Breaking News
ಒಂದು ದೇಶ, ಒಂದು ಪಕ್ಷ ಎಂದು ಹೇಳುವ ಬಿಜೆಪಿ ಲಸಿಕೆಗೆ ಒಂದೇ ಬೆಲೆ ಇಟ್ಟಿಲ್ಲ ಯಾಕೆ: ಮಮತಾ ಬ್ಯಾನರ್ಜಿ‘ಇನ್ನೆರಡು ತಾಸುಗಳಷ್ಟೇ..ಆಮೇಲೆ ಆಕ್ಸಿಜನ್​ ಇರೋದಿಲ್ಲ, ರೋಗಿಗಳು ಸಾಯ್ತಾರೆ..’ ಕಣ್ಣೀರಿಟ್ಟ ಆಸ್ಪತ್ರೆ ಸಿಇಒಶಾಸಕ ಜಮೀರ್ ಅಹ್ಮದ್, ಮಧು ಬಂಗಾರಪ್ಪಗೆ ಕೊರೊನಾ ಪಾಸಿಟಿವ್: ನಿನ್ನೆಯಷ್ಟೇ ಸಿದ್ದರಾಮಯ್ಯ ಭೇಟಿಯಾಗಿದ್ದ ಜಮೀರ್ಕೊರೊನಾ ನಿರ್ವಹಣೆ ವಿಚಾರವನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ಮೇ 1ರಿಂದ 18 ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯಲು ನೋಂದಾವಣೆ ಮಾಡಿಕೊಳ್ಳುವ ವಿಧಾನ ಇಲ್ಲಿದೆರೆಮ್‌ಡಿಸಿವಿರ್‌ ವೈಜ್ಞಾನಿಕವಾಗಿ ಲೈಫ್ ಸೇವಿಂಗ್ ಡ್ರಗ್ ಅಲ್ಲ: ಸಚಿವ ಸುಧಾಕರ್ಭಾರತಕ್ಕೆ ಬಂದಿಳಿದ 5ನೇ ಬ್ಯಾಚ್​​ನ ರಫೇಲ್​​ ಯುದ್ಧ ವಿಮಾನಗಳುಮುಖ್ಯಮಂತ್ರಿ ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್ಪ್ರಚಾರಗಳನ್ನ ಬಿಟ್ಟು ಜನರ ರಕ್ಷಣೆ ಜತೆಗೆ ಜನರ ವಿಶ್ವಾಸ ಗೆಲ್ಲುವ ಕೆಲಸ ಮಾಡಿ: ಬಿಜೆಪಿಗೆ ಕುಮಾರಸ್ವಾಮಿ ಚಾಟಿನೀವು ಖುಷಿಯಾಗಿ ಸಮಯ ಹಾಳು ಮಾಡಿ, ಜನ ಮಾತ್ರ ಸಾಯ್ತಾ ಇರ್ಲಿ: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್​ ತರಾಟೆ

ರಾಜ್ಯದಲ್ಲಿ ಮಹಾಮಾರಿ ಕೊರೊನಾ ಆರ್ಭಟ: “ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ” ಕಾರ್ಯಕ್ರಮಕ್ಕೆ ಬ್ರೇಕ್

ಗ್ರಾಮೀಣ ಜನರ ಸಮಸ್ಯೆಗಳನ್ನು ಆಲಿಸುವ ಹಾಗೂ ಸ್ಥಳದಲ್ಲೇ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕಂದಾಯ ಸಚಿವ ಆರ್.‌ ಅಶೋಕ್‌ ಸೂಚನೆಯಂತೆ ರಾಜ್ಯದಲ್ಲಿ "ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ" ಎಂಬ ಹೆಸರಿನೊಂದಿಗೆ ಗ್ರಾಮ ವಾಸ್ತವ್ಯ ನಡೆಸಲಾಗುತ್ತಿತ್ತು. ಪ್ರತೀ ತಿಂಗಳ 3ನೇ ಶನಿವಾರದಂದು ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ನಡೆಸಿ ಅಲ್ಲಿನ ಸಮಸ್ಯೆಗಳ ಬಗ್ಗೆ ಗಮನವಹಿಸಿ, ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದರು.
Share on facebook
Share on google
Share on twitter
Share on linkedin
Share on print

ಬೆಂಗಳೂರು, ಏ. 08: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಸಾರ್ವಜನಿಕರಲ್ಲಿ ಭಾರೀ ಆತಂಕ ಸೃಷ್ಟಿಸಿದೆ. ಈ ನಡುವೆ ಸರ್ಕಾರದ ಆಡಳಿತದ ಮೇಲೂ ಕೊರೊನಾ ಕರಿನೆರಳು ಆವರಿಸಿದ್ದು, ಮಹಾಮಾರಿಯ ಆರ್ಭಟ ಜೋರಾಗಿರುವುದರ ಪರಿಣಾಮ ರಾಜ್ಯದಲ್ಲಿ ನಡೆಸಲಾಗುತ್ತಿದ್ದ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯಕ್ಕೆ ಬ್ರೇಕ್‌ ಬಿದ್ದಿದೆ.

ಗ್ರಾಮೀಣ ಜನರ ಸಮಸ್ಯೆಗಳನ್ನು ಆಲಿಸುವ ಹಾಗೂ ಸ್ಥಳದಲ್ಲೇ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕಂದಾಯ ಸಚಿವ ಆರ್.‌ ಅಶೋಕ್‌ ಸೂಚನೆಯಂತೆ ರಾಜ್ಯದಲ್ಲಿ “ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ” ಎಂಬ ಹೆಸರಿನೊಂದಿಗೆ ಗ್ರಾಮ ವಾಸ್ತವ್ಯ ನಡೆಸಲಾಗುತ್ತಿತ್ತು. ಪ್ರತೀ ತಿಂಗಳ 3ನೇ ಶನಿವಾರದಂದು ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ನಡೆಸಿ ಅಲ್ಲಿನ ಸಮಸ್ಯೆಗಳ ಬಗ್ಗೆ ಗಮನವಹಿಸಿ, ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದರು. ಈ ಕಾರ್ಯಕ್ರಮಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ಸಹ ವ್ಯಕ್ತವಾಗಿತ್ತು.

ಆದರೆ ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಕೊರೊನಾ ಮಹಾಮಾರಿ ಆತಂಕ ಹೆಚ್ಚುತ್ತಿದ್ದು, ಸೋಂಕು ಹರಡುವುದನ್ನು ತಡೆಯುವ ಸಲುವಾಗಿ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ಹೆಚ್ಚಳದಿಂದಾಗಿ ಸಾರ್ವಜನಿಕರು ಗುಂಪುಗೂಡುವುದನ್ನ ತಡೆಗಟ್ಟುವ ಸಲುವಾಗಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಸ್ಥಗಿತಗೊಳಿಸಲಾಗಿದೆ.

ಪ್ರಮುಖವಾಗಿ ರಾಜ್ಯದ ಹತ್ತು ಜಿಲ್ಲೆಯ ಜಿಲ್ಲಾಧಿಕಾರಿಗಳ ಗ್ರಾಮವಾಸ್ತವ್ಯ ಸ್ಥಗಿತಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಈ ಹಿನ್ನೆಲೆಯಲ್ಲಿ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಬೀದರ್, ದಕ್ಷಿಣ ಕನ್ನಡ, ಕಲಬುರಗಿ, ಮಂಡ್ಯ, ಮೈಸೂರು, ಹಾಸನ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಗ್ರಾಮವಾಸ್ತವ್ಯ ಸ್ಥಗಿತಗೊಳಿಸಲಾಗಿದೆ. ಈ ಕುರಿತು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್‌. ಮಂಜುನಾಥ್‌ ಪ್ರಸಾದ್‌ ಆದೇಶ ಹೊರಡಿಸಿದ್ದಾರೆ. ‌

Submit Your Article