ನಿಮ್ಮ ನಾಯಕನನ್ನು ಆಯ್ಕೆ ಮಾಡುವ ಹೊಣೆ ನಿಮ್ಮದು: ಸುಧಾಮೂರ್ತಿ

Bengaluru: ಮತದಾನದ ದಿನ ಮನೆಯಲ್ಲಿ ಕುಳಿತು ಮುಂದೊಂದು ದಿನ ದೇಶದ ಕುರಿತು ಮಾತನಾಡಬೇಡಿ. ಮತಗಟ್ಟೆಗೆ ಬಂದು ನಿಮ್ಮ ಮತ ಚಲಾಯಿಸಿ. ಇದು ನಿಮ್ಮ ಹಕ್ಕು, ನಿಮ್ಮ ನಾಯಕನನ್ನು ನೀವೇ ಆಯ್ಕೆ ಮಾಡಿ ಎಂದು ಲೇಖಕಿ ಹಾಗೂ ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ (Sudhamurthy) ಮತದಾರರಿಗೆ ಮನವಿ ಮಾಡಿದ್ದಾರೆ.

ಲೋಕಸಭಾ ಚುನಾವಣೆಯ (Loksabha Election) ಎರಡನೇ ಹಂತದ ಮತದಾನ ಇಂದು ಆರಂಭಗೊಂಡಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ ಒಟ್ಟು 88 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. 1,200ಕ್ಕೂ ಹೆಚ್ಚು ಅಭ್ಯರ್ಥಿಗಳು ಜನಾದೇಶ ಬಯಸಿದ್ದಾರೆ. ಸರಿಯಾದ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಹೊಣೆ ನಮ್ಮದು. ಇಂದು ಬಿಸಿಲಿಗೆ ಬರಲಾರವು ಎಂದು ಮನೆಯಲ್ಲಿ ಕೂತು ಮುಂದಿನ ದಿನಗಳಲ್ಲಿ ಅಭಿವೃದ್ಧಿಯ ಬಗ್ಗೆ ಮಾತನಾಡಬೇಡಿ ಎಂದು ಸುಧಾಮೂರ್ತಿ ಹೇಳಿದ್ದಾರೆ.

ಇನ್ಫೊಸಿಸ್‌ ಸಹ ಸಂಸ್ಥಾಪಕ ಎನ್‌.ಆರ್‌. ನಾರಾಯಣಮೂರ್ತಿ (N R Narayanamurthy) ಹಾಗೂ ರಾಜ್ಯಸಭಾ ಸದಸ್ಯೆ, ಲೇಖಕಿ ಸುಧಾಮೂರ್ತಿ ಅವರು ಬೆಂಗಳೂರಿನ ಬಿಇಎಸ್ (BES) ಮತಗಟ್ಟೆಯಲ್ಲಿ ಮತ ಚಲಾಯಿಸಿದರು, ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳಿಗೆ ಹೋಲಿಸಿದರೆ ನಗರವಾಸಿಗಳು ಕಡಿಮೆ ಮತ ಚಲಾಯಿಸುತ್ತಾರೆ ಎಂದು ನಾನು ಯಾವಾಗಲೂ ಭಾವಿಸುತ್ತೇನೆ. ಯುವ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ನಾನು ವಿನಂತಿಸುತ್ತೇನೆ ಇದು ನಮ್ಮ ನಿಮ್ಮೆಲ್ಲರ ಹಕ್ಕು ಸರಿಯಾಗಿ ಬಳಸಿಕೊಳ್ಳೋಣ ಎಂದು ಹೇಳಿದ್ದಾರೆ.

Exit mobile version