• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ: ಬಾಗಲಕೋಟೆಯಲ್ಲಿ ಉದ್ವಿಗ್ನ ಪರಿಸ್ಥಿತಿ, ಫೆ.24ರವರೆಗೆ ನಿಷೇಧಾಜ್ಞೆ ಜಾರಿ

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ: ಬಾಗಲಕೋಟೆಯಲ್ಲಿ ಉದ್ವಿಗ್ನ ಪರಿಸ್ಥಿತಿ, ಫೆ.24ರವರೆಗೆ ನಿಷೇಧಾಜ್ಞೆ ಜಾರಿ
0
SHARES
12
VIEWS
Share on FacebookShare on Twitter
  • ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ (Stone pelting during Shivaji Jayanti ) ಮೆರವಣಿಗೆಗೆ ಅಡ್ಡಿ: ಕಲ್ಲು ತೂರಾಟ
  • ಮಸೀದಿ ಭಾಗದ ಬಳಿ ಕಲ್ಲು ತೂರಾಟ ಆರೋಪ; ಮುಂಜಾಗ್ರತಾ ಕ್ರಮವಾಗಿ 144 ಸೆಕ್ಷನ್ ಜಾರಿ
  • ಕಲ್ಲು, ಚಪ್ಪಲಿ ತೂರಾಟದಿಂದ ಉದ್ವಿಗ್ನ ಪರಿಸ್ಥಿತಿ:ಫೆ.24ರವರೆಗೆ ಬಾಗಲಕೋಟೆ ಬಂದ್

Bagalkote: ಶಿವಾಜಿ ಜಯಂತಿ ಅಂಗವಾಗಿ ನಗರದಲ್ಲಿ ಆಯೋಜಿಸಲಾಗಿದ್ದ (Stone pelting during Shivaji Jayanti) ಮೆರವಣಿಗೆಯ ವೇಳೆ ಕಲ್ಲು ತೂರಾಟ ನಡೆದ ಘಟನೆ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.

ಈ ಘಟನೆ ಕಳೆದ ರಾತ್ರಿ ಕಿಲ್ಲಾ ಓಣಿಯಲ್ಲಿ ಸಂಭವಿಸಿದ್ದು, ಕೆಲಕಾಲ ಪರಿಸ್ಥಿತಿ ಉದ್ವಿಗ್ನವಾಗಿತ್ತು. ಶಾಂತವಾಗಿ ಸಾಗುತ್ತಿದ್ದ ಮೆರವಣಿಗೆಯ ಮೇಲೆ ಏಕಾಏಕಿ ಕಲ್ಲು ಹಾಗೂ ಚಪ್ಪಲಿ ತೂರಾಟ ನಡೆದಿರುವುದಾಗಿ ಹಿಂದೂ ಸಂಘಟನೆಗಳ ಮುಖಂಡರು ಆರೋಪಿಸಿದ್ದಾರೆ.

Stone pelting during Shivaji Jayanti

ಮೆರವಣಿಗೆ ಮಸೀದಿ ಭಾಗದತ್ತ ಸಾಗುತ್ತಿದ್ದ ವೇಳೆ ಕಲ್ಲುಗಳು ಬಿದ್ದಿವೆ ಎಂದು ಹೇಳಲಾಗಿದ್ದು, ಘಟನೆಯ (Stone pelting during Shivaji Jayanti) ತಕ್ಷಣವೇ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು. ಸದ್ಯಕ್ಕೆ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿರುವುದಾಗಿ ತಿಳಿಸಿದ್ದಾರೆ.

ಘಟನೆಯ ಹಿನ್ನೆಲೆ ನೋಡುವುದಾದರೆ ಶಿವಾಜಿ ಜಯಂತಿ (Shivaji Jayanti) ಅಂಗವಾಗಿ ಭಾವಚಿತ್ರ ಮೆರವಣಿಗೆಯಲ್ಲಿ ಹಲವರು ಭಾಗವಹಿಸಿದ್ದರು. ಈ ವೇಳೆ ದುಷ್ಕರ್ಮಿಗಳು ಕಲ್ಲು ಹಾಗೂ ಚಪ್ಪಲಿ ತೂರಾಟ ನಡೆಸಿದ್ದಾರೆ ಎಂಬ ದೂರಿದೆ. ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ಸೇರಿದಂತೆ ಒಬ್ಬ ಸಾರ್ವಜನಿಕರು ಗಾಯಗೊಂಡಿರುವ ಮಾಹಿತಿ ಲಭ್ಯವಾಗಿದೆ.

ಗಾಯಗೊಂಡ ಹಿಂದೂ ಕಾರ್ಯಕರ್ತ ಪ್ರಕಾಶ್ ಅರಕೇರಿ (Prakash Arakeri) ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೆರವಣಿಗೆ ಸಾಗುತ್ತಿದ್ದ ವೇಳೆ ಎರಡು ಕಲ್ಲುಗಳು ಬಿದ್ದಿದ್ದು, ಅದರಿಂದ ಕೆಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ನಡೆದ ತಕ್ಷಣವೇ ಪೊಲೀಸರು ಜನರನ್ನು ಚದುರಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಲ್ಲು ತೂರಾಟದ ವೇಳೆ ಕೆಲವು ದುಷ್ಕರ್ಮಿಗಳು ತರಕಾರಿ ಮಾರುಕಟ್ಟೆಯ ಮೂರು ತಳ್ಳುಗಾಡಿಗಳಿಗೆ ಬೆಂಕಿ ಹಚ್ಚಿರುವುದಾಗಿ ವರದಿಯಾಗಿದೆ.

ಸ್ಥಳದಲ್ಲಿದ್ದ ಪೊಲೀಸರು ತಕ್ಷಣವೇ ಎಚ್ಚೆತ್ತು ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಂಡರು. ಹೆಚ್ಚಿನ ಹಾನಿ ಸಂಭವಿಸದಂತೆ ಕ್ರಮ ಕೈಗೊಳ್ಳಲಾಗಿದೆ.

ಘಟನೆಯ ಬಳಿಕ ಪಂಕಾ ಮಸೀದಿ (Panka Mosque) ಹಾಗೂ ಕೊತ್ತಲೇಶ್ವರ (Kottaleshwar) ದೇವಾಲಯ ಸುತ್ತಮುತ್ತ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ಮರುಕಳಿಸದಂತೆ ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿಯೇ ತಂಗಿ ಕಾವಲು ಕಾಯುತ್ತಿದ್ದಾರೆ.

ನಗರದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಪರಿಸ್ಥಿತಿ ಹಂತ ಹಂತವಾಗಿ ಸಾಮಾನ್ಯವಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆಗೆ ವಿರೋಧ ವ್ಯಕ್ತಪಡಿಸಿ ಕೆಲ ಯುವಕರು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು. ಕಲ್ಲು ತೂರಿದವರನ್ನು ತಕ್ಷಣ ಬಂಧಿಸಬೇಕು ಹಾಗೂ ಹಿರಿಯ ಪೊಲೀಸ್

ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಬೇಕು ಎಂದು ಆಗ್ರಹಿಸಿದರು. ಪೊಲೀಸರು ಪ್ರತಿಭಟನಾಕಾರರನ್ನು ಮನವೊಲಿಸಿ ಶಾಂತಿಯುತವಾಗಿ ಕಳುಹಿಸಿದರು.

ಆರೋಪಿಗಳನ್ನು ಬಂಧಿಸದಿದ್ದರೆ ಬಾಗಲಕೋಟೆ ಬಂದ್‌ಗೆ ಕರೆ ನೀಡುವುದಾಗಿ ಕೆಲ ಸಂಘಟನೆಗಳು ಎಚ್ಚರಿಕೆ ನೀಡಿವೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಹೆಚ್ಚುವರಿ ಎಚ್ಚರಿಕೆ ವಹಿಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರು ನಿರಂತರ ಪಹರೆ ನಡೆಸುತ್ತಿದ್ದಾರೆ.

ಕಲ್ಲು ಹಾಗೂ ಚಪ್ಪಲಿ ತೂರಾಟದ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಹಳೆ ಬಾಗಲಕೋಟೆ, ನವನಗರ ಹಾಗೂ ವಿದ್ಯಾಗಿರಿ ಪ್ರದೇಶಗಳಲ್ಲಿ ಫೆಬ್ರವರಿ 24ರ ಮಧ್ಯರಾತ್ರಿ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಅನಗತ್ಯ ಗುಂಪುಗೂಡುವಿಕೆ ಹಾಗೂ ಪ್ರಚೋದನಕಾರಿ ಚಟುವಟಿಕೆಗಳನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣ ಸಂಬಂಧ ಸಿಸಿಟಿವಿ (CCTV) ದೃಶ್ಯಗಳು ಹಾಗೂ

ಲಭ್ಯವಿರುವ ವಿಡಿಯೋಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ತಪ್ಪಿತಸ್ಥರನ್ನು ಗುರುತಿಸಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

ಸದ್ಯಕ್ಕೆ ನಗರದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಸಾರ್ವಜನಿಕರು ಶಾಂತಿ ಕಾಪಾಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಇದನ್ನು ಓದಿ : https://vijayatimes.com/transport-employees-strike/
Tags: 144 sectionbagalkoteKarnatakashivaji jayanti

Related News

ಕರ್ನಾಟಕದಲ್ಲಿ ರಸ್ತೆ ಅಪಘಾತಗಳ ಹೆಚ್ಚಳ: ಪ್ರತಿ ವರ್ಷ 11 ಸಾವಿರಕ್ಕೂ ಅಧಿಕ ಮಂದಿ ಬಲಿ
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ರಸ್ತೆ ಅಪಘಾತಗಳ ಹೆಚ್ಚಳ: ಪ್ರತಿ ವರ್ಷ 11 ಸಾವಿರಕ್ಕೂ ಅಧಿಕ ಮಂದಿ ಬಲಿ

November 16, 2026
ಬೆಂಗಳೂರಿನಲ್ಲಿ ರೌಡಿಗಳ ಅಟ್ಟಹಾಸಕ್ಕೆ ಬ್ರೇಕ್: ಪ್ರತ್ಯೇಕ ನಿಗ್ರಹ ಪಡೆ ರಚನೆಗೆ ಡಿಕೆ ಶಿವಕುಮಾರ್ ಘೋಷಣೆ
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ರೌಡಿಗಳ ಅಟ್ಟಹಾಸಕ್ಕೆ ಬ್ರೇಕ್: ಪ್ರತ್ಯೇಕ ನಿಗ್ರಹ ಪಡೆ ರಚನೆಗೆ ಡಿಕೆ ಶಿವಕುಮಾರ್ ಘೋಷಣೆ

November 16, 2026
ಕುಮಾರಕೃಪಾ ಇನ್ನು ಮುಂದೆ ‘ಗಂಗಾ’ ನಿವಾಸ: ನೂತನ ಗೃಹ ಕಚೇರಿಗೆ ಇಂದು ಡಿಕೆ ಶಿವಕುಮಾರ್ ಗೃಹಪ್ರವೇಶ
ಪ್ರಮುಖ ಸುದ್ದಿ

ಕುಮಾರಕೃಪಾ ಇನ್ನು ಮುಂದೆ ‘ಗಂಗಾ’ ನಿವಾಸ: ನೂತನ ಗೃಹ ಕಚೇರಿಗೆ ಇಂದು ಡಿಕೆ ಶಿವಕುಮಾರ್ ಗೃಹಪ್ರವೇಶ

November 16, 2026
2027ರ ಯುಪಿ ಚುನಾವಣೆ: ಸೀಟು ಹಂಚಿಕೆ ಕಸರತ್ತು ಚುರುಕು, ಖರ್ಗೆ ನೇತೃತ್ವದಲ್ಲಿ ಇಂದು ಕಾಂಗ್ರೆಸ್ ಮಹತ್ವದ ಸಭೆ
ದೇಶ-ವಿದೇಶ

2027ರ ಯುಪಿ ಚುನಾವಣೆ: ಸೀಟು ಹಂಚಿಕೆ ಕಸರತ್ತು ಚುರುಕು, ಖರ್ಗೆ ನೇತೃತ್ವದಲ್ಲಿ ಇಂದು ಕಾಂಗ್ರೆಸ್ ಮಹತ್ವದ ಸಭೆ

November 16, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.