ಇಂದು T-20 ವಿಶ್ವಕಪ್ ಫೈನಲ್: 11ವರ್ಷಗಳ ನಂತರ ಫೈನಲ್‌ನಲ್ಲಿ ಭಾರತ!

Barbados: ಇಂದು T-20 ವಿಶ್ವಕಪ್ ಫೈನಲ್ (T20 Worldcup Final) ಪಂದ್ಯ ಭಾರತ ಮತ್ತು ದಕ್ಷಿಣ ಆಫ್ರಿಕಾ (South Africa) ನಡುವೆ ನಡೆಯುತ್ತಿದ್ದು, ಕೋಟ್ಯಂತರ ಭಾರತೀಯರು ಅಭಿಮಾನಿಗಳು ‘ಗೆದ್ದು ಬಾ ಟೀಂ ಇಂಡಿಯಾ’ ಎಂದು ಶುಭ ಹಾರೈಸುತ್ತಿದ್ದಾರೆ. 11 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಭಾರತ ತಂಡ ಫೈನಲ್ಗೇರಿದೆ.

T20 Worldcup

ಭಾರತೀಯ ಕಾಲಮಾನದ ಪ್ರಕಾರ, ಇಂದು ರಾತ್ರಿ 8 ಗಂಟೆಗೆ ಬಾರ್ಬಡೋಸ್ ಬ್ರಿಡ್ಜ್ಟೌನ್ನ ಕೆನ್ಸಿಲ್ಟೌನ್ ಓವೆಲ್ನಲ್ಲಿ ಮೈದಾನದಲ್ಲಿ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ರೋಹಿತ್ ಶರ್ಮಾ (Rohit Sharma) ಪಡೆ ಸೆಣಸಾಡಲಿದೆ. ಇನ್ನೊಂದೆಡೆ 37 ವರ್ಷಗಳಿಂದ ಯಾವುದೇ ವಿಶ್ವಕಪ್ ಟೂರ್ನಿ ಗೆಲ್ಲದಿರುವ ದಕ್ಷಿಣ ಆಫ್ರಿಕಾ ತಂಡ ಈ ಬಾರಿಯಾದರೂ ವಿಶ್ವ ಕಪ್ ತಮ್ಮದಾಗಿಸಿಕೊಳ್ಳಲು ತೀವ್ರ ಹೋರಾಟ ನಡೆಸಲು ಸಿದ್ದತೆ ನಡೆಸಿದೆ.

ಭಾರತ ತಂಡ: ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ (Virat Kohli), ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರವೀಂದ್ರ ಜಡೇಜಾ (Ravindra Jadeja), ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಜಪ್ರಿತ್ ಬೂಮ್ರಾ

ದಕ್ಷಿಣ ಆಫ್ರಿಕಾ ತಂಡ: ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಏಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್ (David Millar), ಟ್ರಿಸ್ಟಾನ್ ಸ್ಟಬ್ಸ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಆನ್ರಿಚ್ ನಾರ್ಟ್ಜೆ, ತಬ್ರೈಜ್ ಶಮ್ಸಿ, ಒಟ್ನೀಲ್ ಬಾರ್ಟ್ಮನ್, ಜೆರಾಲ್ಡ್ ಕೋಟ್ಜೆ ಫಾರ್ಟುಯಿನ್, ರಯಾನ್ ರಿಕೆಲ್ಟನ್.

ಸ್ಥಳ: ಕೆನ್ಸಿಂಗ್ಟನ್ ಓವಲ್, ಬ್ರಿಡ್ಜ್ಟೌನ್
• ದಿನಾಂಕ: ಜೂನ್ 29
• ಸಮಯ: ರಾತ್ರಿ 8 ಗಂಟೆ (ಭಾರತೀಯ ಕಾಲಮಾನ)
• ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್ (Star Sports), ಡಿಡಿ, ಡಿಸ್ನಿ ಹಾಟ್ಸ್ಟಾರ್

Exit mobile version