ಚೆನ್ನೈ, ಮೇ. 17: ನಟ ರಜನಿಕಾಂತ್ ಸೋಮವಾರ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಭೇಟಿಯಾಗಿ, ಕೊರೊನಾವೈರಸ್ ವಿರುದ್ಧದ ಹೋರಾಟಕ್ಕಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ₹50 ಲಕ್ಷ ದೇಣಿಗೆಯನ್ನು ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ತಮಿಳುನಾಡು ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಗಳನ್ನು ಜನರು ಪಾಲಿಸಬೇಕೆಂದು ಮನವಿ ಮಾಡಿದ್ದಾರೆ.
ಈ ಮೊದಲು ಕೊರೊನಾವೈರಸ್ ವಿರುದ್ಧ ಹೋರಾಡಲು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆಯನ್ನು ನೀಡುವಂತೆ ಸ್ಟಾಲಿನ್ ಅವರು ಜನರಿಗೆ ಮನವಿ ಮಾಡಿದ್ದರು. ಭಾನುವಾರದಂದು ಕೋವಿಡ್ ವಿರುದ್ಧ ಹೋರಾಡಲು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನೇತೃತ್ವದಲ್ಲಿ 13 ಸದಸ್ಯರ ಶಾಸಕಾಂಗ ಸಲಹಾ ಸಮಿತಿಯನ್ನು ರಚಿಸಲಾಗಿತ್ತು.