Visit Channel

ತಡೆಗೋಡೆಗೆ ಕಾರು ಡಿಕ್ಕಿ: ಮಗು ಸೇರಿ ಮೂವರ ಸಾವು

WhatsApp Image 2020-12-26 at 12.11.18 PM

ಚಾಮರಾಜನಗರ, ಡಿ. 26: ಇಲ್ಲಿನ 150ಎ ರಾಷ್ಟ್ರೀಯ ಹೆದ್ದಾರಿಯ ಪಾಳ್ಯಗೇಟ್ ಸಮೀಪ ಶುಕ್ರವಾರ ನಿಯಂತ್ರಣ ಕಳೆದುಕೊಂಡ ಕಾರು ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಮೂರು ತಿಂಗಳ ಮಗು ಸೇರಿ ಇಬ್ಬರು ಮೃತಪಟ್ಟಿದ್ದಾರೆ.

ತಮಿಳುನಾಡು ಕೊಯಮತ್ತೂರಿನ ಉಕ್ಕಡಂನ ನಿವಾಸಿಯಾದ ಚಾಲಕ ಯಾಸೀನ್ ವಜೀರ್ (51) ಸ್ಥಳದಲ್ಲೇ ಮೃತಪಟ್ಟಿದ್ದು, ಅವರ ಮೂರು ತಿಂಗಳ ಹೆಣ್ಣು ಮಗು ಈರಾ ಫಾತಿಮಾ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಅಸುನೀಗಿದೆ.

ಕಾರಿನಲ್ಲಿದ್ದ ಯಾಸೀನ್ ವಜೀರ್ ಅವರ ಪತ್ನಿ ರಾಬಿಯಾ ಬೀ ತೀವ್ರವಾಗಿ ಗಾಯಗೊಂಡಿದ್ದು, ಅವರ ಮಕ್ಕಳಾದ ಸಫ್ರೀನ್, ಸಾನಾ ಮಾಜ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೂವರನ್ನು ಕೊಯಮತ್ತೂರಿನ ಕೆ. ಜಿ. ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಶುಕ್ರವಾರ ಮಧ್ಯಾಹ್ನ ಕೊಯಮತ್ತೂರಿನಿಂದ ಮೈಸೂರಿಗೆ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ನಿಯಂತ್ರಣ ಕಳೆದುಕೊಂಡು ಕಾರು ಬಲಬದಿಯ ಕಬ್ಬಿಣದ ತಡೆಗೋಡೆಗೆ ಹೊಡೆದಿದ್ದು, ರಭಸಕ್ಕೆ ಹೊಂಡೈ ಕಾರು ಸಂಪೂರ್ಣ ಜಖಂಗೊಂಡಿದೆ.

ಈ ಸಂಬಂಧ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest News

China Ship
ದೇಶ-ವಿದೇಶ

ಶ್ರೀಲಂಕಾ ಬಂದರಿನಲ್ಲಿ ಚೀನಾದ ಹಡಗು ; ಭಾರತದ ಕಳವಳಕ್ಕೆ 5 ಕಾರಣಗಳು ಇಲ್ಲಿವೆ!

ಮೊದಲಿನಿಂದಲೂ ಈ ಹಡಗು ಶ್ರೀಲಂಕಾ ಬಂದರಿಗೆ ಬರುವುದನ್ನು ಭಾರತ ತೀವ್ರವಾಗಿ ವಿರೋಧಿಸಿತ್ತು. ಭಾರತದ ಕಳವಳಕ್ಕೆ ಪ್ರಮುಖ 5 ಕಾರಣಗಳೆಂದರೆ,

bjp
ರಾಜಕೀಯ

ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ? : ಬಿಜೆಪಿ ಪ್ರಶ್ನೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ ಎಂದು ಬಿಜೆಪಿ ತಿಳಿಸಿದೆ.

Pingali
ಮಾಹಿತಿ

ನಮ್ಮ ರಾಷ್ಟ್ರಧ್ವಜವನ್ನು ನಿರ್ಮಿಸಿದ ಪಿಂಗಳಿ ವೆಂಕಯ್ಯ, ಮೊದಲು ಬ್ರಿಟಿಷ್ ಸೈನ್ಯದಲ್ಲಿದ್ದರು ; ಇಲ್ಲಿದೆ ಓದಿ ಅಚ್ಚರಿಯ ಮಾಹಿತಿ

ದೇಶಕ್ಕೊಂದು ಧ್ವಜಕೊಟ್ಟು 100 ವರ್ಷ ಕಳೆದರೂ ಪಿಂಗಳಿ ಅವರ ನೆನಪು ಅಜರಾಮರವಾಗಿದೆ. ಪಿಂಗಳಿ ವೆಂಕಯ್ಯ ಅವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಮುಂದೆ ಓದಿ.