Mysore : ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh joining bjp) ನಾಳೆಯೇ ಬಿಜೆಪಿ ಸೇರಿಕೊಳ್ಳುತ್ತಾರೆ. ಈಗಾಗಲೇ ಈ ಬಗ್ಗೆ ಮಾತುಕತೆ ನಡೆದಿದೆ ಎಂದು ಮೇಲುಕೋಟೆ ಜೆಡಿಎ ಸ್ಶಾಸಕ ಸಿ.ಎಸ್.ಪುಟ್ಟರಾಜು ಹೇಳಿದ್ದಾರೆ.

ಮೈಸೂರಿನಲ್ಲಿ ಮಾದ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಅವರು ನಾಳೆಯೇ (Sumalatha Ambareesh joining bjp) ಬಿಜೆಪಿ ಸೇರಿಕೊಳ್ಳುತ್ತಾರೆ.
ಮಾರ್ಚ್12 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯಕ್ಕೆ ಆಗಮಿಸಿ ಮೈಸೂರು-ಬೆಂಗಳೂರು ನಡುವಿನ ಎಕ್ಸ್ಪ್ರೆಸ್ವೇ (Expressway) ಉದ್ಘಾಟನೆ ಮಾಡಲಿದ್ದಾರೆ. ಇದೇ ವೇಳೆ ಬಿಜೆಪಿ ಸೇರ್ಪಡೆಯಾಗುವ ಪ್ಲ್ಯಾನ್ಮಾಡಲಾಗಿತ್ತು.
ಆದರೆ ಅದು ಸರ್ಕಾರಿ ಕಾರ್ಯಕ್ರಮ ಆಗಿರುವುದರಿಂದ ಸುಮಲತಾ ಅಂಬರೀಶ್ಅವರು ನಾಳೆಯೇ ಬಿಜೆಪಿ ಸೇರ್ಪಡೆಯಾಗುತ್ತಾರೆ. ನನ್ನ ಪ್ರಕಾರ ಅವರು ಬಿಜೆಪಿ (BJP) ಸೇರ್ಪಡೆಯಾಗುವುದು ಖಚಿತ ಎಂದು ಶಾಸಕ ಪುಟ್ಟರಾಜು ಹೇಳಿದ್ದಾರೆ.
ಇದೇ ವೇಳೆ ಮೈಸೂರು – ಬೆಂಗಳೂರು ನಡುವಿನ ಎಕ್ಸ್ಪ್ರೆಸ್ವೇ ಕ್ರೆಡಿಟ್ ವಾರ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ರಸ್ತೆ ನಿರ್ಮಾಣದಲ್ಲಿ ಜೆಡಿಎಸ್ಪಕ್ಷದ್ದು ಕೊಡುಗೆಯಿದೆ.
ಇದನ್ನು ಓದಿ: “ಮೊದಲು ಹಣೆಗೆ ಬಿಂದಿ ಹಾಕಮ್ಮಾ, ನಿನ್ನ ಗಂಡ ಬದುಕಿದ್ದಾರಾ” – ವಿವಾದ ಸೃಷ್ಟಿಸಿದ ಸಂಸದ ಮುನಿಸ್ವಾಮಿ ಹೇಳಿಕೆ
ಹೆದ್ದಾರಿ ನಿರ್ಮಾಣಕ್ಕೆ ಬೇಕಾದ ಜಮೀನು ಪಡೆದುಕೊಳ್ಳಲು ಅಂದಿನ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ (Kumarswamy) ಅವರು ರೈತರೊಂದಿಗೆ ಅನೇಕ ಸಭೆಗಳನ್ನು ನಡೆಸಿದ್ದಾರೆ.
ವಿವಿಧ ಇಲಾಖೆಗಳಿಂದ ಕ್ಲಿಯರೆನ್ಸ್ಅನ್ನು ಕುಮಾರಸ್ವಾಮಿ ಅವರು ಕೊಡಿಸಿದ್ದರು. ಆದರೆ ಇಡೀ ಯೋಜನೆ ನನ್ನಿಂದಾನೇ ಆಗಿದೆ ಎಂಬಂತೆ ಮೈಸೂರು-ಕೊಡಗು ಸಂಸದ ಪ್ರತಾಪ್ಸಿಂಹ ಓಡಾಡುತ್ತಿದ್ದಾರೆ.
ಸಂಸದ ಪ್ರತಾಪ್ ಸಿಂಹ (Pratap Simha) ಚೀಫ್ ಎಂಜಿನಿಯರ್ ಥರ ಆಡ್ತಿದ್ದಾರೆ.
ಕೇಂದ್ರ ಸರ್ಕಾರ ಪ್ರತಾಪ್ ಸಿಂಹಗೆ ಹೆದ್ದಾರಿ ಯೋಜನೆ ಗುತ್ತಿಗೆ ಕೊಟ್ಟಿದ್ಯಾ? ನಾನು ಕೂಡಾ ಲೋಕಸಭಾ ಸಂಸದ ಆಗಿದ್ದವನು. ದೆಹಲಿಯಲ್ಲಿ ಏನೆಲ್ಲಾ ಹೋರಾಟ ಮಾಡಿದ್ದೀನಿ ಎಂದು
ಬಿ.ಎಸ್. ಯಡಿಯೂರಪ್ಪ ಅವರ ಬಳಿ ಕೇಳಿ ಸಂಸದ ಪ್ರತಾಪ್ಸಿಂಹ ತಿಳಿದುಕೊಳ್ಳಲಿ ಎಂದು ವಾಗ್ದಾಳಿ ನಡೆಸಿದರು.

ಕೇಂದ್ರದಲ್ಲಿ ಯಾವುದೇ ಸರ್ಕಾರ ಇದ್ದರೂ ಈ ಯೋಜನೆಗೆ ಸಹಕಾರ ಕೊಡಲೇಬೇಕಿತ್ತು. ಅದರಂತೆ ಬಿಜೆಪಿ ಸರ್ಕಾರ ಸಹಕಾರ ನೀಡಿದೆ. ಕುಮಾರಸ್ವಾಮಿ ಅವರ ನೇತೃತ್ವದ ಮೈತ್ರಿ ಸರ್ಕಾರ ಈ ಯೋಜನೆಯ ಅಲೈನ್ಮೆಂಟ್ ಮಾಡಿ,
ಅನುಮೋದನೆ ನೀಡದಿದ್ದರೆ ಹೆದ್ದಾರಿ ಹೇಗೆ ಆಗುತ್ತಿತ್ತು? ಈ ಯೋಜನೆ ನಿರ್ಮಾಣದಲ್ಲಿ ಜೆಡಿಎಸ್ಪಕ್ಷದ್ದೂ ಕೊಡುಗೆ ಇದೆ. ಇದು ಕೇವಲ ಬಿಜೆಪಿ ಪಕ್ಷದಿಂದಾದ ಹೆದ್ದಾರಿ ಅಲ್ಲ ಎಂದು ಹೇಳಿದ್ದಾರೆ.