ನ್ಯಾಯಾಲಯಗಳ ಪರ ಕಾಂಗ್ರೆಸ್ ನಾಯಕರ ಹೇಳಿಕೆ: ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತೆ; ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಟೀಕೆ

ಬೆಂಗಳೂರು, ಮೇ. 14: ನ್ಯಾಯಾಲಯದ ತೀರ್ಪಿನ ವಿರುದ್ಧ ತುರ್ತು ಪರಿಸ್ಥಿತಿ ಹೇರಿದವರು ನ್ಯಾಯಾಲಯಗಳ ಪರವಾಗಿ ಗೌರವ ವ್ಯಕ್ತಪಡಿಸುತ್ತಿರುವುದು ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತಾಗಿದೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಿಡಿಕಾರಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಬಿಜೆಪಿಗೆ ನ್ಯಾಯಾಂಗದ ಗೌರವದ ಬಗ್ಗೆ ಯಾರೂ ಪಾಠ ಹೇಳಿಕೊಡಬೇಕಾಗಿಲ್ಲ, ನಮಗೆ ಸದಾ ಗೌರವವಿದೆ. ಯಾವ ಪಕ್ಷ ನ್ಯಾಯಾಲಯದ ತೀರ್ಪಿನ ವಿರುದ್ಧ ತುರ್ತು ಪರಿಸ್ಥಿತಿ ಹೇರಿ ಸ್ವಾತಂತ್ರ್ಯಹರಣ ಮಾಡಿತ್ತೋ, ಅದೇ ಪಕ್ಷ ಇಂದು ಏಕದಂ ನ್ಯಾಯಾಲಯದ ಬಗ್ಗೆ ಗೌರವ ವ್ಯಕ್ತಪಡಿಸುತ್ತಿದೆ ಅಲ್ಲವೇ? ಕಾಂಗ್ರೆಸ್ ಪಕ್ಷವನ್ನು ಪ್ರಶ್ನಿಸಿದ್ದಾರೆ.

ಅಲ್ಲದೆ ಯಾವ ಪಕ್ಷ ನ್ಯಾಯಾಲಯಗಳು ಮೋದಿ ಆಲಯಗಳಾಗಿವೆ ಎಂದು ಆರೋಪಿಸಿ ಸಿಎಎ, ರಾಮ ಮಂದಿರ ತೀರ್ಪಿನ ವಿರುದ್ಧ ಅಪಪ್ರಚಾರ ಮಾಡಿತ್ತೋ, ಅದು ಈಗ ನ್ಯಾಯಾಲಯಗಳ ಪರವಾಗಿ ಗೌರವ ವ್ಯಕ್ತಪಡಿಸುತ್ತಿರುವುದು ಭೂತದ ಬಾಯಲ್ಲಿ ಭಗವದ್ಗೀತೆ ಕೇಳದಂತಾಗಿದೆ. ಏನಂತೀರಾ ಎಂದು ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಅವರನ್ನು ಪ್ರಶ್ನಿಸಿದ್ದಾರೆ.

ಇದೇ ವೇಳೆ ಕೊರೊನಾ ಲಸಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಧೀಶರ ಬಗ್ಗೆ ತಾವು ನೀಡಿದ್ದ ಹೇಳಿಕೆ ಕುರಿತು ಸ್ಪಷ್ಟನೆ ನೀಡಿರುವ ಅವರು, ನಾನು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾದರೂ ಏನು? ನ್ಯಾಯಾಧೀಶರು ಸರ್ವಜ್ಞರಲ್ಲ, ಅವರೂ ತಾಂತ್ರಿಕ ಸಮಿತಿಯ ಸಲಹೆ ಮೇರೆಗೆ ನಿರ್ದೇಶನ ನೀಡುತ್ತಾರೆ ಎಂದಿದ್ದೇನೆ, ಸರ್ವೋಚ್ಚ ನ್ಯಾಯಾಲಯವೂ ಇದನ್ನೇ ಹೇಳಿದೆ. ಇದರಲ್ಲಿ ತಪ್ಪೇನಿದೆ? ಮೊಸರಲ್ಲಿ ಕಲ್ಲು ಹುಡುಕುವ ಮನೋಭಾವದವರು ಎಲ್ಲದರಲ್ಲೂ ತಪ್ಪು ಹುಡುಕುತ್ತಾರೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

Latest News

ದೇಶ-ವಿದೇಶ

ಒಡಿಶಾದಲ್ಲಿ ಆಘಾತಕಾರಿ ಘಟನೆ ; ಹಾಡಹಗಲೇ ವೃದ್ಧನನ್ನು ಕಂಬಕ್ಕೆ ಕಟ್ಟಿ, ಥಳಿಸಿ ಕೊಂದ ಕುಟುಂಬಸ್ಥರು!

ಕೊರಾಪುಟ್ ಜಿಲ್ಲೆಯ ಬುಡಕಟ್ಟು ಪ್ರದೇಶದಲ್ಲಿ ಹಾಡಹಗಲೇ ವೃದ್ಧನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ತಮ್ಮ ಕುಟುಂಬಸ್ಥರೇ ಥಳಿಸಿ ಕೊಂದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ!

ಮಾಹಿತಿ

ಕಿಡ್ನಿ ಸ್ಟೋನ್‌ ಸಮಸ್ಯೆಗೆ ಇಲ್ಲಿದೆ ನೈಸರ್ಗಿಕ ಪರಿಹಾರ ; ಈ ಸರಳ ಪರಿಹಾರ ಪಾಲಿಸಿ

ಕೆಲವು ಮನೆಮದ್ದುಗಳು(Home Remedies) ಆರಂಭಿಕ ಹಂತದ ಕಿಡ್ನಿಸ್ಟೋನ್ ಸಮಸ್ಯೆಗೆ ಪರಿಹಾರ ನೀಡುತ್ತವೆ. ಅಂತಹ ಮನೆಮದ್ದುಗಳ ವಿವರ ಇಲ್ಲಿದೆ ನೋಡಿ.

ಮಾಹಿತಿ

ದೇಹಕ್ಕೆ ಪ್ರೋಟಿನ್‌ ಕೊರತೆಯಾದ್ರೆ `ಈ’ 10 ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ

ಯುವಜನರ ದೈಹಿಕ ಬೆಳವಣಿಗೆಯಲ್ಲಿ ಪ್ರೋಟಿನ್‌ ಪ್ರಮುಖ ಪಾತ್ರ ವಹಿಸುತ್ತದೆ. ದೇಹದಲ್ಲಿನ ಸ್ನಾಯುಗಳು, ಕಿಣ್ವಗಳು ಮತ್ತು ಹಾರ್ಮೋನುಗಳಿಗೆ ಪ್ರೋಟಿನ್ ಅತ್ಯಂತ ಅವಶ್ಯಕವಾಗಿದೆ.