Bengaluru: ಬಿಜೆಪಿ (BJP) ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್ (V Sunil Kumar) ಅವರು ರಾವಣ ಮಾತ್ರ ಅಲ್ಲ, ಸಿದ್ದರಾಮಯ್ಯ ಕೂಡ ರಾಮನ ವಿರೋಧಿ ಎನ್ನುವುದನ್ನು ತೋರಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.
ರಾಮ ಜನ್ಮಭೂಮಿ ಮರು ತನಿಖೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು ‘ ನಾನು ಪಟ್ಟಿ ಕೊಡುತ್ತೇನೆ, ನಿಮಗೆ ತಾಕತ್ ಇದ್ದರೆ ಕರ ಸೇವಕರನ್ನು ಬಂಧಿಸಿ. ನಾನೂ ಕರ ಸೇವೆಯಲ್ಲಿ ಭಾಗಿಯಾಗಿದ್ದೆ, ಬಂಧನ ಮಾಡಿದಾಕ್ಷಣ ಹಿಂದುತ್ವಕ್ಕೆ ಧಕ್ಕೆ ಮಾಡಲು ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಿಎಂ ದೇಗುಲಗಳನ್ನು ಜೀರ್ಣೋದ್ಧಾರ ಮಾಡಲಿ
ರಾಮ ಮಂದಿರ (Rama Mandir) ಉದ್ಘಾಟನೆಯಿಂದ ಇಡೀ ದೇಶ ಖುಷಿ ಪಡುತ್ತಿದೆ. ಆದರೆ, ಸಿದ್ದರಾಮಯ್ಯ ಅವರು ಶ್ರೀಕಾಂತ ಪೂಜಾರಿ (Srikantha Pujari) ಎಂಬಾತನ ಬಂಧನದ ಮೂಲಕ ಅಪಶಕುನ ಮಾಡುತ್ತಿದ್ದಾರೆ. ಸರ್ಕಾರ ಹಿಂದುತ್ವದ ಪರ, ಹಿಂದೂಗಳ ಭಾವನೆ ಇದ್ದರೆ ನೂರು ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಲಿ. ಇನ್ನು ಮನೆ ಮನೆಗಳಲ್ಲಿ ದೀಪ ಬೆಳಗಿಸಿ ಎಂದು ಪ್ರಧಾನಿ ಕರೆ ಕೊಟ್ಟಿದ್ದಾರೆ.
ಅದರಂತೆ ಸಿಎಂ ಹಾಗೂ ಸಚಿವರು ಕೂಡ ತಮ್ಮ ಮನೆಯಲ್ಲಿ ನಂದಾ ದೀಪ ಬೆಳಗಿಸಲಿ, ಸಿಎಂ ಕೂಡ ತಮ್ಮ ಕುಟುಂಬ ಸದಸ್ಯರ ಜೊತೆ ಸೇರಿ ದೀಪ ಹಚ್ಚಲಿ ಎಂದಿದ್ದಾರೆ. ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ನೆಲೆಗೊಂಡಿದೆ. ಅದನ್ನು ಕದಡುವ ದುಸ್ಸಾಹಸಕ್ಕೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಗೃಹ ಸಚಿವ ಜಿ ಪರಮೇಶ್ವರ್ ಮುಂದಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದರು.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ್ದ ಅವರು, ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿಯವರನ್ನು ಬಂಧಿಸುವ ಮೂಲಕ 30 ವರ್ಷಗಳ ಹಿಂದಿನ ಪ್ರಕರಣವನ್ನು ಮುನ್ನೆಲೆಗೆ ತರುವ ಕೆಲಸ ಸಿದ್ದರಾಮಯ್ಯ ಮಾಡಿದ್ದಾರೆ. ಹಿಂದೂ ಕಾರ್ಯಕರ್ತನನ್ನು ಬಂಧಿಸಿರುವ ಸಂದರ್ಭದ ಬಗ್ಗೆ ಎಲ್ಲರೂ ಯೋಚಿಸಬೇಕಿದೆ ಎಂದು ಕಿಡಿಕಾರಿದ್ದರು.
ಭವ್ಯಶ್ರೀ ಆರ್ ಜೆ