Visit Channel

ಪ್ರಧಾನಿ ಭದ್ರತೆ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಇಂದು ವಿಚಾರಣೆ

ನವದೆಹಲಿ ಜ 7 : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೂಕ್ತ ಭದ್ರತೆ ನೀಡದ ಕುರಿತ ವಿಚಾರವಾಗಿ ಇಂದು ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಗೆ ಸಂಬಂಧಿಸಿದಂತೆ ಪಂಜಾಬ್ ಸರ್ಕಾರದಿಂದ ಗಂಭೀರ ಮತ್ತು ಉದ್ದೇಶಪೂರ್ವಕ ಲೋಪ ಆಗಿದ್ದು, ಈ ಬಗ್ಗೆ ತನಿಖೆ ನಡೆಸಬೇಕು ಎಂದು ಕೋರಿ ಸುಪ್ರೀಂಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ ವಿ ರಮಣ ನೇತೃತ್ವದ ಪೀಠ, ಸುಪ್ರೀಂ ಕೋರ್ಟ್‌ನಲ್ಲಿ ಪಂಜಾಬ್ ಸರ್ಕಾರದ ಸ್ಥಾಯಿ ವಕೀಲರಿಗೆ ಅರ್ಜಿಯ ಪ್ರತಿಯನ್ನು ಸಲ್ಲಿಸಲು ಲಾಯರ್ಸ್ ವಾಯ್ಸ್ ಗೆ ತಿಳಿಸಿದ್ದು, ಶುಕ್ರವಾರ ವಿಚಾರಣೆಗೆ ಬರಲಿದೆ. ಹಿರಿಯ ವಕೀಲ ಮಣಿಂದರ್ ಸಿಂಗ್ ಅವರು ತುರ್ತು ವಿಚಾರಣೆಯನ್ನು ಕೋರಿ ನ್ಯಾಯಮೂರ್ತಿ ರಮಣ ಅವರ ಪೀಠದ ಮುಂದೆ ವಿಷಯವನ್ನು ಪ್ರಸ್ತಾಪಿಸಿದ ನಂತರ ಸಿಜೆಐ ಈ ನಿರ್ದೇಶನ ನೀಡಿದ್ದಾರೆ.

“ಪ್ರಧಾನಿ ಭದ್ರತೆ ಲೋಪದ ಜವಾಬ್ದಾರಿಯನ್ನು ಸರಿಪಡಿಸಬೇಕು. ಇಂತಹ ಘಟನೆ ಮರುಕಳಿಸಬಾರದು ಎಂಬುದು ನಮ್ಮ ಅಪೇಕ್ಷೆ. ಬಂದೋಬಸ್ತ್ ಕುರಿತು ವೃತ್ತಿಪರ ಮತ್ತು ಪರಿಣಾಮಕಾರಿ ತನಿಖೆಯ ಅಗತ್ಯವಿದೆ. ಪ್ರಧಾನಿ ಭೇಟಿ ವೇಳೆ ಪಂಜಾಬ್ ಪೋಲೀಸರ ಚಲನವಲನ ಮತ್ತು ನಿಯೋಜನೆಯ ಸಂಪೂರ್ಣ ದಾಖಲೆಗಳನ್ನು ಬಟಿಂಡಾದ ಜಿಲ್ಲಾ ನ್ಯಾಯಾಧೀಶರು ಕಸ್ಟಡಿಗೆ ತೆಗೆದುಕೊಳ್ಳಲು ನಿಮ್ಮ ಮೇಲ್ವಿಚಾರಣೆಯಲ್ಲಿ ಸೂಕ್ತವಾಗಿರುತ್ತದೆ ಎಂದು ಸಿಂಗ್ ಪೀಠವನ್ನು ಒತ್ತಾಯಿಸಿದರು.

ಜಿಲ್ಲಾ ನ್ಯಾಯಾಧೀಶರು ದಾಖಲೆಗಳನ್ನು ಸಲ್ಲಿಸಿದ ನಂತರ ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದನ್ನು ನಿರ್ಧರಿಸಬಹುದು. ದಯವಿಟ್ಟು ಇಂದೇ ಆದೇಶವನ್ನು ರವಾನಿಸುವುದನ್ನು ಪರಿಗಣಿಸಿ ಎಂದು ಹಿರಿಯ ವಕೀಲರು ಮನವಿ ಮಾಡಿದರು. ಈ ವೇಳೆ ಸಿಜೆಐ ಅವರು ತಮ್ಮ ಅರ್ಜಿಯ ಪ್ರತಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸುವಂತೆ ಸೂಚಿಸಿದರು. ಅಲ್ಲದೆ, ಜ 7ರಂದು ಈ ಅರ್ಜಿಯ ವಿಚಾರಣೆಗೆ ತೆಗೆದುಕೊಳ್ಳಲಾಗುವುದು ಎಂದು ನ್ಯಾಯಮೂರ್ತಿಗಳು ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Latest News

bsy
ರಾಜಕೀಯ

ಬಿಜೆಪಿಯ ಸಂಸದೀಯ ಮಂಡಳಿಗೆ ಯಡಿಯೂರಪ್ಪ ; ರಾಜಕೀಯವಾಗಿ ಮತ್ತಷ್ಟು ಬಲಗೊಂಡ ಬಿಎಸ್‌ವೈ

ಇನ್ನು ಸಂಸದೀಯ ಮಂಡಳಿಯಲ್ಲಿ ಉತ್ತರಪ್ರದೇಶ(UttarPradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌(Yogi Adityanath) ಅವರಿಗೆ ಸ್ಥಾನ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಅವರಿಗೆ ಸ್ಥಾನ ಲಭಿಸಿಲ್ಲ.

bjp
ರಾಜಕೀಯ

ಡಿಕೆಶಿ ಸ್ವಾತಂತ್ರ್ಯದ ನಡಿಗೆಯ ಉದ್ದೇಶ, ಸಿದ್ದರಾಮಯ್ಯ ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ? : ಬಿಜೆಪಿ

ಸಿದ್ದರಾಮಯ್ಯ(Siddaramaiah) ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ ಅಥವಾ ಕಾಂಗ್ರೆಸ್(Congress) ಹಿರಿಯ ನಾಯಕರು ಡಿಕೆಶಿ(DKS) ಸುತ್ತ ಹೆಣೆದಿರುವ ಜಾಲದಿಂದ ಸ್ವಾತಂತ್ರ್ಯ ಪಡೆಯುವುದೋ?

Ghee
ಆರೋಗ್ಯ

ತುಪ್ಪದ ಬಗ್ಗೆ ತಪ್ಪು ಕಲ್ಪನೆ ಬೇಡ! ; ತಪ್ಪದೇ ತುಪ್ಪ ಸೇವಿಸಿ, ಈ ಆರು ಪ್ರಯೋಜನಗಳನ್ನು ಪಡೆದುಕೊಳ್ಳಿ

ತುಪ್ಪವು ರೋಗನಿರೋಧಕ ಶಕ್ತಿಯನ್ನು ವೃದ್ದಿಸುತ್ತದೆ, ಮೂಳೆಯ ಆರೋಗ್ಯವನ್ನು ಉತ್ತೇಜಿಸುತ್ತದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.

Assam
ದೇಶ-ವಿದೇಶ

500 ರೂ. ಬೆಟ್ಟಿಂಗ್ ಸೋಲಿಗೆ ಸ್ನೇಹಿತನ ಶಿರಚ್ಛೇದ ; 25 ಕಿ.ಮೀ ದೂರದ ಪೊಲೀಸ್ ಠಾಣೆಗೆ ಹೋಗಿ ಶರಣು!

ಆತನ ತಲೆಯನ್ನು ಹಿಡಿದುಕೊಂಡು ರಾತ್ರಿಯ ವೇಳೆ 25 ಕಿ.ಮೀ ದೂರವಿರುವ ಪೊಲೀಸ್ ಠಾಣೆಗೆ(Police Station) ನಡೆದು ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.