
ಅಮಿತಾಭ್ ಬಚ್ಚನ್ಗೆ 79ನೇ ಹುಟ್ಟುಹಬ್ಬ, ಅಭಿಮಾನಿಗಳಿಂದ ಶುಭಾಷಯಗಳ ಮಹಾಪೂರ
ನಿರ್ಮಾಪಕ ಆನಂದ್ ಪಂಡಿತ್ ಅವರ ಮನೆಯಲ್ಲಿ ಈ ಬಾರಿ ಅಮಿತಾಭ್ ಬಚ್ಚನ್ ಜನ್ಮದಿನವನ್ನು ಆಚರಿಸಲಾಗಿದೆ. ಈ ಪಾರ್ಟಿಗೆ ತೆರಳುತ್ತಿರುವಾಗ ಕ್ಲಿಕ್ಕಿಸಿದ ಫೋಟೋವನ್ನು ಬಿಗ್ ಬಿ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ‘80ರ ಕಡೆಗೆ ಪಯಣ’ ಎಂದು ಅವರು ಈ ಪೋಟೋಗೆ ಕ್ಯಾಪ್ಷನ್ ನೀಡಿದ್ದಾರೆ. ಕೆಲವೇ ಗಂಟೆ ಕಳೆಯುವುದರೊಳಗೆ ಇನ್ಸ್ಟಾಗ್ರಾಮ್ನಲ್ಲಿ ಈ ಫೋಟೋಗೆ 7 ಲಕ್ಷಕ್ಕೂ ಅಧಿಕ ಮಂದಿ ಲೈಕ್ ಬಟನ್ ಒತ್ತಿದ್ದಾರೆ. ಅನೇಕ ಸೆಲೆಬ್ರಿಟಿಗಳು ಕಮೆಂಟ್ಗಳ ಮೂಲಕ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.