ಮದರಸಾಗಳಲ್ಲೂ ತ್ರಿವರ್ಣ ಧ್ವಜ ಹಾರಲೇಬೇಕು : ರಾಜ್ಯ ಸರ್ಕಾರ ಆದೇಶ

India

ಬೆಂಗಳೂರು : ರಾಜ್ಯದ ಎಲ್ಲ ಮದರಸಾಗಳಲ್ಲೂ ತ್ರಿವರ್ಣ ಧ್ವಜವನ್ನು(National Flag) ಕಡ್ಡಾಯವಾಗಿ ಹಾರಿಸಲೇಬೇಕು ಎಂದು ರಾಜ್ಯ ಶಿಕ್ಷಣ ಇಲಾಖೆ(State Education Department) ಖಡಕ್‌ ಆದೇಶ ಹೊರಡಿಸಿದೆ. ಈ ಆದೇಶವನ್ನು ಉಲ್ಲಂಘನೆ ಮಾಡುವ ಮದರಸಾಗಳ ಮೇಲೆ ಮತ್ತು ಆದೇಶವನ್ನು ಅನುಷ್ಠಾನಗೊಳಿಸದ ಸಿಬ್ಬಂದಿ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿರುವ ಎಲ್ಲಾ ಮದರಸಾಗಳಲ್ಲಿ ಸ್ವಾತಂತ್ರ್ಯ ಹೋರಾಟದ ಕುರಿತು ಅನೇಕ ಸ್ಪರ್ಧೆಗಳನ್ನು ನಡೆಸಬೇಕು.

ಸ್ವಾತಂತ್ರ್ಯ ಹೋರಾಟಗಾರರ ಚಿತ್ರ ಬಿಡಿಸುವ ಸ್ಪರ್ಧೆ, ರಾಷ್ಟ್ರಭಕ್ತಿ ಗೀತ ಗಾಯನ, ಸ್ವಾತಂತ್ರ್ಯ ಸಂಗ್ರಾಮದ ಕುರಿತು ಕ್ವಿಜ್, ಪ್ರಬಂಧ ಸ್ಪರ್ಧೆಗಳನ್ನು ಕಡ್ಡಾಯವಾಗಿ ಏರ್ಪಡಿಸಬೇಕು. ಈ ಎಲ್ಲ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮಕ್ಕಳಲ್ಲಿ ರಾಷ್ಟ್ರಭಕ್ತಿಯನ್ನು ಪ್ರೇರೇಪಿಸಬೇಕು. ಇನ್ನು ರಾಜ್ಯದ ಎಲ್ಲ ಶಾಲಾ-ಕಾಲೇಜುಗಳ ಶಿಕ್ಷಕರು ಮತ್ತು ಇತರೆ ಸಿಬ್ಬಂದಿ ತಮ್ಮ ಮನೆಗಳ ಮೇಲೆ ತ್ರಿವರ್ಣಧ್ವಜ ಹಾರಿಸುವಂತೆ ಆದೇಶ ನೀಡಲಾಗಿದೆ.
ಇನ್ನು ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಆಗುತ್ತಿದೆ. ಹೀಗಾಗಿ “ಸ್ವಾತಂತ್ರ್ಯದ ಅಮೃತ ಮಹೋತ್ಸವ” ಹಿನ್ನೆಲೆ ಕೇಂದ್ರ ಸರ್ಕಾರ ಹರ್ ಘರ್ ತಿರಂಗಾ’ ಅಭಿಯಾನ ಘೋಷಿಸಿದೆ.

ಇದರ ಹಿನ್ನೆಲೆ ಆಗಸ್ಟ್ 11 ರಿಂದ 17 ರವರೆಗೆ ರಾಜ್ಯದ ಎಲ್ಲ ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು, ಪಿಯುಸಿ ಕಾಲೇಜುಗಳು ಮುಖ್ಯವಾಗಿ ಮದರಸಾಗಳ ಮೇಲೂ ಕಡ್ಡಾಯವಾಗಿ ತಿರಂಗಾ ಹಾರಿಸಲೇಬೇಕು ಎಂದು ಶಿಕ್ಷಣ ಇಲಾಖೆಯ ಕಾರ್ಯದರ್ಶಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್(BC Nagesh) ಪತ್ರ ಬರೆದಿದ್ದಾರೆ. ಹೀಗಾಗಿ ಶಿಕ್ಷಣ ಸಚಿವರ ಸೂಚನೆಯಂತೆ ಶಿಕ್ಷಣ ಇಲಾಖೆ ಈ ಆದೇಶ ಹೊರಡಿಸಿದೆ. ಇನ್ನು ಕೇಂದ್ರ ಸರ್ಕಾರ “ಸ್ವಾತಂತ್ರ್ಯದ ಅಮೃತ ಮಹೋತ್ಸವ” ಹಿನ್ನೆಲೆ `ಹರ್ ಘರ್ ತಿರಂಗಾ’ ಅಭಿಯಾನ ಘೋಷಿಸಿದ್ದು, ದೇಶದ ೨೦ ಕೋಟಿ ಮನೆಗಳ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಗುರಿ ಹೊಂದಲಾಗಿದೆ.

Exit mobile version