ಬೆಂಗಳೂರು, ಫೆ. 22: ತಮಿಳುನಾಡು ಸರ್ಕಾರ ಕಾವೇರಿ ನದಿನೀರನ್ನು ಬಳಸಿಕೊಂಡು ಅಕ್ರಮವಾಗಿ ನಿರ್ಮಿಸುತ್ತಿರುವ ನದಿಜೋಡಣೆ ಯೋಜನೆಯನ್ನು ಕೈಬಿಡುವಂತೆ ಒತ್ತಾಯಿಸಬೇಕೆಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಆಗ್ರಹಿಸಿದ್ದಾರೆ.
ತಮಿಳುನಾಡು ಸರ್ಕಾರ ಕಾವೇರಿ ನದಿಯ 45 ಟಿಎಂಸಿ ನೀರನ್ನು ಅಕ್ರಮವಾಗಿ ಬಳಸಿಕೊಂಡು ನದಿ ಜೋಡಣೆ ಯೋಜನೆಯನ್ನು ಶುರುಮಾಡಲು ಹೊರಟಿರುವುದು ಖಂಡನೀಯ. ಈ ಅಕ್ರಮವನ್ನು ತಕ್ಷಣ ನಿಲ್ಲಿಸಬೇಕೆಂದು ಆ ರಾಜ್ಯದ ಮುಖ್ಯಮಂತ್ರಿಗಳನ್ನು
ಆಗ್ರಹಿಸುತ್ತೇನೆ.
ಅಲ್ಲದೇ, ತಮಿಳುನಾಡು ಸರ್ಕಾರ ಕಾವೇರಿ ನದಿನೀರನ್ನು ಅಕ್ರಮವಾಗಿ ಬಳಸಿಕೊಂಡು ನಿರ್ಮಿಸುತ್ತಿರುವ ನದಿಜೋಡಣೆ ಯೋಜನೆಯನ್ನು ಸಿಎಂ ಯಡಿಯೂರಪ್ಪ ಅವರು ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನಿಸುವ ಜೊತೆಯಲ್ಲಿ ಆ ರಾಜ್ಯದ ಮುಖ್ಯಮಂತ್ರಿ ಅವರಿಗೆ ಪತ್ರಬರೆದು ಯೋಜನೆಯನ್ನು ಕೈಬಿಡಬೇಕೆಂದು ಒತ್ತಾಯಿಸಬೇಕೆಂದು ಆಗ್ರಹಿಸಿದ್ದಾರೆ.
ತಮಿಳುನಾಡು ಸರ್ಕಾರ ಕಾವೇರಿ ನದಿನೀರನ್ನು ಅಕ್ರಮವಾಗಿ ಬಳಸಿಕೊಂಡು ನಿರ್ಮಿಸುತ್ತಿರುವ ನದಿಜೋಡಣೆ ಯೋಜನೆಯನ್ನು @CMofKarnataka ಅವರು ಸುಪ್ರೀಮ್ ಕೋರ್ಟ್ ನಲ್ಲಿ ಪ್ರಶ್ನಿಸುವ ಜೊತೆಯಲ್ಲಿ ಆ ರಾಜ್ಯದ ಮುಖ್ಯಮಂತ್ರಿಯವರಿಗೆ ಪತ್ರಬರೆದು ಯೋಜನೆಯನ್ನು ಕೈಬಿಬೇಕೆಂದು ಒತ್ತಾಯಿಸಬೇಕು.
— Siddaramaiah (@siddaramaiah) February 22, 2021
೨/೨