ವಿದೇಶದಿಂದ ರಾಜ್ಯಕ್ಕೆ ಬರುವವರಿಗೆ 1ವಾರ ಕ್ವಾರಂಟೈನ್‌ ಕಡ್ಡಾಯ

ಬೆಂಗಳೂರು ನ 27 : ವಿದೇಶದಿಂದ ರಾಜ್ಯಕ್ಕೆ ಬರುವವರಿಗೆ 1ವಾರ ಕಡ್ಡಾಯವಾಗಿ ಕ್ವಾರಂಟೈನ್‌ನಲ್ಲಿ ಇರಬೇಕಾಗುತ್ತದೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ತಿಳಿಸಿದ್ದಾರೆ.  ವಿದೇಶದಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರಿಗೆ ಕೊರೊನಾ ನೆಗಟಿವ್ ಇದ್ದರು ಕೂಡ ಅಂತಹವರು ಒಂದು ವಾರ ಕ್ವಾರಂಟೈನ್‍ ನಲ್ಲಿರಿಸಲಾಗುತ್ತದೆ ಅಂತ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ, ಈ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ಅವರು ಮಾತನಾಡಿ, ದಕ್ಷಿಣ ಆಫ್ರಿಕಾದಲ್ಲಿ ಕೊರೊನಾ ವೈರಸ್‍ನ ಹೊಸ ರೂಪಾಂತರಿ ತಳಿ ಒಮಿಕ್ರಾನ್ ಪತ್ತೆಯಾಗಿರುವ ಹಿನ್ನೆಲೆ ಈಗಾಗಗಲೇ ಏರ್ ಪೋರ್ಟ್‌ಗಳಲ್ಲಿ ಕೂಡ ಟೆಸ್ಟ್ ಮಾಡಲಾಗುತ್ತಿದೆ. ನೆಗಟಿವ್ ಬಂದರೂ ಕೂಡ ಅವರು ಮನೆಗೆ ಹೋಗವ ಹಾಗೇ ಇಲ್ಲ, ನೆಗೆಟಿವ್ ಬಂದ ಮೇಲೂ ಒಂದು ವಾರ ಕ್ವಾರಂಟೈನ್‍ನಲ್ಲಿರಬೇಕೆಂದು ಸೂಚಿಸಲಾಗುತ್ತದೆ ಅಂತ ತಿಳಿಸಿದ್ದಾರೆ. ಸಮುದಾಯಕ್ಕೆ ಬಂದರೆ ಈ ವೈರಸ್ ವೇಗವಾಗಿ ಹರಡುತ್ತದೆ ಎಂಬ ಮಾಹಿತಿ ಇದೆ. ಜಿನೋಮಿಕ್ ಸಿಕ್ವೆನ್ಸಿಂಗ್ ಮಾಡಿ, ಹರಡುವ ತೀವ್ರತೆ ಬಗ್ಗೆ ಪರೀಕ್ಷೆ ನಡೆಸಲಾಗುತ್ತಿದೆ. ಸದ್ಯಕ್ಕೆ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು. ಇನ್ನೂ ಧಾರವಾಡದ ವೈದ್ಯಕೀಯ ವಿದ್ಯಾರ್ಥಿಗಳ ಕರೋನ ಕೇಸ್‌ಗೆ ಸಂಬಂಧಪಟ್ಟಂತೆ ಅವರು ಮಾತನಾಡಿ, ದ್ಯಾರ್ಥಿಗಳ ವಿಜಿನೋಮಿಕ್ ಸಿಕ್ವೆನ್ಸಿಂಗ್ ಪರೀಕ್ಷೆಗೆ ಕಳಿಸಲಾಗಿದೆ.

Exit mobile version