ಕಬ್ಬಿನ ಬಾಕಿ ಹಣ ಬಿಡುಗಡೆಗೆ ಸರ್ಕಾರ ಸಜ್ಜು – ಬಸವರಾಜ ಬೊಮ್ಮಾಯಿ

ಬೆಂಗಳೂರು ಸೆ 27 : ಕಬ್ಬಿನ ಬಾಕಿ ಹಣಕ್ಕೆ ಸಂಬಂಧಿಸಿದಂತೆ ಸಕ್ಕರೆ ಕಾರ್ಖಾನೆ‌ಗಳ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಲಾಗಿದೆ. ಮತ್ತೊಮ್ಮೆ ಸಭೆ ನಡೆಸಿ ಹಣ ಪಾವತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ತಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.  

ಈ ಬಗ್ಗೆ ಮಾತನಾಡಿದ ಅವರು ಅಕ್ಟೋಬರ್ 3 ರಂದು ಸಕ್ಕರೆ ಆಯುಕ್ತರ ಕಚೇರಿಯನ್ನು ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರ ಮಾಡಲಾಗುತ್ತದೆ ಜೊತೆಗೆ ಹಾಗೆಯೇ ಕಬ್ಬಿನ ಬಾಕಿ ಹಣಕ್ಕೆ ಸಂಬಂಧಿಸಿದಂತೆ ಸಕ್ಕರೆ ಕಾರ್ಖಾನೆ‌ಗಳ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಲಾಗಿದೆ ಮತ್ತೊಮ್ಮೆ ಸಭೆ ನಡೆಸಿ ಹಣ ಪಾವತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ‌. ಚಳಿಗಾಲದ ಅಧಿವೇಶನ‌ವನ್ನು ಸುವರ್ಣ ವಿಧಾನಸೌಧದಲ್ಲಿ ನಡೆಸಲು ತೀರ್ಮಾನ ಕೈಗೊಳ್ಳಲಾಗಿದ್ದು, ಅದಕ್ಕೂ ಮೊದಲೇ ಸಾಧ್ಯವಾದಷ್ಟು ಪ್ರಮಾಣದಲ್ಲಿ ಪ್ರಮುಖ ಕಚೇರಿಗಳನ್ನು ಸ್ಥಳಾಂತರ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನೆರೆ ಹಾವಳಿಗೆ ಸಂಬಂಧಿಸಿದಂತೆ‌ಯೂ ಮಾತನಾಡಿದ ಅವರು, ಈ ಸಂಬಂಧ ಪ್ರಗತಿ ಪರಿಶೀಲನಾ ಸಭೆ ನಡೆಸಿ ವರದಿ ಸಲ್ಲಿಸಲು ಜಿಲ್ಲಾಧಿಕಾರಿ‌ಗಳಿಗೆ ಸೂಚಿಸಲಾಗಿತ್ತು. ಇದೀಗ ವರದಿ ಸರ್ಕಾರ‌ಕ್ಕೆ ತಲುಪಿದ್ದು, ಹಣಕಾಸು ಇಲಾಖೆ ಜೊತೆಗೆ ಸಭೆ ನಡೆಸಿ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಬೊಮ್ಮಾಯಿ ತಿಳಿಸಿದ್ದಾರೆ.

Exit mobile version