ಬೆಂಗಳೂರು ಡಿ 1 : ಸ್ಯಾಂಡಲ್ವುಡ್ ನಟಿ ಸುಧಾರಾಣಿಯವರಿಗೆ ಕಲಾ ಕ್ಷೇತ್ರದಲ್ಲಿ ಗೌರವ ಡಾಕ್ಟರೇಟ್ ನೀಡಲಾಗಿದೆ. ಈ ಕುರಿತಾಗಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ಸಂತೋಷವನ್ನು ಅಭಿಮಾನಿಗಳ ಜೊತೆಗೆ ಹಂಚಿಕೊಂಡಿದ್ದಾರೆ.
ನಿಮ್ಮೆಲ್ಲರೊಂದಿಗೆ ಸಂತೋಷದ ಸುದ್ದಿಯನ್ನು ಹಂಚಿಕೊಳ್ಳಲು ಬಯಸುತ್ತೇನೆ. ಇಂಡಿಯನ್ ಎಂಪೈರ್ ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಯೂನಿವರ್ಸಲ್ ಡೆವಲಪ್ಮೆಂಟ್ ಕೌನ್ಸಿಲ್ನಿಂದ ನನಗೆ ಕಲಾ ಕ್ಷೇತ್ರದಲ್ಲಿ ಗೌರವ ಡಾಕ್ಟರೇಟ್ ನೀಡಲಾಗಿದೆ ಎಂದು ಬರೆದುಕೊಂಡು ಡಾಕ್ಟರೇಟ್ ಸ್ವೀಕರಿಸುತ್ತಿರುವ ಫೋಟೋವನ್ನು ಇನ್ಸ್ಟಾಗ್ರಾಮ್ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.