Breaking News
ಬಿಜೆಪಿಯ ನೈತಿಕ ಭ್ರಷ್ಟ ನಾಯಕರು ಒಬ್ಬೊಬ್ಬರಾಗಿ ದೇಶದ ಮುಂದೆ ಬೆತ್ತಲಾಗುತ್ತಿದ್ದಾರೆ: ಸಿದ್ದರಾಮಯ್ಯ ಟೀಕೆಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ: ಸಾಹುಕಾರನ ಬೆನ್ನಿಗೆ ನಿಂತ ಬಿಜೆಪಿ ನಾಯಕರುಸಾಹುಕಾರನ ತಲೆದಂಡ: ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆತಿಂಗಳಲ್ಲೇ ಕೋಟಿ ಒಡೆಯನಾದ ನಂಜುಂಡೇಶ್ವರ: ದೇವಸ್ಥಾನದ ಹುಂಡಿಯಲ್ಲಿ 1.11ಕೋಟಿ ಸಂಗ್ರಹಬೃಹದಾಕಾರದ ಅರಳಿ ಮರಕ್ಕೆ ಕೊಡಲಿ ಪೆಟ್ಟು: ಕಡಿದ ಮರದ ಬುಡಕ್ಕೆ ಶ್ರದ್ಧಾಂಜಲಿ ಸಲ್ಲಿಸಿದ ಪರಿಸರ ಪ್ರೇಮಿಗಳುಸಚಿವ ಸಿಪಿ ಯೋಗೀಶ್ವರ್ ಗೆ ಮಾಜಿ ಸಿಎಂ ಕುಮಾರಸ್ವಾಮಿ ಟಾಂಗ್ಯಾರಿಗೆ ಎಲ್ಲಿ ಅನುಕೂಲ ಆಗುತ್ತೋ ಅಲ್ಲಿ ಲಸಿಕೆ ಹಾಕಿಸಿಕೊಳ್ಳಲಿ: ಸಿಎಂ ಯಡಿಯೂರಪ್ಪಜೀವನದ ಪಾಠ ಕಲಿಸಿದ ಕೊರೋನಾ: ವ್ಯಕ್ತಿಯ ಶ್ರಮಕ್ಕೆ ಮೋದಿ ಮೆಚ್ಚುಗೆಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಿಡುಗಡೆ: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಸಿಡಿಮಾ 3 ರಿಂದ ಕಾಂಗ್ರೆಸ್‌ನ ಜನಧ್ವನಿ ಯಾತ್ರೆ

ಚಿಕ್ಕಬಳ್ಳಾಪುರ ಸ್ಫೋಟ ಪ್ರಕರಣ: ಕೈನಾಯಕರ ಹೇಳಿಕೆಗೆ ಸಚಿವ ಸುಧಾಕರ್ ಕಿಡಿ

ಕಾಂಗ್ರೆಸ್ ನಾಯಕರ ಹೇಳಿಕೆ ಖಂಡಿಸಿರುವ ಅವರು, ಜವಾಬ್ದಾರಿಯುತ ಸ್ಥಾನದಲ್ಲಿರುವ ನಾಯಕರು ವಾಸ್ತವಾಂಶ ಅರಿಯದೆ ಈ ರೀತಿ ಸಾವಿನಲ್ಲೂ ರಾಜಕೀಯ ಮಾಡುವುದು ಶೋಭೆ ತರುವುದಿಲ್ಲ.
Share on facebook
Share on google
Share on twitter
Share on linkedin
Share on print

ಬೆಂಗಳೂರು, ಫೆ. 23: ಚಿಕ್ಕಬಳ್ಳಾಪುರದ ಹಿರೇನಾಗವೇಲ್ಲಿ ಗ್ರಾಮದಲ್ಲಿ ನಡೆದ ಜಿಲೆಟಿನ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ‌ಸರ್ಕಾರದ ವಿರುದ್ಧ ಹರಿಹಾಯ್ದರಿರುವ ಕಾಂಗ್ರೆಸ್ ನಾಯಕರ ಬಗ್ಗೆ ಸಚಿವ ಡಾ.ಕೆ. ಸುಧಾಕರ್ ಕಿಡಿಕಾರಿದ್ದಾರೆ.

ಕಾಂಗ್ರೆಸ್ ನಾಯಕರ ಹೇಳಿಕೆ ಖಂಡಿಸಿರುವ ಅವರು, ಜವಾಬ್ದಾರಿಯುತ ಸ್ಥಾನದಲ್ಲಿರುವ ನಾಯಕರು ವಾಸ್ತವಾಂಶ ಅರಿಯದೆ ಈ ರೀತಿ ಸಾವಿನಲ್ಲೂ ರಾಜಕೀಯ ಮಾಡುವುದು ಶೋಭೆ ತರುವುದಿಲ್ಲ. ನಿಯಮ ಬಾಹಿರವಾಗಿ ಜಿಲೆಟಿನ್ ಸಂಗ್ರಹಣೆ ಮಾಡುತ್ತಿದ್ದವರ ವಿರುದ್ಧ ಅಧಿಕಾರಿಗಳು ರೈಡ್ ಮಾಡಿದ್ದ ಸಂದರ್ಭದಲ್ಲಿ ಅದನ್ನು ಬೇರೆಡೆ ಸಾಗಿಸುವಾಗ ಈ ದುರಂತ ಸಂಭವಿಸಿದೆ.

ಅಕ್ರಮ ಗಣಿಗಾರಿಕೆ ಅಥವಾ ಇನ್ಯಾವುದೇ ರೀತಿಯ ಅನೈತಿಕ, ಕಾನೂನು ಬಾಹಿರ ಚಟುವಟಿಕೆಗಳಿಗೆ ನಾನು ಎಂದಿಗೂ ಬೆಂಬಲ ನೀಡಿಲ್ಲ ಮತ್ತು ಮುಂದೆಯೂ ನೀಡುವುದಿಲ್ಲ. ಜಿಲ್ಲಾ ಉಸ್ತುವಾರಿ ಸಚಿವನಾಗಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ದೊರಕಿಸುವುದು ನನ್ನ ಕರ್ತವ್ಯವಾಗಿದ್ದು ಆದಷ್ಟು ಬೇಗ ಈ ಕೆಲಸ ಮಾಡಲಿದ್ದೇನೆ.

ಸಾವಿನ ಮನೆಯಲ್ಲೂ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮತ್ತು ಇನ್ನೊಬ್ಬರ ತೇಜೋವಧೆ ಮಾಡಲು ಯತ್ನಿಸುತ್ತಿರುವ ಕಾಂಗ್ರೆಸ್ ಪಕ್ಷದ ನಾಯಕರಿಗೆ ನಾಚಿಕೆಯಾಗಬೇಕು. ಈ ಘಟನೆಯ ಹಿಂದೆ ಯಾರೇ ಇರಲಿ ಅವರ ವಿರುದ್ಧ ನಿಷ್ಪಕ್ಷಪಾತ ತನಿಖೆ ನಡೆಸಿ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವುದು ನಿಶ್ಚಿತ ಎಂದು ತಿರುಗೇಟು ನೀಡಿದ್ದಾರೆ.

Submit Your Article