ಬೀದಿ ನಾಯಿ ಮೇಲೆ ಅತ್ಯಾಚಾರ ಆರೋಪ: ಯುವಕ ಅಂದರ್

ಮೈಸೂರು, ಫೆ. 16: ಹೆಣ್ಣು ಬೀದಿ ನಾಯಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಯುವಕನನ್ನು ಬಂಧಿಸಿರುವ ವಿಲಕ್ಷಣ ಘಟನೆ ನಗರದಲ್ಲಿ ನಡೆದಿದೆ.

ಯುವಕ ಬೀದಿ ನಾಯಿಗೆ ಲೈಂಗಿಕ ಕಿರುಕುಳ ನೀಡಿರುವ ವಿಡಿಯೊ ವೈರಲ್ ಆಗಿದೆ. ಈ ಯುವಕನ ವಿರುದ್ಧ ಪೀಪಲ್ ಫಾರ್ ಅನಿಮಲ್ಸ್ (ಪಿಎಫ್​ಎ) ಸಂಸ್ಥೆಯ ಪ್ರಾಣಿ ಕ್ಷೇಮಾಭಿವೃದ್ಧಿ ಅಧಿಕಾರಿ ಕೆ.ಬಿ.ಹರೀಶ್ ಅವರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ದುಷ್ಕೃತ್ಯ ಎಸಗಿರುವ ಯುವಕನ ವಿರುದ್ಧ ಐಪಿಸಿ ಸೆಕ್ಷನ್​ 1860 (ಯು/ಎಸ್ -377: ಪ್ರಾಣಿಗಳ ಜತೆ ಲೈಂಗಿಕ ಕ್ರಿಯೆ ನಡೆಸುವುದು) ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವಿಕೆ ಮತ್ತು 1960 (ಯು/ಇಎಸ್​-11(1)(ಎ)) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಗೋಕುಲಂ 3ನೇ ಹಂತದ ಗಣಪತಿ ದೇವಸ್ಥಾನದ ರಸ್ತೆ ಬಳಿ ಫೆ.11ರ ರಾತ್ರಿ ವೇಳೆ ವ್ಯಕ್ತಿಯೊಬ್ಬ ಹೆಣ್ಣು ನಾಯಿಯ ಮೇಲೆ ಬಲವಂತವಾಗಿ ಲೈಂಗಿಕ ಕಿರುಕುಳ ನೀಡುವುದನ್ನು ದಾರಿಹೋಕರೊಬ್ಬರು ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದರು. ದುಷ್ಕೃತ್ಯದ ವಿಡಿಯೊ ವೈರಲ್‌ ಆಗಿತ್ತು. ವಿಡಿಯೋದಲ್ಲಿನ ದೃಶ್ಯಗಳನ್ನು ಆಧರಿಸಿ ಪಿಎಫ್​ಎ ಅಧಿಕಾರಿ ಕೆ.ಬಿ.ಹರೀಶ್ ಪೊಲೀಸರಿಗೆ ದೂರು ನೀಡಿದ್ದಾರೆ.

ದೂರು ದಾಖಲಾದ ಹಿನ್ನೆಲೆಯಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ನಾಯಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ತನಿಖೆಯ ನಂತರವಷ್ಟೇ ನಾಯಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಸತ್ಯಾಸತ್ಯತೆ ತಿಳಿಯಲಿದೆ.

Exit mobile version