
ಒಮಿಕ್ರಾನ್ ಸೋಂಕು ಹಿನ್ನಲೆ, ಇಂದು ಸಿಎಂ ಮಹತ್ವದ ಸಭೆ
ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಲಿದ್ದಾರೆ. ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಕೆಲವೊಂದು ಮಹತ್ವದ ವಿಚಾರಗಳನ್ನು ತಿಳಿಸುವ ಸಾಧ್ಯತೆ ಇದೆ. ಸಿಎಂ ಬೊಮ್ಮಾಯಿ ಅವರು ಗುರುವಾರ ದಿಲ್ಲಿ ಪ್ರವಾಸ ಕೈಗೊಂಡಿದ್ದರು. ಈ ಸಂದರ್ಭದಲ್ಲಿ ಅವರು ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ ಶೆಖಾವತ್, ಮನ್ಸುಖ್ ಮಾಂಡವೀಯ, ಕಿರೆನ್ ರಿಜಿಜು ಮುಂತಾದವರನ್ನು ಭೇಟಿ ಮಾಡಿದ್ದರು.