ್ದೇ ‘ಬಿಜೆಪಿ’ ಸಾಧನೆ. ಮೋದಿ ಬಟನ್ ಮಹಿಮೆಗೆ ಧಾರವಾಡ ಒಂದರಲ್ಲೇ ಇಷ್ಟೊಂದು ಅಕ್ರಮ ನಡೆದಿರುವಾಗ ದೇಶಾದ್ಯಂತ ಇನ್ನೆಷ್ಟು ಹಣ ಲೂಟಿಯಾಗಿರಬಹುದು? ಎಂಬುದನ್ನು ಯೋಚಿಸಲೇಬೇಕು ಎಂದು ಬಿಜೆಪಿ ಸರ್ಕಾರವನ್ನು ಟೀಕಿಸಿದೆ.

ಇನ್ನು ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಮೋಸವಾಗಿದೆ ಎಂದು ಆರೋಪಿಸಿದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಸಿದ್ದರಾಮಯ್ಯ ಈ ಕುರಿತು ಸರಣಿ ಟ್ವೀಟ್‌ (Tweet) ಮಾಡಿರುವ ಅವರು,

ಮತದಾರರ ಪಟ್ಟಿ ಪರಿಷ್ಕರಣೆಗಾಗಿ ಚಿಲುಮೆ ಸಂಸ್ಥೆಗೆ ನೀಡಿರುವ ಅನುಮತಿಯನ್ನು ರದ್ದು ಪಡಿಸಿದ್ದೀರಿ ಸರಿ, ಆದರೆ ಆ ಸಂಸ್ಥೆ ಅಕ್ರಮವಾಗಿ ಸಂಗ್ರಹಿಸಿರುವ ಮಾಹಿತಿ ಏನಾಯಿತು?

ಇದನ್ನೂ ಓದಿ : https://vijayatimes.com/bengaluru-will-be-economic-capital/

ಆ ಸಂಸ್ಥೆ ಬಿಬಿಎಂಪಿಗೆ ಸಲ್ಲಿಸಿದೆಯಾ? ಇಲ್ಲವೇ ಯಾವುದಾದರೂ ರಾಜಕೀಯ ಪಕ್ಷಕ್ಕೆ ಮಾರಿದೆಯಾ? ಸಮಾಜ ಸೇವೆಗೆ ಬೇಕಾದಷ್ಟು ಅವಕಾಶ ಇರುವಾಗ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಉಚಿತವಾಗಿ ಮಾಡುತ್ತೇವೆ ಎಂದು ಸಂಸ್ಥೆ ಅರ್ಜಿ ನೀಡಿದಾಗಲೇ ಅದರ ಹಿಂದಿನ ದುರುದ್ದೇಶದ ಅರಿವು ಬಿಬಿಎಂಪಿಗೆ (BBMP) ಆಗಬೇಕಿತ್ತು.

ಆಗಿಲ್ಲ ಎಂದರೆ ಬಿಬಿಎಂಪಿ ಹಗರಣದದಲ್ಲಿ ಭಾಗಿಯಾಗಿದೆ ಎಂದು ಅರ್ಥ ಅಲ್ಲವೇ? ಎಂದು ಪ್ರಶ್ನಿಸಿದ್ದಾರೆ. ದೂರು ಬಂದ ಕಾರಣಕ್ಕೆ ಚಿಲುಮೆಗೆ ನೀಡಿರುವ ಅನುಮತಿಯನ್ನು ಬಿಬಿಎಂಪಿ ರದ್ದು ಪಡಿಸಿರುವುದನ್ನು ಸ್ವಾಗತಿಸುತ್ತೇನೆ.

ಮಾಡಿರುವ ಅಪರಾಧಕ್ಕೆ ಅನುಮತಿ ರದ್ದತಿ ಶಿಕ್ಷೆ ಅಲ್ಲವಲ್ಲಾ? ಗುತ್ತಿಗೆಯನ್ನು ರದ್ದುಗೊಳಿಸುವ ಮೂಲಕ ಆಗಿರುವ ಅಪರಾಧವನ್ನು ಇಲಾಖೆಯೇ ಒಪ್ಪಿಕೊಂಡಂತಾಗಿಲ್ಲವೇ?

CM

ಉಚಿತವಾಗಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಸಿರುವ ಚಿಲುಮೆ ಸಂಸ್ಥೆಯ ಹಿನ್ನೆಲೆ ಏನು? ಅದರ ಮಾಲೀಕರು ಯಾರು? ಹಣಕಾಸು ಸಾಮರ್ಥ್ಯ ಏನು? ಉದ್ಯೋಗಿಗಳ ಸಂಖ್ಯೆ ಎಷ್ಟು? ಅದರ ಹಣಕಾಸಿನ ಮೂಲ ಯಾವುದು? ಈ ಬಗ್ಗೆ ತನಿಖೆಯಾಗಲಿ.

ಮುಖ್ಯಮಂತ್ರಿ ಬೊಮ್ಮಾಯಿ ಅವರು ತಮ್ಮನ್ನು ರಕ್ಷಿಸಿಕೊಳ್ಳಲು ಆಪರೇಷನ್ (state-congress-tweets) ವೋಟರ್ ಹಗರಣವನ್ನು ಜಾತಿಗಣತಿಗೆ ಹೋಲಿಸಿದ್ದಾರೆ.

ಇದನ್ನೂ ಓದಿ : https://vijayatimes.com/nalin-allegation-over-congress/

ಒಂದು ಸಂಸ್ಥೆಯ ಹಿನ್ನೆಲೆಯನ್ನೂ ಪರಿಶೀಲಿಸದೆ ಮತದಾರರ ಪಟ್ಟಿ ಪರಿಷ್ಕರಣೆಗೆ ನೀಡಿರುವ ಅನುಮತಿಗೂ, ಸುಪ್ರೀಂಕೋರ್ಟ್(Supremecourt) ಆದೇಶದಂತೆ ರಾಜ್ಯ ಸರ್ಕಾರ ನಡೆಸಿರುವ ಜಾತಿಗಣತಿಗೂ ಏನು ಸ್ವಾಮಿ ಸಂಬಂಧ? ಎಂದು ಪ್ರಶ್ನಿಸಿದ್ದಾರೆ.

Siddaramaiah

ಮತದಾರರ ಪಟ್ಟಿ ಪರಿಷ್ಕರಣೆಯ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬೊಮ್ಮಾಯಿ ಅವರ ವಿರುದ್ಧವೇ ನಾವು ದೂರು ನೀಡಿದ್ದೆವು. ಮುಖ್ಯಮಂತ್ರಿಗಳು 20,000 ರೂಪಾಯಿ ಸಂಬಳದ ಬಡಪಾಯಿ ಏಜೆಂಟನನ್ನು ಬಲಿಪಶು ಮಾಡಿ ತಾವು ಪಾರಾಗುವ ಸಂಚು ನಡೆಸಿದ್ದಾರೆ.

https://twitter.com/INCKarnataka/status/1593573483245699075?s=20&t=zcHUzKBkdbTgWNBq9i-sew

ಆಪರೇಷನ್ ವೋಟರ್ ಹಗರಣವನ್ನು ಹಾಸ್ಯಾಸ್ಪದ ಎಂದು ತಳ್ಳಿಹಾಕಿರುವ ಮುಖ್ಯಮಂತ್ರಿ ಬೊಮ್ಮಾಯಿ, ಈ ಹಗರಣದ ರೂವಾರಿಗಳನ್ನು ರಕ್ಷಿಸಲು,

ಸಂಸ್ಥೆಯ ಒಬ್ಬ ಏಜೆಂಟನ ವಿರುದ್ಧ ಪೊಲೀಸರಿಂದ ಎಫ್ಐಆರ್(FIR) ಹಾಕಿಸಿ ತಮ್ಮ ಸರ್ಕಾರದ ಕೆಲಸ ಎಷ್ಟು ಹಾಸ್ಯಾಸ್ಪದ ಎನ್ನುವುದನ್ನು ಸಾಬೀತುಪಡಿಸಿದ್ದಾರೆ ಎಂದು ಟೀಕಿಸಿದ್ದಾರೆ.

Latest News

ರಾಜ್ಯ

ಬೆಳಗಾವಿ ಗಡಿ ವಿವಾದ : ಭದ್ರತೆಯ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಬಸ್ ಸಂಚಾರ ಸ್ಥಗಿತಗೊಳಿಸಿದ ಮಹಾರಾಷ್ಟ್ರ!

ಬೆಳಗಾವಿ ಗಡಿ ವಿವಾದದ ಕುರಿತು ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಬಿರುಕು ಶೀಘ್ರದಲ್ಲೇ ಶಮನಗೊಳ್ಳುವ ಲಕ್ಷಣ ಕಂಡುಬರುತ್ತಿಲ್ಲ ಎಂಬುದನ್ನು ಉಲ್ಲೇಖಿಸಿದೆ.

ಮನರಂಜನೆ

ನೆಟ್ ಫ್ಲಿಕ್ಸ್ ನಲ್ಲಿ ಕಾಂತಾರ ಹಿಂದಿ, ಇಂಗ್ಲೀಷ್ ಭಾಷೆಯಲ್ಲಿ ಲಭ್ಯವಾಗಲಿದೆ : ರಿಷಬ್ ಶೆಟ್ಟಿ

ಕಾಂತಾರ ಓಟಿಟಿಯಲ್ಲಿ ಮೊದಲ ಬಾರಿಗೆ ಬಿಡುಗಡೆಯಾದ ವೇಳೆ ಕಾಂತಾರ ಚಿತ್ರದ ಅಸಲಿ ವರಾಹ ರೂಪಂ ಹಾಡು ತೆಗೆದು ಹಾಕಲಾಗಿತ್ತು.

ಪ್ರಮುಖ ಸುದ್ದಿ

ದೆಹಲಿ ಮಹಾನಗರ ಪಾಲಿಕೆ ಚುನಾವಣೆ: ಜಯದ ಹಾದಿಯಲ್ಲಿ ಆಪ್

ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲೋ ಪ್ರಕಾರ ಬಿಜೆಪಿ 69 ರಿಂದ 91 ವಾರ್ಡ್ ಗಳಲ್ಲಿ ಗೆಲುವು ಸಾಧ್ಯತೆ ಹಾಗೂ ಕಾಂಗ್ರೆಸ್ 3 ರಿಂದ 7 ವಾರ್ಡ್ ಗಳಲ್ಲಿ ಗೆಲ್ಲುತ್ತದೆ ಎಂದು ಸಮೀಕ್ಷೆ ತಿಳಿಸಿದೆ

ಪ್ರಮುಖ ಸುದ್ದಿ

ಬೆಳಗಾವಿಯಲ್ಲಿ ಕಲ್ಲು ತೂರಾಟ ; ಪುಣೆಯಲ್ಲಿ ಕರ್ನಾಟಕ ಬಸ್‌ಗಳಿಗೆ ಮಸಿ ಬಳಿದ ಶಿವಸೇನಾ!

ಕರ್ನಾಟಕ-ಮಹಾರಾಷ್ಟ್ರ ಮುಖ್ಯಮಂತ್ರಿಗಳ ನಡುವಿನ ವಾಗ್ಸಮರ ಗಡಿ ಭಾಗದಲ್ಲಿ ಘರ್ಷಣಗೆ ಪ್ರಮುಖವಾಗಿದೆ. ಎಂ.ಇ.ಎಸ್ (M.E.S) ಪುಂಡರ ಹಾವಳಿ ಹೆಚ್ಚಾಗಿದ್ದು, ಕರ್ನಾಟಕ ರಾಜ್ಯದ ಬಸ್‌ಗಳನ್ನು ಅಡಗಟ್ಟಿ ಮಸಿ ಹಚ್ಚಿ ಆಕ್ರೋಶ ಹೊರಹಾಕಿದ್ದರು