Visit Channel

ವಿಜಯಪುರ ಜಿ.ಪಂ.ಅಧ್ಯಕ್ಷೆ ಸುಜಾತಾ ‘ಸ್ಮಶಾನ ವಾಸ್ತವ್ಯ’

file7d2hyh5dhr7mjqu11h801615633290

ವಿಜಯಪುರ, ಮಾ. 13:  ವಿಜಯಪುರದ ಜಿ ಪಂ ಅಧ್ಯಕ್ಷೆ ಅವರು ವಿನೂತನ ಕಾರ್ಯದಲ್ಲಿ ಭಾಗಿಯಾಗುತ್ತಿದ್ದಾರೆ. ಭಯ ಮತ್ತು ಮೌಢ್ಯಮುಕ್ತ ಸಮಾಜ ನಿರ್ಮಾಣದ ಉದ್ದೇಶದಿಂದ ತಾಲ್ಲೂಕಿನ ಜುಮನಾಳ ಗ್ರಾಮದ ಸ್ಮಶಾನ(ಖಬರಸ್ಥಾನ)ದಲ್ಲಿ ಮಾರ್ಚ್‌14 ರಂದು ಸಂಜೆ 6ರಿಂದ ಬೆಳಿಗ್ಗೆ 6ರ ವರೆಗೆ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಸುಜಾತಾ ಸೋಮನಾಥ ಕಳ್ಳಿಮನಿ ತಿಳಿಸಿದರು.

ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾನವ ಬಂಧುತ್ವ ವೇದಿಕೆಯ ಸಹಭಾಗಿತ್ವದಲ್ಲಿ ಸ್ಮಶಾನ ವಾಸ್ತವ್ಯ ಆಯೋಜಿಸಲಾಗಿದೆ ಎಂದು ಹೇಳಿದರು.

ಮಾನವ ಬಂಧುತ್ವ ವೇದಿಕೆಯ ಸಂಸ್ಥಾಪಕ ಸತೀಶ ಜಾರಕಿಹೊಳಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕರಾದ ಎಂ.ಬಿ.ಪಾಟೀಲ, ಯಶವಂತರಾಯಗೌಡ ಪಾಟೀಲ, ದೇವಾನಂದ ಚವ್ಹಾಣ, ಮಾಜಿ ಶಾಸಕರಾದ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ರಾಜು ಅಲಗೂರ, ವಿಠಲ ಕಟಕದೊಂಡ, ಮಾಜಿ ಸಚಿವ ಡಾ.ಎಚ್‌.ಸಿ.ಮಹಾದೇವಪ್ಪ, ಕಾಂಗ್ರೆಸ್‌ ಮುಖಂಡ ಹಮೀದ್‌ ಮುಶ್ರೀಫ್‌ ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವುದಾಗಿ ತಿಳಿಸಿದರು.

ಅಥಣಿ ಮೋಟಗಿ ಮಠದ ಪ್ರಭು ಚನ್ನಬಸವ ಮಹಾಸ್ವಾಮಿ, ಆಲಮೇಲ ವಿರಕ್ತ ಮಠದ ಜಗದೇವಮಲ್ಲಿ ಬೊಮ್ಮಯ್ಯ ಸ್ವಾಮಿ, ಬಸವನ ಬಾಗೇವಾಡಿ ವಿರಕ್ತಮಠದ ಸಿದ್ದಲಿಂಗ ಮಹಾಸ್ವಾಮಿ, ಅಮೆರಿಕಾದ ವಿಶ್ವ ಬೌದ್ಧ ಮೈತ್ರಿ ಸಂಘದ ಸಲಹೆಗಾರ ಭದಂತ ಧಮ್ಮನಾಗ ಮಹಾಥೇರಾ ಕಾರ್ಯಕ್ರಮದ ಸಾನ್ನಿಧ್ಯ ವಹಿಸಲಿದ್ದಾರೆ ಎಂದರು.

ತಂದೆ ಸ್ಪೂರ್ತಿ:

‘ನನ್ನ ತಂದೆ ಹನುಮಂತ ರೊಳ್ಳಿ ಅವರು ವೈದ್ಯಕೀಯ ಸಂಶೋಧನೆಗೆ ತಮ್ಮ ದೇಹ ದಾನ ಮಾಡಿದ್ದರು. ಇದು ನನಗೆ ವೈಜ್ಞಾನಿಕ ಮನೋಭಾವ ಹೊಂದಲು ಪ್ರೇರಣೆಯಾಗಿದೆ’ ಎಂದು ಹೇಳಿ ಬಾವುಕರಾದರು.

‘ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆಯಾದ ಬಳಿಕ ಇಟ್ಟಂಗಿಹಾಳದಲ್ಲಿ ಕುರಿಗಾರರೊಂದಿಗೆ ವಾಸ್ತವ್ಯ, ಉಮರಜದಲ್ಲಿ ನೆರೆ ಸಂತ್ರಸ್ತರೊಂದಿಗೆ ವಾಸ್ತವ್ಯ, ಕಾಖಂಡಕಿಯಲ್ಲಿ ಮಾಜಿ ದೇವದಾಸಿಯರು ಮತ್ತು ಅವರ ಮಕ್ಕಳೊಂದಿಗೆ ವಾಸ್ತವ್ಯ, ಕಾಳಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಾಸ್ತವ್ಯ, ಅರಕೇರಿಯಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿನಿಲಯದಲ್ಲಿ ವಾಸ್ತವ್ಯ, ಬೋರಗಿಯಲ್ಲಿ ದಲಿತರ ಮನೆಯಲ್ಲಿ ವಾಸ್ತವ್ಯ ಮಾಡಿದ್ದು, ಜುಮನಾಳದಲ್ಲಿ ನಡೆಯಲಿರುವ ಸ್ಮಶಾನದಲ್ಲಿ ವಾಸ್ತವ್ಯ ಕೊನೆಯ ಕಾರ್ಯಕ್ರಮವಾಗಲಿದೆ’ ಎಂದು ಹೇಳಿದರು.

ಮಾನವ ಬಂಧುತ್ವ ವೇದಿಕೆ ವಿಜಯಪುರ ಜಿಲ್ಲಾ ಸಂಚಾಲಕ ಪ್ರಭುಗೌಡ ಪಾಟೀಲ, ಅಹಿಂದ ಮುಖಂಡ ಸೋಮನಾಥ ಕಳ್ಳಿಮನಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Latest News

bsy
ರಾಜಕೀಯ

ಬಿಜೆಪಿಯ ಸಂಸದೀಯ ಮಂಡಳಿಗೆ ಯಡಿಯೂರಪ್ಪ ; ರಾಜಕೀಯವಾಗಿ ಮತ್ತಷ್ಟು ಬಲಗೊಂಡ ಬಿಎಸ್‌ವೈ

ಇನ್ನು ಸಂಸದೀಯ ಮಂಡಳಿಯಲ್ಲಿ ಉತ್ತರಪ್ರದೇಶ(UttarPradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌(Yogi Adityanath) ಅವರಿಗೆ ಸ್ಥಾನ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಅವರಿಗೆ ಸ್ಥಾನ ಲಭಿಸಿಲ್ಲ.

bjp
ರಾಜಕೀಯ

ಡಿಕೆಶಿ ಸ್ವಾತಂತ್ರ್ಯದ ನಡಿಗೆಯ ಉದ್ದೇಶ, ಸಿದ್ದರಾಮಯ್ಯ ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ? : ಬಿಜೆಪಿ

ಸಿದ್ದರಾಮಯ್ಯ(Siddaramaiah) ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ ಅಥವಾ ಕಾಂಗ್ರೆಸ್(Congress) ಹಿರಿಯ ನಾಯಕರು ಡಿಕೆಶಿ(DKS) ಸುತ್ತ ಹೆಣೆದಿರುವ ಜಾಲದಿಂದ ಸ್ವಾತಂತ್ರ್ಯ ಪಡೆಯುವುದೋ?

Ghee
ಆರೋಗ್ಯ

ತುಪ್ಪದ ಬಗ್ಗೆ ತಪ್ಪು ಕಲ್ಪನೆ ಬೇಡ! ; ತಪ್ಪದೇ ತುಪ್ಪ ಸೇವಿಸಿ, ಈ ಆರು ಪ್ರಯೋಜನಗಳನ್ನು ಪಡೆದುಕೊಳ್ಳಿ

ತುಪ್ಪವು ರೋಗನಿರೋಧಕ ಶಕ್ತಿಯನ್ನು ವೃದ್ದಿಸುತ್ತದೆ, ಮೂಳೆಯ ಆರೋಗ್ಯವನ್ನು ಉತ್ತೇಜಿಸುತ್ತದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.

Assam
ದೇಶ-ವಿದೇಶ

500 ರೂ. ಬೆಟ್ಟಿಂಗ್ ಸೋಲಿಗೆ ಸ್ನೇಹಿತನ ಶಿರಚ್ಛೇದ ; 25 ಕಿ.ಮೀ ದೂರದ ಪೊಲೀಸ್ ಠಾಣೆಗೆ ಹೋಗಿ ಶರಣು!

ಆತನ ತಲೆಯನ್ನು ಹಿಡಿದುಕೊಂಡು ರಾತ್ರಿಯ ವೇಳೆ 25 ಕಿ.ಮೀ ದೂರವಿರುವ ಪೊಲೀಸ್ ಠಾಣೆಗೆ(Police Station) ನಡೆದು ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.