- ರಾಜ್ಯ ಸರ್ಕಾರದ ಮಹತ್ವದ ಆದೇಶ: ಸರ್ಕಾರಿ ವೈದ್ಯರಿಗೆ ಇನ್ಮುಂದೆ (State government bans inpatient treatment by Govt. doctors) ಹೊಸ ನಿಯಮಗಳು
- ಕರ್ತವ್ಯಕ್ಕೆ ಅಡ್ಡಿಯಾಗುತ್ತಿದೆ ಎಂಬ ಕಾರಣಕ್ಕೆ ಸರ್ಕಾರದ ಕಟ್ಟುನಿಟ್ಟಿನ ಆದೇಶ, OPDಗೆ ಮಾತ್ರ ಸೀಮಿತ ಅನುಮತಿ
- ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮ, ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಸರ್ಕಾರದ ಕ್ರಮ
Bengaluru: ಕರ್ನಾಟಕ ರಾಜ್ಯ ಸರ್ಕಾರವು ಸರ್ಕಾರಿ ವೈದ್ಯರ ಖಾಸಗಿ ವೈದ್ಯಕೀಯ ಅಭ್ಯಾಸಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.
ಇನ್ಮುಂದೆ ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಗಳಿಗೆ (Inpatients) ಚಿಕಿತ್ಸೆ ನೀಡುವಂತಿಲ್ಲ (State government bans inpatient treatment by Govt. doctors)ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸ್ಪಷ್ಟ ಆದೇಶ ಹೊರಡಿಸಿದೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವುದರಿಂದ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಯಾಗುತ್ತಿದೆ ಹಾಗೂ ರೋಗಿಗಳ ಆರೈಕೆಯಲ್ಲಿ ನಿರ್ಲಕ್ಷ್ಯ ಕಂಡುಬರುತ್ತಿದೆ ಎಂಬ ದೂರುಗಳ ಹಿನ್ನೆಲೆ ಈ ತೀರ್ಮಾನ ಕೈಗೊಳ್ಳಲಾಗಿದೆ.

ಈ ನಿಯಮವನ್ನು ಉಲ್ಲಂಘಿಸುವ ವೈದ್ಯರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಸರ್ಕಾರ ಎಚ್ಚರಿಕೆ ನೀಡಿದೆ.
ಆರೋಗ್ಯ ಇಲಾಖೆ ಹೊರಡಿಸಿದ ಸುತ್ತೋಲೆಯಲ್ಲಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಒಳರೋಗಿಗಳಿಗೆ ನಿರಂತರ ಹಾಗೂ ಗುಣಮಟ್ಟದ ಚಿಕಿತ್ಸೆ ಒದಗಿಸುವುದು ಸರ್ಕಾರದ ಮೊದಲ ಆದ್ಯತೆಯಾಗಿದ್ದು, ವೈದ್ಯರು ತಮ್ಮ ಸಂಪೂರ್ಣ ಗಮನವನ್ನು ಸರ್ಕಾರಿ ಸೇವೆಗೆ ಮೀಸಲಿಡಬೇಕು ಎಂದು ಸೂಚಿಸಲಾಗಿದೆ.
ಹಲವಾರು ಆಸ್ಪತ್ರೆಗಳಲ್ಲಿ ವೈದ್ಯರು ಖಾಸಗಿ ಆಸ್ಪತ್ರೆಗಳಿಗೆ ಹೆಚ್ಚು ಸಮಯ ಮೀಸಲಿಟ್ಟು ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ಆರೈಕೆಯಲ್ಲಿ ಲೋಪವಾಗುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ.
ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಬಲಪಡಿಸುವುದು ಹಾಗೂ ಸರ್ಕಾರಿ ಆಸ್ಪತ್ರೆಗಳ ಸೇವಾ ಗುಣಮಟ್ಟ ಹೆಚ್ಚಿಸುವುದು ಈ ಆದೇಶದ ಮುಖ್ಯ ಉದ್ದೇಶವಾಗಿದೆ.
ಆದರೆ, ಸರ್ಕಾರಿ ವೈದ್ಯರಿಗೆ ಖಾಸಗಿ ವೈದ್ಯಕೀಯ ಅಭ್ಯಾಸವನ್ನು ಸಂಪೂರ್ಣವಾಗಿ ನಿಷೇಧಿಸಿಲ್ಲ.
ಅಧಿಕೃತ ಕರ್ತವ್ಯ ಸಮಯದ ಹೊರಗೆ ಖಾಸಗಿ OPD (ಹೊರರೋಗಿ) ಸೇವೆ ನೀಡಲು ಅವಕಾಶ ಕಲ್ಪಿಸಲಾಗಿದೆ. ಆದರೆ ಈ ಅವಕಾಶಕ್ಕೂ ಕಟ್ಟುನಿಟ್ಟಿನ ನಿಯಮಗಳನ್ನು ವಿಧಿಸಲಾಗಿದೆ.(State government bans inpatient treatment by Govt. doctors)
ವೈದ್ಯರು ಒಂದೇ ಒಂದು ಖಾಸಗಿ ಕ್ಲಿನಿಕ್ ಅಥವಾ ಆಸ್ಪತ್ರೆಯಲ್ಲಿ ಮಾತ್ರ OPD ಸೇವೆ ನೀಡಬೇಕು.
ಆ ಖಾಸಗಿ ಅಭ್ಯಾಸದ ಸಂಪೂರ್ಣ ವಿವರಗಳನ್ನು ಆರೋಗ್ಯ ಇಲಾಖೆಗೆ ಸಲ್ಲಿಸುವುದು ಕಡ್ಡಾಯ. ಯಾವುದೇ ರೀತಿಯ ನಿಯಮ ಉಲ್ಲಂಘನೆ ಕಂಡುಬಂದಲ್ಲಿ, ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಇದೇ ವೇಳೆ, ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ನೀಡಲಾಗುವ ಆಹಾರದ ಗುಣಮಟ್ಟದ ಬಗ್ಗೆ ಸಾರ್ವಜನಿಕರಿಂದ ಬಂದಿರುವ ದೂರುಗಳನ್ನು ಗಂಭೀರವಾಗಿ ಪರಿಗಣಿಸಿರುವ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ.
ಇನ್ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಪೌಷ್ಟಿಕ ಹಾಗೂ ಗುಣಮಟ್ಟದ ಆಹಾರ ಒದಗಿಸಲು ಹೊಸ ಆಹಾರ ಮೆನು ಜಾರಿಗೊಳಿಸಲಾಗಿದೆ.
ಈ ಯೋಜನೆಯಡಿ ಇಸ್ಕಾನ್ ಸಂಸ್ಥೆಯ ಸಹಯೋಗದಲ್ಲಿ ಮೂರು ವರ್ಷಗಳ ಒಪ್ಪಂದ ಮಾಡಿಕೊಳ್ಳಲಾಗಿದೆ.
ರೋಗಿಗಳ ಆರೋಗ್ಯ ಸುಧಾರಣೆಗೆ ಪೌಷ್ಟಿಕ ಆಹಾರ ಅತ್ಯಂತ ಅಗತ್ಯವಾಗಿರುವುದರಿಂದ, ಆಹಾರದ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂಬ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಹೊಸ ಆಹಾರ ಮೆನು ಪ್ರಕಾರ, ಬೆಳಿಗ್ಗೆ ತಿಂಡಿಗೆ ರವೆ ಉಪ್ಪಿಟ್ಟು, ಗೋಧಿ ತಿನಿಸು, ಪೊಂಗಲ್, 100 ಗ್ರಾಂ ಬ್ರೆಡ್(100 grams of bread) ಮತ್ತು ಬಾಳೆಹಣ್ಣು ನೀಡಲಾಗುತ್ತದೆ.
ಮಧ್ಯಾಹ್ನ ಊಟಕ್ಕೆ ರಾಗಿ ಮುದ್ದೆ, ಅನ್ನ, ಸಾಂಬಾರ್ ಹಾಗೂ ಸೋಯಾ ಚಂಕ್ಸ್ (Soya Chunks)ಸೇರಿದೆ. ಸಂಜೆ ಟೀ ಹಾಗೂ ಬಿಸ್ಕೆಟ್(Biscuit) ನೀಡಲಾಗುತ್ತಿದ್ದು, ರಾತ್ರಿ ಊಟಕ್ಕೆ ಚಪಾತಿ, ತರಕಾರಿ ಪಲ್ಯ, ಅನ್ನ-ಸಾಂಬಾರ್ ಮತ್ತು ಕಾಳುಗಳ ಪಲ್ಯ ಒದಗಿಸಲಾಗುತ್ತದೆ.
ಈ ಮೂಲಕ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳ ಆರೋಗ್ಯದ ಜೊತೆಗೆ ಪೌಷ್ಟಿಕತೆಯ ಮೇಲೂ ಸರ್ಕಾರ ವಿಶೇಷ ಗಮನ ಹರಿಸಿದೆ.
ವೈದ್ಯಕೀಯ ಸೇವೆಯ ಶಿಸ್ತು ಮತ್ತು ರೋಗಿ ಆರೈಕೆಯ ಗುಣಮಟ್ಟವನ್ನು ಸುಧಾರಿಸುವತ್ತ ಈ ಎರಡೂ ನಿರ್ಧಾರಗಳು ಮಹತ್ವದ ಹೆಜ್ಜೆಯಾಗಿ ಪರಿಗಣಿಸಲಾಗಿದೆ.
ಇದನ್ನು ಓದಿ:https://vijayatimes.com/drugs-worth-rs-4-crore-seized-in-bengaluru/