ಪ್ರಧಾನಿ ಭದ್ರತೆ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಇಂದು ವಿಚಾರಣೆ

ನವದೆಹಲಿ ಜ 7 : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೂಕ್ತ ಭದ್ರತೆ ನೀಡದ ಕುರಿತ ವಿಚಾರವಾಗಿ ಇಂದು ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಗೆ ಸಂಬಂಧಿಸಿದಂತೆ ಪಂಜಾಬ್ ಸರ್ಕಾರದಿಂದ ಗಂಭೀರ ಮತ್ತು ಉದ್ದೇಶಪೂರ್ವಕ ಲೋಪ ಆಗಿದ್ದು, ಈ ಬಗ್ಗೆ ತನಿಖೆ ನಡೆಸಬೇಕು ಎಂದು ಕೋರಿ ಸುಪ್ರೀಂಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ ವಿ ರಮಣ ನೇತೃತ್ವದ ಪೀಠ, ಸುಪ್ರೀಂ ಕೋರ್ಟ್‌ನಲ್ಲಿ ಪಂಜಾಬ್ ಸರ್ಕಾರದ ಸ್ಥಾಯಿ ವಕೀಲರಿಗೆ ಅರ್ಜಿಯ ಪ್ರತಿಯನ್ನು ಸಲ್ಲಿಸಲು ಲಾಯರ್ಸ್ ವಾಯ್ಸ್ ಗೆ ತಿಳಿಸಿದ್ದು, ಶುಕ್ರವಾರ ವಿಚಾರಣೆಗೆ ಬರಲಿದೆ. ಹಿರಿಯ ವಕೀಲ ಮಣಿಂದರ್ ಸಿಂಗ್ ಅವರು ತುರ್ತು ವಿಚಾರಣೆಯನ್ನು ಕೋರಿ ನ್ಯಾಯಮೂರ್ತಿ ರಮಣ ಅವರ ಪೀಠದ ಮುಂದೆ ವಿಷಯವನ್ನು ಪ್ರಸ್ತಾಪಿಸಿದ ನಂತರ ಸಿಜೆಐ ಈ ನಿರ್ದೇಶನ ನೀಡಿದ್ದಾರೆ.

“ಪ್ರಧಾನಿ ಭದ್ರತೆ ಲೋಪದ ಜವಾಬ್ದಾರಿಯನ್ನು ಸರಿಪಡಿಸಬೇಕು. ಇಂತಹ ಘಟನೆ ಮರುಕಳಿಸಬಾರದು ಎಂಬುದು ನಮ್ಮ ಅಪೇಕ್ಷೆ. ಬಂದೋಬಸ್ತ್ ಕುರಿತು ವೃತ್ತಿಪರ ಮತ್ತು ಪರಿಣಾಮಕಾರಿ ತನಿಖೆಯ ಅಗತ್ಯವಿದೆ. ಪ್ರಧಾನಿ ಭೇಟಿ ವೇಳೆ ಪಂಜಾಬ್ ಪೋಲೀಸರ ಚಲನವಲನ ಮತ್ತು ನಿಯೋಜನೆಯ ಸಂಪೂರ್ಣ ದಾಖಲೆಗಳನ್ನು ಬಟಿಂಡಾದ ಜಿಲ್ಲಾ ನ್ಯಾಯಾಧೀಶರು ಕಸ್ಟಡಿಗೆ ತೆಗೆದುಕೊಳ್ಳಲು ನಿಮ್ಮ ಮೇಲ್ವಿಚಾರಣೆಯಲ್ಲಿ ಸೂಕ್ತವಾಗಿರುತ್ತದೆ ಎಂದು ಸಿಂಗ್ ಪೀಠವನ್ನು ಒತ್ತಾಯಿಸಿದರು.

Exit mobile version