Breaking News
ಬಿಜೆಪಿಯ ನೈತಿಕ ಭ್ರಷ್ಟ ನಾಯಕರು ಒಬ್ಬೊಬ್ಬರಾಗಿ ದೇಶದ ಮುಂದೆ ಬೆತ್ತಲಾಗುತ್ತಿದ್ದಾರೆ: ಸಿದ್ದರಾಮಯ್ಯ ಟೀಕೆಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ: ಸಾಹುಕಾರನ ಬೆನ್ನಿಗೆ ನಿಂತ ಬಿಜೆಪಿ ನಾಯಕರುಸಾಹುಕಾರನ ತಲೆದಂಡ: ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆತಿಂಗಳಲ್ಲೇ ಕೋಟಿ ಒಡೆಯನಾದ ನಂಜುಂಡೇಶ್ವರ: ದೇವಸ್ಥಾನದ ಹುಂಡಿಯಲ್ಲಿ 1.11ಕೋಟಿ ಸಂಗ್ರಹಬೃಹದಾಕಾರದ ಅರಳಿ ಮರಕ್ಕೆ ಕೊಡಲಿ ಪೆಟ್ಟು: ಕಡಿದ ಮರದ ಬುಡಕ್ಕೆ ಶ್ರದ್ಧಾಂಜಲಿ ಸಲ್ಲಿಸಿದ ಪರಿಸರ ಪ್ರೇಮಿಗಳುಸಚಿವ ಸಿಪಿ ಯೋಗೀಶ್ವರ್ ಗೆ ಮಾಜಿ ಸಿಎಂ ಕುಮಾರಸ್ವಾಮಿ ಟಾಂಗ್ಯಾರಿಗೆ ಎಲ್ಲಿ ಅನುಕೂಲ ಆಗುತ್ತೋ ಅಲ್ಲಿ ಲಸಿಕೆ ಹಾಕಿಸಿಕೊಳ್ಳಲಿ: ಸಿಎಂ ಯಡಿಯೂರಪ್ಪಜೀವನದ ಪಾಠ ಕಲಿಸಿದ ಕೊರೋನಾ: ವ್ಯಕ್ತಿಯ ಶ್ರಮಕ್ಕೆ ಮೋದಿ ಮೆಚ್ಚುಗೆಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಿಡುಗಡೆ: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಸಿಡಿಮಾ 3 ರಿಂದ ಕಾಂಗ್ರೆಸ್‌ನ ಜನಧ್ವನಿ ಯಾತ್ರೆ

ನನ್ನ ಹೆಸರಿನಲ್ಲೇ ರಾಮನಿದ್ದಾನೆ: ದೇಶಕ್ಕೆ ಬೇಕಿರುವುದು ಗಾಂಧಿಯವರ ಆದರ್ಶ ಪುರುಷ ರಾಮ: ಸಿದ್ದರಾಮಯ್ಯ

ಜಾತಿ, ಧರ್ಮಗಳನ್ನು ಮೀರಿ ಪ್ರತಿಯೊಬ್ಬನನ್ನು ಸಮಾನವಾಗಿ ಕಾಣುವುದೇ ಜಾತ್ಯಾತೀತತೆ. ಇದು ಕುವೆಂಪುರವರ ವಿಶ್ವಮಾನವ ತತ್ವಕ್ಕೆ ಅನುಗುಣವಾಗಿರುವಂತಹುದು.
Share on facebook
Share on google
Share on twitter
Share on linkedin
Share on print

ಬೆಂಗಳೂರು, ಫೆ. 22: ಸಿದ್ದರಾಮಯ್ಯ ರಾಮನ ವಿರೋಧಿ ಅಂತಾರೆ, ನನ್ನ ಹೆಸರಿನಲ್ಲೇ ರಾಮನಿದ್ದಾನೆ. ಮಹಾತ್ಮ ಗಾಂಧಿಯವರಂತೆ ನಾನು ರಾಮಭಕ್ತನೆ. ದೇಶಕ್ಕೆ ಬೇಕಿರುವುದು ಗಾಂಧಿಯವರ ಆದರ್ಶ ಪುರುಷ ರಾಮ. ಗಾಂಧಿಯವರನ್ನು ಕೊಂದ ಸಂಘಪರಿವಾರದವರು ರಾಮಭಕ್ತರಾಗಲು ಸಾಧ್ಯವೇ? ರಾಮಭಕ್ತರೆಂದರೆ ಕಾಯುವವರೋ? ಕೊಲ್ಲುವವರೋ? ಎಂದು ವಿಪಕ್ಷನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದಾರೆ.

ಜಾತಿ, ಧರ್ಮಗಳನ್ನು ಮೀರಿ ಪ್ರತಿಯೊಬ್ಬನನ್ನು ಸಮಾನವಾಗಿ ಕಾಣುವುದೇ ಜಾತ್ಯಾತೀತತೆ. ಇದು ಕುವೆಂಪುರವರ ವಿಶ್ವಮಾನವ ತತ್ವಕ್ಕೆ ಅನುಗುಣವಾಗಿರುವಂತಹುದು. ಧರ್ಮದ ಹೆಸರಿನಲ್ಲಿ ಸಮಾಜ ಒಡೆದು, ದ್ವೇಷಭಾವನೆ ಬಿತ್ತುವ ಬಿಜೆಪಿಯವರು ಅಲ್ಪಮಾನವರು ಎಂದು ಕಿಡಿಕಾರಿದ್ದಾರೆ.

ಒಂದು ಕಾಲದಲ್ಲಿ ಸರ್ವಧರ್ಮ ಸಮನ್ವಯತೆಯ ತವರಾಗಿದ್ದ ದಕ್ಷಿಣ ಕನ್ನಡವನ್ನು ಬಿಜೆಪಿ ನಾಯಕರು ಕೋಮುವಾದದ ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡಿದ್ದಾರೆ. ಇಲ್ಲಿನ ಜನ ಪರಸ್ಪರ ಅಪನಂಬಿಕೆಯಿಂದ ಜೀವನ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದ್ದರೆ ಅದಕ್ಕೆ ಆರ್.ಎಸ್.ಎಸ್ ಮತ್ತು ಬಿಜೆಪಿಯೇ ಕಾರಣ ಎಂದು ಆರೋಪಿಸಿದ್ದಾರೆ.

ಕೇಂದ್ರ ಸರ್ಕಾರದ ಕೆಟ್ಟ ಆರ್ಥಿಕ ನೀತಿಗಳಿಂದಾಗಿ ಇಂದು ದೇಶದ ಉತ್ಪಾದನಾ ವಲಯ ನಿಷ್ಕ್ರಿಯಗೊಂಡಿದೆ. ದಕ್ಷಿಣ ಕನ್ನಡ ಭಾಗದಲ್ಲಿ ಬೀಡಿ ಉದ್ಯಮವನ್ನು ನಂಬಿಕೊಂಡಿದ್ದ 50,000 ಜನರ ಬದುಕು ಬೀದಿಪಾಲಾಗಿದೆ. ಇದರ ಪುನಶ್ಚೇತನಕ್ಕಾಗಿ ಬಿಜೆಪಿ ಸರ್ಕಾರ ಯಾವ ಕ್ರಮ ಕೈಗೊಂಡಿದೆ? ಎಂದು ಪ್ರಶ್ನೆ ಮಾಡಿದ್ದಾರೆ.

ಬಿಜೆಪಿ ಸರ್ಕಾರ ಅನ್ನಭಾಗ್ಯದ ಅಕ್ಕಿ ಪ್ರಮಾಣವನ್ನು 3 ಕೆ.ಜಿ ಗೆ ಇಳಿಸಿ ಬಡಜನರ ಊಟ ಕಸಿದಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆದು ಅಧಿಕಾರಕ್ಕೆ ಬರುವ ಸಂಪೂರ್ಣ ವಿಶ್ವಾಸ ನನಗಿದೆ. ಆಗ ಪ್ರತೀ ವ್ಯಕ್ತಿಗೆ ಉಚಿತವಾಗಿ ತಲಾ 10 ಕೆ.ಜಿ ಅಕ್ಕಿ ನೀಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹೆಡ್ಗೇವಾರ್, ಗೊಲ್ವಾಲ್ಕರ್ ಇವರೆಲ್ಲ ಸ್ವಾತಂತ್ರ್ಯ ಚಳವಳಿಯಿಂದ ದೂರ ಉಳಿದದ್ದು ಯಾಕೆ? ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾತ್ಮ ಗಾಂಧಿಯವರನ್ನು ಕೊಂದವರು ಇವತ್ತು ದೇಶಪ್ರೇಮದ ಪಾಠ ಮಾಡುತ್ತಾರೆ. ಇಂಥವರ ದೇಶಪ್ರೇಮದ ಪಾಠ ಯಾರಿಗೆ ಬೇಕಿದೆ ಸ್ವಾಮಿ?  ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇಶಪ್ರೇಮದ ಪಾಠ ಮಾಡುವ ಬಿಜೆಪಿ ನಾಯಕರು ತಮ್ಮ ಇತಿಹಾಸವನ್ನೊಮ್ಮೆ ನೆನಪು ಮಾಡಿಕೊಳ್ಳಲಿ. ದೇಶದ ಸ್ವಾತಂತ್ರ್ಯಕ್ಕಾಗಿ ಸಾವಿರಾರು ಕಾಂಗ್ರೆಸ್ ನಾಯಕರು ಬಲಿದಾನಗೈದಿದ್ದಾರೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರಾಣಾರ್ಪಣೆ ಮಾಡಿದ ಒಬ್ಬನೇ ಒಬ್ಬ ಆರ್.ಎಸ್‌.ಎಸ್ ನಾಯಕನ ಹೆಸರನ್ನು ಬಿಜೆಪಿಯವರು ಹೇಳಲಿ ನೋಡೋಣ ಎಂದು ಟ್ವೀಟ್ ಮಾಡಿದ್ದಾರೆ.

Submit Your Article