Visit Channel

ರಾಜ್ಯದ ಮಹಿಳಾ ಸಾಂತ್ವಾನ ಕೇಂದ್ರಗಳ ಸ್ಥಗಿತಕ್ಕೆ ರಾಜ್ಯ ಸರ್ಕಾರ ನಿರ್ಧಾರ; ಸರ್ಕಾರದ ಕ್ರಮಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಆಕ್ಷೇಪ

kumarswamy

ಬೆಂಗಳೂರು, ಮೇ. 01: ರಾಜ್ಯದಲ್ಲಿ ಎಲ್ಲಾ ಜಿಲ್ಲೆಗಳಲ್ಲಿರುವ ಮಹಿಳಾ ಸಾಂತ್ವಾನ ಕೇಂದ್ರಗಳನ್ನು ಮುಚ್ಚಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ಈ ನಿರ್ಧಾರವನ್ನು ಖಂಡಿಸಿ ಟ್ವೀಟ್‌ ಮಾಡಿರುವ ಅವರು, ಮಹಿಳೆಯರಿಗೆ ಆಸರೆಯಾಗಿದ್ದ ಸಾಂತ್ವನ ಕೇಂದ್ರಗಳಿಗೆ ಸರ್ಕಾರ ಬೀಗ ಜಡಿಯಲ್ಲ ಎಂದಿದ್ದ ಮುಖ್ಯಮಂತ್ರಿಗಳು ಸದ್ದಿಲ್ಲದಂತೆ ಎಲ್ಲಾ ಜಿಲ್ಲಾ ಮತ್ತು ಕೆಲವು ತಾಲ್ಲೂಕು ಮಟ್ಟದ 71 ಕೇಂದ್ರಗಳ ಸಾಂತ್ವನ‌ ಕೇಂದ್ರಗಳಿಗೆ ಬೀಗ ಜಡಿಸಿ ಮಾತು ತಪ್ಪಿದ್ದಾರೆ. ಆ ಮೂಲಕ ಕೋವಿಡ್ 19 ಸಂಕಷ್ಟದಲ್ಲಿ ಸ್ತ್ರೀಯರಿಗೆ ಮತ್ತೊಂದು ಬರೆ ಎಳೆದಂತಾಗಿದೆ. ಕೌಟುಂಬಿಕ ಹಿಂಸಾಚಾರ ನಿಯಂತ್ರಿಸಿ ಮಹಿಳೆಯರು ಮತ್ತು ಮಕ್ಕಳಿಗೆ ರಕ್ಷಣೆ ಒದಗಿಸುವ ವಿಶ್ವಸಂಸ್ಥೆಯ ಆಶಯ ಬದಿಗೊತ್ತಿರುವುದು ಖಂಡನೀಯ ಎಂದಿದ್ದಾರೆ.

ಕಳೆದ ಎರಡು ದಶಕಗಳಿಂದ ಸಾಂತ್ವನ ಯೋಜನೆ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದ್ದು, ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿನ ಸಾಂತ್ವನ ಕೇಂದ್ರಗಳು ಮಹಿಳೆಯರ ಸಮಸ್ಯೆಗಳಿಗೆ ಧ್ವನಿಯಾಗಿ, ಆತ್ಮವಿಶ್ವಾಸ ಮೂಡಿಸುತ್ತಿವೆ. ರಾಜ್ಯದ ಪ್ರತಿ ಜಿಲ್ಲೆ ಹಾಗೂ ತಾಲ್ಲೂಕುಗಳಲ್ಲಿ ಆರಂಭಗೊಂಡಿದ್ದ ಸಾಂತ್ವನ ಕೇಂದ್ರಗಳನ್ನು ಸ್ಥಗಿತಗೊಳಿಸಿ ಅದೇಶ ಹೊರಡಿಸಿರುವುದು ದೂರು ದುಮ್ಮಾನ ಪರಿಹರಿಸುವವರು ಯಾರು ಎಂಬ ಪ್ರಶ್ನೆ‌ ಎದುರಾಗಿದೆ.

ಸರ್ಕಾರದ ಸಖಿ ಒನ್ ಸ್ಟಾಪ್ ಸೆಂಟರ್ ಯೋಜನೆ ಲೈಂಗಿಕ ಮತ್ತು ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ವೈದ್ಯಕೀಯ ಚಿಕಿತ್ಸೆ, ಕಾನೂನು ನೆರವು, ಸಲಹೆ ನೀಡುವ ಉದ್ದೇಶವನ್ನು ಹೊಂದಿದ್ದರೂ ಕರ್ನಾಟಕದಲ್ಲಿ ಅದು ಪೂರ್ಣ ಪ್ರಮಾಣದಲ್ಲಿ ಕಾರ್ಯ ಮಾಡುತ್ತಿಲ್ಲ. ಜಿಲ್ಲೆಗೆ ಕೇವಲ ಒಂದೇ ಒಂದು ಕೇಂದ್ರ ಇರುವ ಕಾರಣ ಎಲ್ಲರಿಗೂ ಸುಲಭವಾಗಿ ನೆರವು ಸಿಗಲು ಸಾಧ್ಯವಾಗುತ್ತಿಲ್ಲ.

ಇನ್ನು, ಕೌಟುಂಬಿಕ ಸಮಸ್ಯೆ ಎದುರಿಸುತ್ತಿರುವ ಮಹಿಳೆಯರ ಕಷ್ಟವನ್ನು ದೇವರೇ ಕಾಪಡಬೇಕಿದೆ. ಈ ಸಮಯದಲ್ಲಿ ಸಾಂತ್ವನ ಸಿಬ್ಬಂದಿಯನ್ನು ಕೆಲಸದಿಂದ ತೆಗೆಯುವುದು ಸೂಕ್ತವಲ್ಲ. ಆದ್ದರಿಂದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಕೂಡಲೇ ಅದೇಶ ಹಿಂಪಡೆದು ಸಾಂತ್ವನ ಕೇಂದ್ರಗಳನ್ನು ಮುಂದುವರೆಸಿ. ಶೋಷಿತ ಮಹಿಳೆಯರಿಗೆ ಸಾಂತ್ವನ ಕೇಂದ್ರಗಳು ಆಸರೆಯಾಗಲಿ ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

Latest News

Russia
ದೇಶ-ವಿದೇಶ

ಜನಸಂಖ್ಯೆ ಹೆಚ್ಚಳಕ್ಕೆ 10 ಮಕ್ಕಳಿಗೆ ಜನ್ಮ ನೀಡಿದ್ರೆ 13 ಲಕ್ಷ ಬಹುಮಾನ : ರಷ್ಯಾ ಅಧ್ಯಕ್ಷ ಪುಟಿನ್‌ ಘೋಷಣೆ

ರಷ್ಯಾದ ರಾಜಕೀಯ(Russia Politics) ಮತ್ತು ಭದ್ರತಾ ತಜ್ಞ ಡಾ ಜೆನ್ನಿ ಮ್ಯಾಥರ್ಸ್, ಟೈಮ್ಸ್ ರೇಡಿಯೊದಲ್ಲಿ ಈ ಕುರಿತು ಮಾತನಾಡಿ, “ಮದರ್ ಹೀರೋಯಿನ್” ಎಂದು ಕರೆಯಲ್ಪಡುವ ಬಹುಮಾನ ಯೋಜನೆ

Dakshina Kannada
ರಾಜ್ಯ

ವಿಜಯಟೈಮ್ಸ್ ಇಂಪ್ಯಾಕ್ಟ್ ; ಬಂಟ್ವಾಳ ಸೇತುವೆಯ ದುಸ್ಥಿತಿ ನೋಡಲು ದಿಢೀರನೇ ಬಂದ ಅಧಿಕಾರಿಗಳು!

ಕಳಪೆ ಕಾಮಗಾರಿ ದುರಂತದ ಬಗ್ಗೆ ವಿಜಯಟೈಮ್ಸ್ ತಂಡ ಮಾಡಿದ್ದ ವರದಿಗೆ ಅಧಿಕಾರಿಗಳು ಈಗ ದಿಢೀರ್ ಎಚ್ಚೆತ್ತುಕೊಂಡಿದ್ದಾರೆ.

IT Minister
ದೇಶ-ವಿದೇಶ

5G ಬಿಡುಗಡೆಗೆ ತಯಾರಿ ಮಾಡಿಕೊಳ್ಳಿ : ಟೆಲಿಕಾಂ ಕಂಪನಿಗಳಿಗೆ ಐಟಿ ಸಚಿವ ಅಶ್ವಿನಿ ವೈಷ್ಣವ್ ಸೂಚನೆ

ಇನ್ನು ಏರ್ಟೆಲ್(Airtel) ಮತ್ತು ಜಿಯೋ(Jio) ಈ ತಿಂಗಳ ಕೊನೆಯಲ್ಲಿ ತಮ್ಮ 5G ಸೇವೆಗಳ ಮೊದಲ ಹಂತವನ್ನು ಬಿಡುಗಡೆಗೊಳಿಸುವ ನಿರೀಕ್ಷೆಯಿದೆ.