Breaking News
ಬಂದೂಕು ಹಿಡಿದು ಸೆಲ್ಫಿಗೆ ಪೋಸ್: ಆಕಸ್ಮಿಕವಾಗಿ ಗುಂಡು ಹಾರಿ ನವವಿವಾಹಿತೆ ಸಾವುಎದೆಹಾಲು ನೀಡುವ ತಾಯಂದಿರು ಈ ಆಹಾರಗಳಿಂದ ದೂರವಿರಿಜುಲೈ 27ರಿಂದ ಭಾರತ ಪ್ರವಾಸ ಆರಂಭಿಸಲಿರುವ ಅಮೆರಿಕದ ರಕ್ಷಣಾ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕೆನ್ಎಲ್‌ಪಿಜಿ ಸಿಲಿಂಡರ್‌ ಸ್ಪೋಟ; ಏಳು ಮಂದಿ ಸಾವುಅಂಬೇಡ್ಕರ್ ಅಂತ್ಯಸಂಸ್ಕಾರ ಮಾಡಲು ಕಾಂಗ್ರೆಸ್ ಜಾಗ ಕೊಡಲಿಲ್ಲ: ನಳಿನ್ ಕುಮಾರ್‌ ಕಟೀಲ್ ಟೀಕೆಮಳೆಗಾಲದಲ್ಲಿ ಹೆಚ್ಚಾಗಿ ಕಾಡುವ ಹೊಟ್ಟೆಯ ನೋವು ತಡೆಯುವುದು ಹೇಗೆ?ನುಗ್ಗೆ ಸೊಪ್ಪಿನಲ್ಲಿದೆ ಕೂದಲಿನ ಸಮಸ್ಯೆ ನಿವಾರಿಸುವ ಶಕ್ತಿವಿಯೆಟ್ನಾಂ: ಹನೊಯಿನಲ್ಲಿ 15 ದಿನಗಳ ಲಾಕ್‌ಡೌನ್‌ಕಳೆದ ೨೪ಗಂಟೆಯಲ್ಲಿ 39,097 ಹೊಸ ಕೊರೊನಾ ಪ್ರಕರಣಗಳು, 546 ಸಾವುಜು.25ರಿಂದ ರಾಜ್ಯಾದ್ಯಂತ ದೇವಾಲಯಗಳಲ್ಲಿ ಪೂಜಾದಿ ಸೇವೆ & ಪ್ರಸಾದಿ ವಿತರಣೆಗೆ ಅವಕಾಶ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಹಫ್ತಾ ವಸೂಲಿಗೆ ಅಬಕಾರಿ ಸಚಿವರ ಫರ್ಮಾನು: ಸರ್ಕಾರದ ವಿರುದ್ಧ ಎಚ್‌ಡಿಕೆ ವಾಗ್ದಾಳಿ

ಅಬಕಾರಿ ಸಚಿವರಿಗೆ ಪ್ರತಿ ಜಿಲ್ಲೆಯಿಂದ ₹5 ಲಕ್ಷ ಹೋಗಬೇಕು ಎಂಬ ಅಧಿಕಾರಿಗಳ ಸಂಭಾಷಣೆ ಬಹಿರಂಗವಾಗಿದೆ. ಹಣ ಖರ್ಚು ಮಾಡಿ ಅಧಿಕಾರಕ್ಕೆ ಬಂದ ಬಿಜೆಪಿ ಹಣ ಲೂಟಿ ಮಾಡುವಲ್ಲಿ ನಿರತವಾಗಿದೆ. ಆಡಿಯೊ ಬಹಿರಂಗವಾಗುತ್ತಲೇ ಅಬಕಾರಿ ಇಲಾಖೆಯ ಮೂವರು ಇನ್ಸ್‌ಪೆಕ್ಟರ್‌ಗಳನ್ನು ಅಮಾನತು ಮಾಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
Share on facebook
Share on google
Share on twitter
Share on linkedin
Share on print
Loading...

ಬೆಂಗಳೂರು,ಜೂ.22: ಅಬಕಾರಿ ಸಚಿವರ ಬ್ರಹ್ಮಾಂಡ ಭ್ರಷ್ಟಾಚಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮಾಡಿ ಟೀಕಾ ಪ್ರಹಾರ ನಡೆಸಿದ್ದಾರೆ.

ನೀರಾವರಿ ಇಲಾಖೆ ₹20,000 ಕೋಟಿ ಯೋಜನೆಯಲ್ಲಿ 10% ಕಿಕ್‌ ಬ್ಯಾಕ್‌ ಪಡೆಯಲಾಗಿದೆ ಎಂಬ ಆರೋಪ ಜೀವಂತವಾಗಿರುವಾಗಲೇ ಅಬಕಾರಿ ಇಲಾಖೆಯ ಅಕ್ರಮ ಬಯಲಾಗಿದೆ. ಅಬಕಾರಿ ಸಚಿವರಿಗೆ ಪ್ರತಿ ಜಿಲ್ಲೆಯಿಂದ ₹5 ಲಕ್ಷ ಹೋಗಬೇಕು ಎಂಬ ಅಧಿಕಾರಿಗಳ ಸಂಭಾಷಣೆ ಬಹಿರಂಗವಾಗಿದೆ. ಹಣ ಖರ್ಚು ಮಾಡಿ ಅಧಿಕಾರಕ್ಕೆ ಬಂದ ಬಿಜೆಪಿ ಹಣ ಲೂಟಿ ಮಾಡುವಲ್ಲಿ ನಿರತವಾಗಿದೆ. ಆಡಿಯೊ ಬಹಿರಂಗವಾಗುತ್ತಲೇ ಅಬಕಾರಿ ಇಲಾಖೆಯ ಮೂವರು ಇನ್ಸ್‌ಪೆಕ್ಟರ್‌ಗಳನ್ನು ಅಮಾನತು ಮಾಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

ಕೊಟ್ಟವರಿಗೆ ಶಿಕ್ಷೆ ಕೊಟ್ಟ ಮೇಲೆ ಈಸ್ಕೋಂಡಿರಬಹುದಾದವರಿಗೆ ಶಿಕ್ಷೆ ಇಲ್ಲ ಏಕೆ? ಅಧಿಕಾರಿಗಳ ಮೇಲಿನ ಕ್ರಮ ಭ್ರಷ್ಟಾಚಾರಕ್ಕಾಗಿಯೋ ಅಥವಾ ಸರ್ಕಾರದ ಬಂಡವಾಳ ಬಯಲು ಮಾಡಿದರು ಎಂಬ ಕಾರಣಕ್ಕೋ? ₹2 ಸಾವಿರ ಕೋಟಿ ಕಿಕ್‌ ಬ್ಯಾಕ್‌ ಪ್ರಕರಣವನ್ನು ತನಿಖೆಗೆ ಒಳಪಡಿಸುವಂತೆ ಈಗಾಗಲೇ ನಾನು ಆಗ್ರಹಿಸಿದ್ದೇನೆ.

Loading...

ಅದರಲ್ಲಿನ ಯಡಿಯೂರಪ್ಪ ಕುಟುಂಬದ ಪಾತ್ರದ ಬಗ್ಗೆ ತನಿಖೆಯಾಗಲಿ ಎಂದು ಹೇಳಿದ್ದೇನೆ. ಅದರ ಜೊತೆಗೆ ಅಬಕಾರಿ ಇಲಾಖೆಯಲ್ಲಿನ ಈ ಪ್ರಕರಣದ ಬಗ್ಗೆಯೂ ತನಿಖೆಯಾಗಬೇಕು. ಸರ್ಕಾರ ಈ ಪ್ರಕರಣವನ್ನು ಕೂಡಲೇ ಸೂಕ್ತ ತನಿಖಾ ಸಂಸ್ಥೆಗೆ ವಹಿಸಬೇಕು.

ಜೊತೆಗೆ, ಕೋವಿಡ್‌ ಮತ್ತು ಬ್ಲಾಕ್‌ ಫಂಗಸ್‌ ಸ್ಥಿತಿಗತಿಗಳು, ಕೈಗೊಂಡ ಕ್ರಮಗಳು, ಕೊಟ್ಟ ಪರಿಹಾರ, ಅಕ್ರಮ ಆರೋಪಗಳ ಕುರಿತು ಚರ್ಚಿಸಲು ಅಧಿವೇಶನ ಕರೆಯಬೇಕೆಂದು ನಾನು ಆಗ್ರಹಿಸಿದ್ದೇನೆ. ಅದರ ಬಗ್ಗೆ ಸಿಎಂ ಈ ವರೆಗೆ ಮಾತನಾಡಿಲ್ಲ. ಪ್ರತಿಪಕ್ಷಗಳ ಮುಂದೆ ನಿಲ್ಲಲು ಅವರಿಗೆ ಭಯವಿದ್ದಂತೆ ಕಾಣುತ್ತಿದೆ. ಭಯವಿಲ್ಲದೇ ಹೋದರೆ ಅಧಿವೇಶನ ಕರೆಯಬೇಕು.

Loading...

Submit Your Article