New Delhi : ಕಾಂಗ್ರೆಸ್ (Congress) 136 ಸ್ಥಾನದಿಂದ ಬಹುಮತ ಸಾಧಿಸಿ ಗೆದ್ದು ಬೀಗಿದ್ದು ಸಿಎಂ ಆಯ್ಕೆ ಕಗ್ಗಂಟಾಗಿಯೇ ಉಳಿದಿತ್ತು ಮುಖ್ಯಮಂತ್ರಿ (Surjewala warned to give notice) ಸ್ಥಾನಕ್ಕಾಗಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಪೈಪೋಟಿ ನಡೆಯುತ್ತಿತ್ತು.

ಕರ್ನಾಟಕದ ಮುಖ್ಯಮಂತ್ರಿ (Chief Minister of Karnataka) ಯಾರಾಗಬೇಕು ಎಂಬ ಪ್ರಶ್ನೆ ಕಾಂಗ್ರೆಸ್‌ನ ಮೇಲ್ಪಂಕ್ತಿಯಲ್ಲಿ ಜಟಿಲವಾಗಿತ್ತು,
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (KPCC President D.K.Shivakumar) ಹಾಗೂ ಸಿದ್ದರಾಮಯ್ಯ ನಡುವೆ ಸಿಎಂ ಸ್ಥಾನಕ್ಕೆ ಪೈಪೋಟಿ ಏರ್ಪಟ್ಟಿತ್ತು.
ಇದೇ ವೇಳೆ, ಎಐಸಿಸಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸುವ ಮುನ್ನವೇ ಹೇಳಿಕೆ ನೀಡಿದವರ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ (High Command) ಕೋಪಗೊಂಡಿತ್ತು.
ಔಪಚಾರಿಕ ನಿರ್ಧಾರಕ್ಕೆ ಮುಂಚಿತವಾಗಿ ಹೇಳಿಕೆ ನೀಡುವವರಿಗೆ ನೋಟಿಸ್ ನೀಡಲಾಗುವುದು ಎಂದು ಕಾಂಗ್ರೆಸ್‌ನ ಕರ್ನಾಟಕ ಮುಖ್ಯಸ್ಥ ರಣದೀಪ್ ಸುರ್ಜೇವಾಲಾ ಎಚ್ಚರಿಸಿದ್ದಾರೆ.
ಸಿದ್ಧರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿ ಎಂದು ಘೋಷಿಸಿದವರಿಗೆ ಕಾಂಗ್ರೆಸ್ ಹೈಕಮಾಂಡ್ ಕೆಲ ನಾಯಕರಿಗೆ ಎಚ್ಚರಿಕೆ (Surjewala warned to give notice) ನೀಡಿದೆ.
ಇದನ್ನೂ ಓದಿ : https://vijayatimes.com/karnataka-rural-budget-2023/
ಜತೆಗೆ ಭವಿಷ್ಯದಲ್ಲಿ ಇಂತಹ ಹೇಳಿಕೆಗಳನ್ನು ನೀಡಿದರೆ ನೋಟಿಸ್ ಜಾರಿ ಮಾಡಲಾಗುವುದು ಹೇಳಿದರು. ಕೆಪಿಸಿಸಿ ಮಹಿಳಾ ವಿಭಾಗದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ (KPCC Women President Dr. Pushpa
Amarnath) ಮತ್ತು ಅಶೋಕ್ ಪಟ್ಟಣ್ ಅವರಿಗೆ ನೋಟಿಸ್ ನೀಡುವಂತೆ ಸುರ್ಜೇವಾಲಾ (Surjewala) ಸೂಚಿಸಿದ್ದಾರೆ. ಸಿದ್ದರಾಮಯ್ಯ ಅವರನ್ನು ಸಿಎಂ ಎಂದು ಘೋಷಿಸಲಾಗಿದೆ ಎಂದು ಪುಷ್ಪಾ ಹೇಳಿದ್ದರು.
ಕೆಲವು ಮಾಧ್ಯಮಗಳು ಸಿದ್ದರಾಮಯ್ಯ ಸಿಎಂ ಆಗುವುದು ಬಹುತೇಕ ಖಚಿತವಾಗಿದೆ. ಪ್ರಮಾಣವಚನಕ್ಕೆ ಸಿದ್ಧತೆಗಳೂ ನಡೆಯುತ್ತಿವೆ ಎಂದು ವರದಿಯನ್ನೂ ಮಾಡಿದ್ದವು.
ಮಾಧ್ಯಮಗಳಿಗೆ ಅಧಿಕೃತ ಘೋಷಣೆಗೂ ಮುನ್ನವೇ ಹೇಳಿಕೆ ನೀಡಿದವರು ಯಾರು ಎಂದು ತರಾಟೆಗೆ ತೆಗೆದುಕೊಂಡಿದ್ದರು.

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಎಂದು ನಿನ್ನೆ ಅಧಿಕೃತ ಘೋಷಣೆ
ದೆಹಲಿಯ ಎಐಸಿಸಿ ಕಚೇರಿಯಲ್ಲಿ (Delhi AICC Office) ನಡೆದ ಸುದ್ದಿಗೋಷ್ಠಿಯಲ್ಲಿ ಕೆ.ಸಿ.ವೇಣುಗೋಪಾಲ್ ಅವರು ಕರ್ನಾಟಕ ಸಿಎಂ ಆಗಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಆಗಿ ಡಿ.ಕೆ.ಶಿವಕುಮಾರ್
ಕಾರ್ಯನಿರ್ವಹಿಸಲಿದ್ದಾರೆ ಎಂದು ಘೋಷಿಸಿದರು. ಡಿ.ಕೆ.ಶಿವಕುಮಾರ್ ಮಾತ್ರ ಡಿಸಿಎಂ ಆಗಲಿದ್ದಾರೆ. ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ.
ಮೇ 20ರಂದು ಡಿಕೆ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮೇ 20ರಂದು ಮಧ್ಯಾಹ್ನ 12:30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಮೇ 20ರಂದು ಹಲವು ಶಾಸಕರು ಸಚಿವರಾಗಿ ಪ್ರಮಾಣ ವಚನ
ಸ್ವೀಕರಿಸಲಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ (AICC General Secretary KC Venugopal) ಘೋಷಿಸಿದ್ದಾರೆ. ರಾಷ್ಟ್ರೀಯ ರಾಜಕೀಯದ ಇತ್ತೀಚಿನ ಮಾಹಿತಿಯನ್ನು ಇಲ್ಲಿ ಪಡೆಯಿರಿ.
ಇದನ್ನೂ ಓದಿ : https://vijayatimes.com/consultation-with-high-command/
ಡಿ.ಕೆಶಿ ಹಾಗೂ ಸಿದ್ದರಾಮಯ್ಯ ಇಬ್ಬರೂ ಸಮರ್ಥರೇ
ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರ ಸುದ್ದಿಗೋಷ್ಠಿ ಆರಂಭವಾಗಿದೆ. ಕೆಸಿ ವೇಣುಗೋಪಾಲ್ ಮತ್ತು ರಣದೀಪ್ ಸುರ್ಜೆವಾಲಾ ಸುದ್ದಿಗೋಷ್ಠಿ ನಡೆಸಿದರು.
ಕರ್ನಾಟಕದಲ್ಲಿ ಗೆಲುವಿಗೆ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ (Priyanka Gandhi), ರಾಹುಲ್ ಗಾಂಧಿ (Rahul Gandhi) ಹಾಗೂ ಎಲ್ಲ ಹಿರಿಯ ನಾಯಕರೇ ಕಾರಣ.
ಭಾರತ್ ಜೋಡೋ ಪಾದಯಾತ್ರೆಯ ನಂತರ ಕಾಂಗ್ರೆಸ್ ಗೆದ್ದಿದೆ. ಕರ್ನಾಟಕದಲ್ಲಿ ಅನುಭವಿ ಮತ್ತು ಸಮರ್ಥ ಕಾಂಗ್ರೆಸ್ ನಾಯಕರಿದ್ದಾರೆ. ಕೆಪಿಸಿಸಿ ಅಧ್ಯಕ್ಷ ರಾದ ಡಿ.ಕೆ.ಶಿವಕುಮಾರ್ ಪಕ್ಷವನ್ನು ಒಳ್ಳೆ ರೀತಿಯಲ್ಲಿ ಸಂಘಟಿಸಿದ್ದಾರೆ.
ಸಿದ್ದರಾಮಯ್ಯ,ಮತ್ತು ಡಿ.ಕೆ.ಶಿವಕುಮಾರ್ ಇಬ್ಬರೂ ಸಮರ್ಥ ನಾಯಕರು ಎಂದರು.
- ರಶ್ಮಿತಾ ಅನೀಶ್