ಕರ್ನಾಟಕಕ್ಕೆ ಅಗತ್ಯವಿರುವ ಆಕ್ಸಿಜನ್‌ ಪೂರೈಸಿ: ಹೈಕೋರ್ಟ್‌ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ, ಮೇ. 07: ರಾಜ್ಯಕ್ಕೆ ಅಗತ್ಯವಿರುವ 1200 ಮೆಟ್ರಿಕ್‌ ಟನ್‌ ಆಕ್ಸಿಜನ್‌ ಪೂರೈಕೆ ಮಾಡಬೇಕೆಂಬ ಹೈಕೋರ್ಟ್‌ ಆದೇಶಕ್ಕೆ ತಡೆಯೊಡ್ಡುವಂತೆ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ತಿರಸ್ಕರಿಸಿದೆ.

ನ್ಯಾಯ ಮೂರ್ತಿಗಳಾದ ಡಿವೈ ಚಂದ್ರಚೂಡ್‌ ಮತ್ತು ಎಂ.ಆರ್‌. ಶಾ ಅವರ ಪೀಠದ ಮುಂದೆ ಈ ವಿಷಯವನ್ನು ಜನರಲ್‌ ತುಷಾರ್‌ ಮೆಹ್ತಾ ಅವರು ಪ್ರಸ್ತಾಪಿಸಿದ್ದರು. ಕರ್ನಾಟಕ ಹೈ ಕೋರ್ಟ್‌ ಆದೇಶಕ್ಕೆ ತುರ್ತಾಗಿ ತಡೆಯೊಡ್ಡಬೇಕು ಎಂದು ಕೋರಿದ್ದರು.

ಆದರೆ ಮೂರು ದಿನಗಳ ಒಳಗಾಗಿ ಅಗತ್ಯ ಆಮ್ಲಜನಕ​ ಪೂರೈಸಿ. ಕೋವಿಡ್-19 ರೋಗಿಗಳಿಗಾಗಿ ಪ್ರಸ್ತುತ ನೀಡುತ್ತಿರುವ ಮೆಡಿಕಲ್​ ಆಕ್ಸಿಜನ್​​ ಪ್ರಮಾಣವನ್ನು 965 ಮೆಟ್ರಿಕ್ ಟನ್​​ನಿಂದ 1200 ಮೆಟ್ರಿಕ್ ಟನ್​​ಗಳಿಗೆ ಹೆಚ್ಚಿಸಬೇಕೆಂದು ಕರ್ನಾಟಕ ಹೈಕೋರ್ಟ್​ ಕೇಂದ್ರ ಸರ್ಕಾರವನ್ನು ಒತ್ತಾಯಿಸಿತ್ತು.

ಇದನ್ನು ಒಪ್ಪದ ಕೇಂದ್ರವು, ಕರ್ನಾಟಕ ಹೈಕೋರ್ಟ್​ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು. ಕರ್ನಾಟಕದ ನಾಗರಿಕರು ಪರದಾಡಲು ಬಿಡುವುದಿಲ್ಲ’ಇಂದು ಈ ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಚಂದ್ರಚೂಡ್ ನೇತೃತ್ವದ ನ್ಯಾಯಪೀಠವು, ಹೈಕೋರ್ಟ್​ ಆದೇಶದಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ.

ಕರ್ನಾಟಕದ ನಾಗರಿಕರು ಪರದಾಡಲು ಬಿಡುವುದಿಲ್ಲ. ರಾಜ್ಯಕ್ಕಿರುವ ಆಮ್ಲಜನಕದ ಬೇಡಿಕೆಯನ್ನು ಹೈಕೋರ್ಟ್ ಸರಿಯಾಗಿಯೇ ಪರಿಶೀಲಿಸಿದೆ. ಕರ್ನಾಟಕಕ್ಕೆ 1200 ಮೆಟ್ರಿಕ್​ ಟನ್​​ ಆಮ್ಲಜನಕ ನೀಡಲೇಬೇಕು ಎಂದು ಕೇಂದ್ರದ ಸಾಲಿಸಿಟರ್ ಜನರಲ್‌ ತುಷಾರ್ ಮೆಹ್ತಾಗೆ ಸೂಚಿಸಿದೆ.

Exit mobile version