• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ತ್ಯಾಜ್ಯ ನಿರ್ವಹಣೆ ಉಲ್ಲಂಘಿಸಿದರೆ ವಿದ್ಯುತ್, ನೀರು ಕಟ್: ಮಾಲ್, ಹೋಟೆಲ್‌, ಅಪಾರ್ಟ್‌ಮೆಂಟ್‌ಗಳಿಗೆ ಸುಪ್ರೀಂ ಶಾಕ್

Teju Srinivas by Teju Srinivas
in ದೇಶ-ವಿದೇಶ, ಪ್ರಮುಖ ಸುದ್ದಿ, ವಿಜಯ ಟೈಮ್ಸ್‌
ತ್ಯಾಜ್ಯ ನಿರ್ವಹಣೆ ಉಲ್ಲಂಘಿಸಿದರೆ ವಿದ್ಯುತ್, ನೀರು ಕಟ್: ಮಾಲ್, ಹೋಟೆಲ್‌, ಅಪಾರ್ಟ್‌ಮೆಂಟ್‌ಗಳಿಗೆ ಸುಪ್ರೀಂ ಶಾಕ್
0
SHARES
9
VIEWS
Share on FacebookShare on Twitter

ಕಸ ನಿಮ್ಮದು, ಜವಾಬ್ದಾರಿಯೂ (Supreme Court shock hotel apartments) ನಿಮ್ಮದೇ: ಸುಪ್ರೀಂ ಕೋರ್ಟ್

ಇನ್ಮುಂದೆ ಹಸಿ-ಒಣ ಕಸ ಬೇರ್ಪಡಿಸದಿದ್ರೆ ಕರೆಂಟ್‌, ನೀರು ಕಟ್

ಸುಪ್ರೀಂ ಕೋರ್ಟ್ ಖಡಕ್ ಆದೇಶ: ಮಾಲ್‌, ಹೋಟೆಲ್‌, ಆಸ್ಪತ್ರೆ, ಅಪಾರ್ಟ್‌ಮೆಂಟ್‌ಗಳಿಗೆ ಹೊಸ ನಿಯಮ

New delhi : ಕಸ ನಿರ್ವಹಣೆ ಸರಿಯಾಗಿ ಮಾಡದ ಬೃಹತ್ ಸಂಸ್ಥೆಗಳ (Supreme Court shock hotel apartments) ವಿರುದ್ಧ ಇನ್ನು ಮುಂದೆ ಕಠಿಣ ಕ್ರಮ ಎದುರಾಗಲಿದೆ.

ಘನತ್ಯಾಜ್ಯ ನಿರ್ವಹಣೆ ಕೇವಲ ಪೌರಕಾರ್ಮಿಕರ ಜವಾಬ್ದಾರಿಯಲ್ಲ, ಕಸ ಉತ್ಪಾದಿಸುವ ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು ಎಂದು ಸುಪ್ರೀಂ ಕೋರ್ಟ್ (Supreme Court) ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.

Supreme Court shock hotel apartments

ನಿಯಮಗಳನ್ನು ಪಾಲಿಸದ ದೊಡ್ಡ ಮಾಲ್‌ಗಳು, ಹೋಟೆಲ್‌ಗಳು, ಆಸ್ಪತ್ರೆಗಳು, ವಾಣಿಜ್ಯ ಸಂಕೀರ್ಣಗಳು ಹಾಗೂ ಬೃಹತ್ ವಸತಿ ಸಮುಚ್ಛಯಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯಗಳಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ.

ತ್ಯಾಜ್ಯವನ್ನು ಮೂಲದಲ್ಲೇ ವಿಂಗಡಿಸಿ, ಸೂಕ್ತ ರೀತಿಯಲ್ಲಿ ಸಂಸ್ಕರಿಸಿ ವಿಲೇವಾರಿ (Supreme Court shock hotel apartments) ಮಾಡದ ಸಂಸ್ಥೆಗಳಿಗೆ ವಿದ್ಯುತ್ ಮತ್ತು ನೀರಿನ ಸಂಪರ್ಕ ಕಡಿತಗೊಳಿಸುವಂತಹ ಕ್ರಮ ಜರುಗಿಸಬಹುದು ಎಂದು ತಿಳಿಸಿದೆ.

ನ್ಯಾಯಮೂರ್ತಿಗಳಾದ ಎಸ್.ವಿ.ಎನ್. ಭಟ್ಟಿ (S.V.N. Bhatti) ಮತ್ತು ಎನ್.ವಿ. ಅಂಜಾರಿಯಾ (N.V. Anjaria) ಅವರಿದ್ದ ಪೀಠವು ಘನತ್ಯಾಜ್ಯ ನಿರ್ವಹಣಾ ನಿಯಮಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ರಾಷ್ಟ್ರವ್ಯಾಪಿ ಹಲವು ನಿರ್ದೇಶನಗಳನ್ನು ನೀಡಿದೆ.

ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಹಾಗೂ ಜಿಲ್ಲಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ದೊಡ್ಡ ಪ್ರಮಾಣದಲ್ಲಿ ತ್ಯಾಜ್ಯ ಉತ್ಪಾದಿಸುವ ಸಂಸ್ಥೆಗಳನ್ನು ಗುರುತಿಸಬೇಕು. ಈ ಪ್ರಕ್ರಿಯೆಯನ್ನು ಆರು ವಾರಗಳೊಳಗೆ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ.

ಪ್ರತಿದಿನ ಉತ್ಪತ್ತಿಯಾಗುವ ಕಸವನ್ನು ಹಸಿ ಮತ್ತು ಒಣ ಕಸವಾಗಿ ಮೂಲದಲ್ಲೇ ವಿಂಗಡಿಸಿ, ನಿಯಮಾನುಸಾರ ಸಂಸ್ಕರಿಸುವ ಜವಾಬ್ದಾರಿ ಸಂಸ್ಥೆಗಳ ಮೇಲಿದೆ. ನಿಯಮ

ಉಲ್ಲಂಘನೆ ಕಂಡುಬಂದರೆ ಮೊದಲು ಕ್ರಮ ಕೈಗೊಂಡು, ಅಗತ್ಯವಿದ್ದರೆ ವಿದ್ಯುತ್ ಹಾಗೂ ನೀರಿನಂತಹ ಮೂಲಸೌಕರ್ಯ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಬಹುದು.

ತ್ಯಾಜ್ಯ ನಿರ್ವಹಣೆಯಲ್ಲಿ ಪಾರದರ್ಶಕತೆ ತರಲು ಸ್ಥಳೀಯ ಆಡಳಿತ ಸಂಸ್ಥೆಗಳಿಗೂ ಸುಪ್ರೀಂ ಕೋರ್ಟ್ ಹಲವು ಸೂಚನೆಗಳನ್ನು ನೀಡಿದೆ. ಕಸ ಸುರಿಯುವ ಪ್ರದೇಶಗಳ

ಜಿಯೋ-ಟ್ಯಾಗ್ (Geo-tag) ಮಾಡಲಾದ ಛಾಯಾಚಿತ್ರಗಳು ಹಾಗೂ ಮಾಸಿಕ ವರದಿಗಳನ್ನು ಆನ್‌ಲೈನ್ ಪೋರ್ಟಲ್‌ನಲ್ಲಿ ದಾಖಲಿಸುವಂತೆ ನಿರ್ದೇಶಿಸಲಾಗಿದೆ.

ರೈಲ್ವೆ, ರಕ್ಷಣಾ ಇಲಾಖೆ ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳು ಕೂಡ ತ್ಯಾಜ್ಯ ನಿರ್ವಹಣಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿವೆಯೇ ಎಂಬುದನ್ನು ಮೇಲ್ವಿಚಾರಣಾ

ಸಮಿತಿ ಪರಿಶೀಲಿಸಲಿದೆ. ಕಸವನ್ನು ನದಿ, ಕೆರೆ ಸೇರಿದಂತೆ ಜಲಮೂಲಗಳಿಗೆ ಸುರಿಯುವುದರಿಂದ ಉಂಟಾಗುತ್ತಿರುವ ಮಾಲಿನ್ಯದ ಬಗ್ಗೆಯೂ ನಿಖರ ಮಾಹಿತಿಯನ್ನು ಸಲ್ಲಿಸುವಂತೆ

ನ್ಯಾಯಾಲಯ ಸೂಚಿಸಿದೆ. ಪರಿಸರ ಸಂರಕ್ಷಣೆಯ ವಿಚಾರದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯಕ್ಕೆ ಅವಕಾಶ ನೀಡಬಾರದು ಎಂಬ ಸಂದೇಶವನ್ನು ಈ ನಿರ್ದೇಶನಗಳು ನೀಡಿವೆ.

ಶಿಕ್ಷಣ ಕ್ಷೇತ್ರಕ್ಕೂ ಈ ಆದೇಶದಲ್ಲಿ ವಿಶೇಷ ಮಹತ್ವ ನೀಡಲಾಗಿದೆ. ಶಾಲೆಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳ ಪಠ್ಯಕ್ರಮದಲ್ಲಿ ಘನತ್ಯಾಜ್ಯ ನಿರ್ವಹಣೆಯ ಕುರಿತು ಪ್ರಾಯೋಗಿಕ ಶಿಕ್ಷಣವನ್ನು ಅಳವಡಿಸಿಕೊಳ್ಳುವಂತೆ ಸೂಚಿಸಲಾಗಿದೆ. ಶಿಕ್ಷಕರಿಗೆ ಈ ಕುರಿತು ವಿಶೇಷ ತರಬೇತಿ ನೀಡಬೇಕು.

ತರಬೇತಿ ಪಡೆದ ವಿದ್ಯಾರ್ಥಿಗಳು ತಮ್ಮ ಮನೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಕಸ ವಿಂಗಡಣೆ ಮತ್ತು ಸ್ವಚ್ಛತೆಯ ಕುರಿತು ಜಾಗೃತಿ ಮೂಡಿಸುವಂತೆ ಪ್ರೋತ್ಸಾಹಿಸಬೇಕು ಎಂದು ಪೀಠ ತಿಳಿಸಿದೆ.

ಈ ಮೂಲಕ ಕಸ ನಿರ್ವಹಣೆ ಕೇವಲ ಸರ್ಕಾರಿ ಇಲಾಖೆ ಅಥವಾ ಪೌರಕಾರ್ಮಿಕರ ಕೆಲಸ ಎಂಬ ಮನೋಭಾವ ಬದಲಾಗಬೇಕು ಎಂಬ ಆಶಯವನ್ನು ನ್ಯಾಯಾಲಯ ವ್ಯಕ್ತಪಡಿಸಿದೆ.

ಕೇಂದ್ರ ಸರ್ಕಾರದ ಘನತ್ಯಾಜ್ಯ ನಿರ್ವಹಣಾ ನಿಯಮಗಳು, 2016ರ ಪ್ರಕಾರ, ಪ್ರತಿದಿನ 100 ಕೆಜಿಗಿಂತ ಹೆಚ್ಚು ತ್ಯಾಜ್ಯ ಉತ್ಪಾದಿಸುವ ಬೃಹತ್ ತ್ಯಾಜ್ಯ ಉತ್ಪಾದಕರು ತಮ್ಮ ಆವರಣದಲ್ಲೇ ಹಸಿ ಕಸವನ್ನು ಕಾಂಪೋಸ್ಟ್ ಅಥವಾ ಬಯೋ-ಮೀಥೇನೈಸೇಶನ್ ಮೂಲಕ ಸಂಸ್ಕರಿಸುವ ಜವಾಬ್ದಾರಿ ಹೊಂದಿದ್ದಾರೆ.

ಆದರೆ ಹಲವು ಕಡೆಗಳಲ್ಲಿ ನಿಯಮಗಳಿದ್ದರೂ ಅವುಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ಕಂಡುಬರುತ್ತಿದೆ. “ಕಸ ಉತ್ಪಾದಿಸುವುದು ನನ್ನ ಹಕ್ಕು, ಆದರೆ ಅದನ್ನು ನಿರ್ವಹಿಸುವುದು ನನ್ನ ಕೆಲಸವಲ್ಲ” ಎಂಬ ಮನೋಭಾವದಿಂದ ಸಮಾಜ ಹೊರಬರಬೇಕು ಎಂಬ ಕಳವಳವನ್ನು ಸುಪ್ರೀಂ ಕೋರ್ಟ್ ವ್ಯಕ್ತಪಡಿಸಿದೆ.

ಸ್ವಚ್ಛ ನಗರ, ಶುದ್ಧ ನೀರು ಮತ್ತು ಆರೋಗ್ಯಕರ ಪರಿಸರಕ್ಕಾಗಿ ಸರ್ಕಾರದ ಜೊತೆಗೆ ನಾಗರಿಕರು ಹಾಗೂ ಬೃಹತ್ ಸಂಸ್ಥೆಗಳೂ ತಮ್ಮ ಹೊಣೆಗಾರಿಕೆಯನ್ನು ನಿಭಾಯಿಸಬೇಕು ಎಂಬ ಸ್ಪಷ್ಟ ಸಂದೇಶವನ್ನು ಈ ಮಹತ್ವದ ಆದೇಶ ನೀಡಿದೆ.

ಇದನ್ನು ಓದಿ : https://vijayatimes.com/india-warns-pakistan-and-china/

Tags: ApartmentelectricitymallNewdelhisupremecourt

Related News

ರಾಜ್ಯದಲ್ಲಿ ಪೋಕ್ಸೋ ಪ್ರಕರಣಗಳ ಸಂಖ್ಯೆ ಏರಿಕೆ: ಐದು ವರ್ಷಗಳಲ್ಲಿ 15 ಸಾವಿರಕ್ಕೂ ಅಧಿಕ ಕೇಸ್
ಪ್ರಮುಖ ಸುದ್ದಿ

ರಾಜ್ಯದಲ್ಲಿ ಪೋಕ್ಸೋ ಪ್ರಕರಣಗಳ ಸಂಖ್ಯೆ ಏರಿಕೆ: ಐದು ವರ್ಷಗಳಲ್ಲಿ 15 ಸಾವಿರಕ್ಕೂ ಅಧಿಕ ಕೇಸ್

September 5, 2026
ಪ್ರವಾಸಿಗರಿಗೆ ಗುಡ್‌ನ್ಯೂಸ್: ನಾಲ್ಕು ತಿಂಗಳ ಬಳಿಕ ಹಾರಂಗಿ, ಮತ್ತಿಗೋಡು ಆನೆ ಶಿಬಿರಗಳು ಪುನರಾರಂಭ
ಪ್ರಮುಖ ಸುದ್ದಿ

ಪ್ರವಾಸಿಗರಿಗೆ ಗುಡ್‌ನ್ಯೂಸ್: ನಾಲ್ಕು ತಿಂಗಳ ಬಳಿಕ ಹಾರಂಗಿ, ಮತ್ತಿಗೋಡು ಆನೆ ಶಿಬಿರಗಳು ಪುನರಾರಂಭ

September 5, 2026
ಮೋರ್ ಸ್ಟ್ರಾಂಗ್, ಮೋರ್ ಎನಿಮೀಸ್: ನಮ್ಮ ಸರ್ಕಾರದಲ್ಲಿ 100 ನಾಗೇಂದ್ರ ಇದ್ದಾರೆ ಎಂದ ಸಿಎಂ ಡಿಕೆ ಶಿವಕುಮಾರ್
ಪ್ರಮುಖ ಸುದ್ದಿ

ಮೋರ್ ಸ್ಟ್ರಾಂಗ್, ಮೋರ್ ಎನಿಮೀಸ್: ನಮ್ಮ ಸರ್ಕಾರದಲ್ಲಿ 100 ನಾಗೇಂದ್ರ ಇದ್ದಾರೆ ಎಂದ ಸಿಎಂ ಡಿಕೆ ಶಿವಕುಮಾರ್

September 5, 2026
ಶೀಘ್ರದಲ್ಲೇ ದಾಳಿ ಮಾಡುತ್ತೇವೆ: ಇರಾನ್‌ನ ‘ಪಿಕ್ಯಾಕ್ಸ್ ಮೌಂಟನ್’ ಮೇಲೆ ಅಮೆರಿಕದ ಕಣ್ಣು
ದೇಶ-ವಿದೇಶ

ಶೀಘ್ರದಲ್ಲೇ ದಾಳಿ ಮಾಡುತ್ತೇವೆ: ಇರಾನ್‌ನ ‘ಪಿಕ್ಯಾಕ್ಸ್ ಮೌಂಟನ್’ ಮೇಲೆ ಅಮೆರಿಕದ ಕಣ್ಣು

September 5, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.