Politics : 1,400ಕ್ಕೂ ಹೆಚ್ಚು PFI ಉಗ್ರರಿಗೆ ಸಿದ್ದರಾಮಯ್ಯ ಕ್ಷಮಾದಾನ ನೀಡಿದ್ದರು : ಸಚಿವ ಸುನೀಲ್ ಕುಮಾರ್

Siddaramaiah

Bengaluru : ಕಾಂಗ್ರೆಸ್(Sunil Kumar slams siddaramaiah) ಅಧಿಕಾರದಲ್ಲಿ ಇದ್ದಾಗ ದೇಶ ನಿರ್ಮಾಣ ಸಂಸ್ಥೆಗಳಿಗೆ ಸಮಸ್ಯೆ ತಂದೊಡ್ಡುತ್ತದೆ.

ಆದರೆ ಪಿಎಫ್ಐನಂಥ ರಾಷ್ಟ್ರ ವಿರೋಧಿ ಶಕ್ತಿಗಳಿಗೆ ಬೆಂಬಲವಾಗಿರುತ್ತದೆ. ಯಾರು ದೇಶಪ್ರೇಮಿ, ಯಾರು ರಾಷ್ಟ್ರ ವಿರೋಧಿ ಎಂದು ಇದರಿಂದಲೇ(Sunil Kumar slams siddaramaiah) ಅರ್ಥವಾಗುತ್ತದೆ.

ದೇಶ ವಿರೋಧಿ ಕೃತ್ಯ ನಡೆಸುತ್ತಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನಾವು ಪಿಎಫ್ಐ ಹಾಗೂ ಅದರ ಸಹರ್ತಿ ಸಂಘಟನೆಗಳನ್ನು ನಿಷೇಧ ಮಾಡಿದ್ದೇವೆ.

ಆದರೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ದೇಶ ಪ್ರೇಮಿ ಸಂಘಟನೆಯಾದ RSS ಅನ್ನು ನಿಷೇಧ ಮಾಡಿತ್ತು. ಕಾಂಗ್ರೆಸ್ನ ಬದ್ಧತೆ ಏನೆಂಬುದು ಇದರಿಂದಲೇ ಅರ್ಥವಾಗುತ್ತದೆ ಎಂದು ಸಚಿವ ಸುನೀಲ್ ಕುಮಾರ್(Sunil Kumar) ಟೀಕಿಸಿದ್ದಾರೆ.

ಕಾಂಗ್ರೆಸ್(Congress) ವಿರುದ್ದ ವಾಗ್ದಾಳಿ ನಡೆಸಿರುವ ಅವರು, ಪಿಎಫ್ಐನ್ನು ಪ್ರಧಾನಿ ಮೋದಿ(Narendra Modi) ನೇತೃತ್ವದ ಬಿಜೆಪಿ ಸರಕಾರವೇ ನಿಷೇಧಿಸಿದೆ.

ದೇಶದ ಆಂತರಿಕ ಹಾಗೂ ಬಾಹ್ಯ ರಕ್ಷಣೆಗೆ ಬಿಜೆಪಿ ಸದಾ ಬದ್ಧವಾಗಿದೆ. ಪ್ರವೀಣ್ ನೆಟ್ಟಾರ್ ಹತ್ಯೆ ನಡೆದಾಗ ಈ ಸಂಘಟನೆಗಳ ನಿಷೇಧಕ್ಕೆ ನಾನು ಒತ್ತಾಯಿಸಿದ್ದೆ.

ಇದನ್ನೂ ಓದಿ : https://vijayatimes.com/rahul-gandhi-posters-torn/

ಪ್ರವೀಣ್ ಹತ್ಯೆಯಲ್ಲೂ ಪಿಎಫ್ಐ ಪಾತ್ರವಿದೆ ಎಂದು ಕೇಂದ್ರ ಸರಕಾರ(Central Government) ಹೇಳಿದೆ. ಈ ಹಿಂದೆ ಸಿಮಿ ಸಂಘಟನೆಯನ್ನು ಅಟಲ್ ಬಿಹಾರಿ ವಾಜಪೇಯಿ(Atal Bihari Vajpayee) ನೇತೃತ್ವದ ಬಿಜೆಪಿ ಸರಕಾರ ಬ್ಯಾನ್ ಮಾಡಿತ್ತು.

ಇದು ಪಿಎಫ್ಐ ಪರ ಕಾಂಗ್ರೆಸ್ ತಾಳಿದ್ದ ಮೃಧು ಧೋರಣೆಗೆ ಸಾಕ್ಷಿಯಾಗಿತ್ತಲ್ಲವೇ ?

ಕೇಂದ್ರದಲ್ಲೂ ಬಿಜೆಪಿ ಸರಕಾರ ಇದೆ, ರಾಜ್ಯದಲ್ಲೂ ಬಿಜೆಪಿ ಸರಕಾರ ಇದೆ. ಸಾಧ್ವವಿದ್ದರೆ ಪಿಎಫ್ಐ ಬ್ಯಾನ್ ಮಾಡಿ ಎಂದು ಸಿದ್ದರಾಮಯ್ಯ(Siddaramaiah) ಆಗಾಗ ಮಾಡುತ್ತಿದ್ದ ಉದ್ರೇಕಕಾರಿ ಭಾಷಣಕ್ಕೆ ಈಗ ಉತ್ತರ ನೀಡಲಾಗಿದೆ.

ಹುಬ್ಬಳ್ಳಿ(Hubbali) ಹಾಗೂ ಮಂಗಳೂರಿನಲ್ಲಿ(Mangaluru) ಇದೇ ಸಂಘಟನೆ ಕಾರ್ಯರ್ತರು ಪೊಲೀಸ್ ಠಾಣೆಗೆ ನುಗ್ಗಿ ದಾಂಧಲೆ ನಡೆಸಿದಾಗ ಕಾಂಗ್ರೆಸ್ ನಾಯಕರು ತುಟಿ ಬಿಚ್ಚಲಿಲ್ಲ.

ಬೆಂಗಳೂರಿನ ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ತನ್ನದೇ ಶಾಸಕರ ಮನೆಗೆ ಬೆಂಕಿ ಹಚ್ಚಿದಾಗಲೂ ಕಾಂಗ್ರೆಸ್ ಧ್ವನಿ ಎತ್ತಿರಲಿಲ್ಲ ಎಂದಿದ್ದಾರೆ.

ಸಿದ್ದರಾಮಯ್ಯ ಅಧಿಕಾರದಲ್ಲಿ ಇದ್ದಾಗ ಪಿಎಫ್ಐ ಸಂಘಟನೆಯ ವಿರುದ್ಧ ದಾಖಲಾಗಿದ್ದ ೧೦೦ಕ್ಕೂ ಹೆಚ್ಚು ಪ್ರಕರಣ ವಾಪಾಸ್ ಪಡೆಯಲಾಗಿತ್ತು.

೧೪೦೦ಕ್ಕೂ ಹೆಚ್ಚು ಪಿಎಫ್ಐ ಉಗ್ರರಿಗೆ ಸಿದ್ದರಾಮಯ್ಯ ಕ್ಷಮಾದಾನ ನೀಡಿದ್ದರು. ಇದರ ಫಲವಾಗಿ ರಾಜ್ಯದಲ್ಲಿ ಹಿಂದು ಕರ್ಯರ್ತರ ಸರಣಿ ಕೊಲೆಗೆ ಕಾಂಗ್ರೆಸ್,

ಇತ್ತೀಚೆಗೆ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲೂ ಇದೇ ಸಂಘಟನೆ ಪಾತ್ರ ಇರುವುದನ್ನು ಕೇಂದ್ರ ಗೃಹ ಇಲಾಖೆ ಉಲ್ಲೇಖಿಸಿದ್ದು, ಭವಿಷ್ಯದಲ್ಲಿ ಪಿಎಫ್ಐ ನಡೆಸಬಹುದಾಗಿದ್ದ ಭಾರಿ ವಿಧ್ವಂಸಕ ಕೃತ್ಯಗಳಿಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರ ಕಡಿವಾಣ ಹಾಕಿದೆ.

https://youtu.be/iuTzZ2OMpYU ಅವರಿಗೆ ಯಾಕೆ ಭಯ ಬೀಳ್ಬೇಕು?

ಪಿಎಫ್ಐ, ಐಸಿಸ್ ನಂಥ ಜಾಗತಿಕ ಉಗ್ರ ಸಂಘಟನೆಗಳ ಜತೆ ಸಂಬಂಧ ಹೊಂದಿತ್ತು. ದೇಶದ ಆಂತರಿಕ ಭದ್ರತೆಗೆ ಧಕ್ಕೆ ತರುವ ಸಂಚು ರೂಪಿಸಿದ್ದು ಮಾತ್ರವಲ್ಲ, ಮುಸ್ಲಿಂ ಯುವಕರ ತಲೆಕೆಡಿಸಿ ಅವರನ್ನು ಐಸಿಸ್ ಸಂಘಟನೆಗೆ ಕಳುಹಿಸುತ್ತಿತ್ತು ಎಂದು ಟೀಕಿಸಿದ್ದಾರೆ.

Exit mobile version