ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ . ೭೦ ನೇ ವರ್ಷಕ್ಕೆ ಕಾಲಿಟ್ಟಿರುವ ತಲೈವಾ ಗೆ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ..
ಹುಟ್ಟುಹಬ್ಬದ ಖುಷಿಯಲ್ಲಿರುವ ರಜನಿ ಅವರಿಗೆ ದೇಶದ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ. ಟ್ವಿಟರ್ ನಲ್ಲಿ ಹುಟ್ಟುಹಬ್ಬದ ವಿಶ್ ಮಾಡಿದ್ದು ; “ ಪ್ರೀತಿಯ ರಜನಿಕಾಂತ್ ಅವರೇ ನಿಮಗೆ ಜನ್ಮದಿನಕ್ಕೆ ಹುಟ್ಟುಹಬ್ಬದ ಶುಭಾಶಯಗಳು.ನಿಮಗೆ ದೀರ್ಘ ಆರೋಗ್ಯ ಸಿಗಲಿ ಎಂದು ಶುಭಾಶಯ ತಿಳಿಸಿದ್ದಾರೆ.
ಇತ್ತ ರಜನಿಕಾಂತ್ ನಿವಾಸದ ಕಡೆ ರಾಜ್ಯದ ನಾನಾ ಕಡೆಗಳಿಂದ ಅಭಿಮಾನಿಗಳು ಜಮಾಯಿಸಿದ್ದು ಶುಭಾಶಯ ತಿಳಿಸಲು ಕಾಯುತ್ತಿದ್ದಾರೆ.