Visit Channel

ಕೊರೊನ ಹಿನ್ನಲೆ ಉದ್ಯಮಿಗಳ ಆತ್ಮಹತ್ಯೆ ಸಂಖ್ಯೆ ಹೆಚ್ಚಳ

ನವದೆಹಲಿ ನ 9 : ಕರೋನಾ ಪ್ರೇರಿತ ಲಾಕ್ಡೌನ್ ಕಾರಣದಿಂದ ದೇಶದಾದ್ಯಂತ ಉದ್ಯಮಗಳು ಸ್ಥಗಿತಗೊಂಡಿದ್ದರಿಂದ ಉದ್ಯಮಿಗಳು ಇನ್ನಿಲ್ಲದ ಸಂಕಷ್ಟಕ್ಕೆ ಸಿಲುಕಿದ್ದರು. ಇದರಿಂದಾಗಿ 2020ರಲ್ಲಿ ಸುಮಾರು 11,716 ಉದ್ಯಮಿಗಳು ಆತ್ಮಹತ್ಯೆಯ ಹಾದಿ ತುಳಿದಿದ್ದಾರೆಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ವರದಿ ನೀಡಿದೆ. ಈ ಪಟ್ಟಿಯಲ್ಲಿ ಕರ್ನಾಟಕ ಮೊದಲನೇ ಸ್ಥಾನದಲ್ಲಿರುವುದು ರಾಜ್ಯದ ಆರ್ಥಿಕ ಪರಿಸ್ಥಿತಿಗೆ ಹಿಡಿದ ಕೈಗನ್ನಡಿ.

2019ಕ್ಕೆ ತುಲನೆ ಮಾಡಿದರೆ, ಆತ್ಮಹತ್ಯೆ ಮಾಡಿಕೊಂಡ ಉದ್ಯಮಿಗಳ ಸಂಖ್ಯೆಯಲ್ಲಿ 29%ದಷ್ಟು ಏರಿಕೆಯಾಗಿದೆ.

2019ರಲ್ಲಿ 9,052 ಜನರು ಆತ್ಮಹತ್ಯೆ ಮಾಡಿಕೊಂಡಿದ್ದರು. ಉದ್ಯಮಿಗಳ ವರ್ಗದಲ್ಲಿ ಬರುವಂತಹ ಬೃಹತ್ ವ್ಯಾಪಾರಿಗಳಲ್ಲಿ ಅತೀ ಹೆಚ್ಚು ಜನರು ಆತ್ಮಹತ್ಯೆಗೆ ಶರಣಾಗಿದ್ದಾರೆ. 2019ರಲ್ಲಿ 2,906 ಬೃಹತ್ ವ್ಯಾಪಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರೆ, 2020ರಲ್ಲಿ 4,356 ವ್ಯಾಪಾರಿಗಲು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು 4,226 ಸಣ್ಣ ಪ್ರಮಾಣದ ವ್ಯಾಪಾರಿಗಳು ಆತ್ಮಹತ್ಯೆಯ ಹಾದಿಯನ್ನು ತುಳಿದಿದ್ದಾರೆ.

ಕರ್ನಾಟಕದಲ್ಲೇ ಅತೀ ಹೆಚ್ಚು ಉದ್ಯಮಿಗಳ ಆತ್ಮಹತ್ಯೆ :

ಕರ್ನಾಟಕದಲ್ಲಿ ಅತೀ ಹೆಚ್ಚು ಜನ ಉದ್ಯಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2020ರಲ್ಲಿ 1,772 ಜನರು ಸಾವಿನ ಕದ ತಟ್ಟಿದ್ದಾರೆ. 2019ರ ಸಂಖ್ಯೆಗೆ ತುಲನೆ ಮಾಡಿದರೆ, 2020ರಲ್ಲಿ ಆತ್ಮಹತ್ಯೆ ಮಾಡಿಕೊಂಡವರ ಸಂಖ್ಯೆಯು 103% ಏರಿಕೆ ಕಂಡಿದೆ. 2019ರಲ್ಲಿ 875 ಉದ್ಯಮಿಗಳು ಆತ್ಮಹತ್ಯೆಗೆ ಶರಣಾಗಿದ್ದರು.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.