ಪ್ರತಿಷ್ಠಿತ ಸಪ್ನಾ ಬುಕ್ ಹೌಸ್ ಸಂಸ್ಥಾಪಕ ಸುರೇಶ್ ಸಿ ಶಾ ಇನ್ನಿಲ್ಲ

ಬೆಂಗಳೂರು, ಮೇ. 26: ಭಾರತದ ಅತಿದೊಡ್ಡ ಪುಸ್ತಕ ಮಳಿಗೆ ಎಂದೇ ಹೆಸರಾದ ಸಪ್ನಾ ಬುಕ್ ಹೌಸ್ ಸಂಸ್ಥಾಪಕ ಸುರೇಶ್ ಸಿ, ಶಾ ಅವರು ಮಂಗಳವಾರ ಮಧ್ಯಾಹ್ನ 2.15ಕ್ಕೆ ನಿಧನ ಹೊಂದಿದ್ದಾರೆ.

ಅವರಿಗೆ 84 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಶೇಷಾದ್ರಿಪುರದ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

1966ರಲ್ಲಿ ಪುಟ್ಟದಾಗಿ ಸಪ್ನಾ ಬುಕ್ ಹೌಸ್ ಆರಂಭಿಸಿದ ಸುರೇಶ್ ಸಿ, ಷಾ ಅವರು ಸಂಸ್ಥೆಯನ್ನು ಆಮೂಲಾಗ್ರವಾಗಿ ಬೆಳೆಸಿದರು. ಈಗ ಅದು ಭಾರತದ ಅತಿದೊಡ್ಡ ಪುಸ್ತಕ ಮಳಿಗೆ ಎಂದೇ ಹೆಸರಾಗಿದೆ. 19 ಶಾಖೆಗಳನ್ನು ಹೊಂದಿರುವ ಸಪ್ನಾ ಕನ್ನಡ ಪುಸ್ತಕಗಳನ್ನು ವ್ಯಾಪಕವಾಗಿ ಓದುಗರಿಗೆ ತಲುಪಿಸುವ ಕೆಲಸವನ್ನು ಸತತವಾಗಿ ಮಾಡಿಕೊಂಡು ಬರುತ್ತಿದೆ.

ಸುರೇಶ್ ಸಿ ಶಾ ಅವರು ಮೂವರು ಪುತ್ರರಾದ ನಿತಿನ್ ಶಾ, ದೀಪಕ್ ಶಾ ಮತ್ತು ಪರೇಶ್ ಶಾ ಅವರನ್ನು ಅಗಲಿದ್ದಾರೆ. ಬುಧವಾರ ಬೆಳಗ್ಗೆ ಹರಿಶ್ಚಂದ್ರ ಘಾಟ್ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಸಪ್ನಾದ ಪ್ರಕಟಣೆ ತಿಳಿಸಿದೆ.

Latest News

ದೇಶ-ವಿದೇಶ

‘ಡಾನಿ’ ಬುಡಕಟ್ಟು ಜನಾಂಗದಲ್ಲಿ ಬೆರಳನ್ನು ಕತ್ತರಿಸುವುದೇ ಸಂಪ್ರದಾಯವಂತೆ!

ಇಂಡೋನೇಷ್ಯಾದ, ಪಪುವಾ ಗಿನಿಯಾ ದ್ವೀಪದಲ್ಲಿ ವಾಸಿಸುವ ಎಲ್ಲಾ ಡಾನಿ ಬುಡಕಟ್ಟಿನ ಮಹಿಳೆಯರನ್ನು ಕತ್ತರಿಸಿದ ಬೆರಳುಗಳಿಂದ ಬದುಕಲು ಒತ್ತಾಯಿಸಲಾಗುತ್ತದೆ.

ರಾಜಕೀಯ

`ನನ್ನಲ್ಲೂ ದಾಖಲೆಗಳಿವೆ ; `ಸರ್ಟಿಫಿಕೇಟ್ ಕೋರ್ಸ್ʼಗಿಂತ ಬೃಹತ್ ಚಾಪ್ಟರ್ 1, 2, 3 ಆಗುತ್ತವೆ, ಬಿಚ್ಚಲೇ? : ಹೆಚ್.ಡಿಕೆ

ಕಟ್ಟಡಗಳ ಹೆಸರಿನಲ್ಲಿ ಕಮೀಷನ್ ಕಾಂಚಾಣ, ಅಧಿಕಾರಿಗಳನ್ನು ಒಳಕ್ಕೆ ಹಾಕಿಕೊಂಡು ಡೀಲ್ ಮಾಡುವ ಅಶ್ವತ್ ನಾರಾಯಣ್, ಇದೇನಾ ನೀವು ನೀಡುತ್ತಿರುವ ಉನ್ನತ ಶಿಕ್ಷಣ?

ಆರೋಗ್ಯ

ಸಕ್ಕರೆ ಖಾಯಿಲೆ ಇರುವವರು ಈ ಹಣ್ಣುಗಳನ್ನು ಸೇವಿಸಬಹುದು ; ತಪ್ಪದೇ ಈ ಮಾಹಿತಿ ಓದಿ

ತಜ್ಞರ ಪ್ರಕಾರ, ಸಕ್ಕರೆ ಕಾಯಿಲೆ ಇರುವವರು ಈ 5 ವಿಧದ ಹಣ್ಣುಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಅಂತಹ ಹಣ್ಣುಗಳ ವಿವರ ಇಲ್ಲಿದೆ ನೋಡಿ.

ದೇಶ-ವಿದೇಶ

ದೇಶದ ಹೆಮ್ಮೆ ತ್ರಿವರ್ಣ ಧ್ವಜವೂ ಕೂಡ ಬಿಜೆಪಿಗೆ ವ್ಯಾಪಾರದ ಸರಕಾಗಿದೆ : ಬಿ.ಕೆ.ಹರಿಪ್ರಸಾದ್

38×11,80,000=4.484 ಕೋಟಿ, ಹೇಗಿದೆ ಮೋದಿ ಸರ್ಕಾರದ ಲೂಟಿ? ಕೇಂದ್ರದ ಮೋದಿ ಸರ್ಕಾರ ವಸೂಲಿ ಬಾಜಿತನಕ್ಕೆ ರಾಷ್ಟ್ರಧ್ವಜವನ್ನ ಬಳಸಿಕೊಂಡಿರುವುದು ಅಕ್ಷಮ್ಯ ಅಪರಾಧ